Samsung Galaxy 23 ultra pro: ಯಬ್ಬೋ.. ಸ್ಯಾಮ್‌ಸಂಗ್ ಗ್ಯಾಲಕ್ಸಿಯಾ ಈ ದೈತ್ಯ ಮೊಬೈಲ್ ಬೆಲೆಯಲ್ಲಿ ಬಂಪರ್ ಡಿಸ್ಕೌಂಟ್- ಗ್ರಾಹಕರಿಗಂತೂ ಭರ್ಜರಿ ಉಳಿತಾಯ !!
latest news technology discount on Samsung Galaxy 23 ultra pro price
Samsung Galaxy 23 ultra pro: ಭಾರೀ ಜನಪ್ರಿಯತೆ ಪಡೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಮೊಬೈಲ್ ಗಳಲ್ಲಿ S ಸರಣಿ ಫೋನ್ ಅಂದ್ರೆ ಎಲ್ಲಿಲ್ಲದ ಬೇಡಿಕೆ. ಮಾರುಕಟ್ಟೆಗಳಲ್ಲಿ ಇವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್. ಹೆಚ್ಚಿನ ಡಿಮ್ಯಾಂಡ್ ಪಡೆದಿರುವ ಈ ಸರಣಿಯ ಫೋನ್‌ಗಳಲ್ಲಿ ಇತ್ತೀಚಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಫೋನ್ ಗ್ರಾಹಕರನ್ನು ತುಂಬಾ ಆಕರ್ಶಿಸಿದ್ದು, ಇದರ ಗ್ರಾಹಕರಿಗೀಗ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.
ಹೌದು, (Samsung Galaxy 23 ultra pro) ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಮೊಬೈಲ್ ಇದೀಗ ಸಖತ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ. ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಸ್ಮಾರ್ಟ್‌ಫೋನ್ ಬರೋಬ್ಬರಿ ಶೇ. 25% ರಷ್ಟು ರಿಯಾಯಿತಿ ಪಡೆದಿದೆ. ಪ್ಯಾಂಟಮ್ ಬ್ಲ್ಯಾಕ್ ಮತ್ತು ಕ್ರಿಮ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರುವ ಈ ಫೋನು ಗ್ರಾಹಕರನ್ನೂ ಒಂದೇ ನೋಟದಲ್ಲಿ ತನ್ನತ್ತು ಎಳೆಯುತ್ತಿದೆ.
ಸ್ಯಾಮ್‌ಸಂಗ್‌ನ ಈ ಫ್ಲ್ಯಾಗ್‌ಶಿಫ್ ಮೊಬೈಲ್ 12GB RAM + 256GB ಮತ್ತು 12GB RAM + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಹೀಗಾಗಿ 12 GB RAM + 256 GB ಸ್ಟೋರೇಜ್‌ನ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಬೆಲೆಯು 1,49,999ರೂ. ಆಗಿದ್ದು, ಈಗ ಆಫರ್‌ನಲ್ಲಿ 1,11,990ರೂ. ಗಳಿಗೆ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಇತರೆ ಬ್ಯಾಂಕ್ ಆಫರ್ ಸಹ ಲಭ್ಯವಾಗಲಿವೆ. ಗ್ರಾಹಕರು ಕೊಳ್ಳಲು ಮುಗಿಬೀಳುತ್ತಿದ್ದಾರೆ.
ಮೊಬೈಲ್ ವಿನ್ಯಾಸ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಮೊಬೈಲ್ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ ಡೈನಾಮಿಕ್ ರಿಫ್ರೆಶ್ ರೇಟ್ 1-120Hz ಸಪೋರ್ಟ್ ಪಡೆದಿದೆ. ಅಲ್ಲದೆ ಗೇಮ್ ಮೋಡ್‌ನಲ್ಲಿ 240Hz ಟಚ್ ಸ್ಯಾಂಪ್ಲಿಂಗ್ ರೇಟಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್ ಹಾಗೂ ವಿಷನ್ ಬೂಸ್ಟರ್ ಅನ್ನು ಒಳಗೊಂಡಿದೆ. ಜೊತೆಗೆ ಇದರೊಂದಿಗೆ 12GB RAM ಮತ್ತು 1TB ಆಂತರೀಖ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.
ಕ್ಯಾಮೆರಾ ರಚನೆ ಹೇಗಿದೆ?
• ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಮೊಬೈಲ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ,
• ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
• ಸೆಕೆಂಡರಿ ಕ್ಯಾಮೆರಾ 12 ಮೆಗಾಪಿಕ್ಸೆಲ್, ತೃತೀಯ ಕ್ಯಾಮೆರಾ 10 ಮೆಗಾಪಿಕ್ಸೆಲ್ ಹಾಗೂ ನಾಲ್ಕನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿವೆ.
• 12 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ.
ಬ್ಯಾಟರಿ ಬ್ಯಾಕಪ್ ಹೇಗುಂಟು?
ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 45W ವೈರ್ಡ್ ಚಾರ್ಜಿಂಗ್ ಮತ್ತು ಫಾಸ್ಟ್ ವಾಯರ್‌ಲೆಸ್ ಚಾರ್ಜಿಂಗ್ 2.0 ಅನ್ನು ಸಪೋರ್ಟ್ ಮಾಡುತ್ತದೆ. ಹೀಗಾಗಿ ಫೋನ್ ಅನ್ನು ಜಸ್ಟ್ 20 ನಿಮಿಷಗಳಲ್ಲಿ 65% ಚಾರ್ಜಿಂಗ್ ಮಾಡಬಹುದಾಗಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3 ಮತ್ತು USB ಟೈಪ್-C ಪೋರ್ಟ್ ಸೌಲಭ್ಯ ಇವೆ.
ಇದನ್ನು ಓದಿ: Job Recruitment: ಬ್ಯಾಂಕ್ ಪ್ರೆಸ್ ನಲ್ಲಿ ನೂರಾರು ವಿವಿಧ ಹುದ್ದೆಗಳು, ಲಕ್ಷ ತನಕ ಸಂಬಳ, ತ್ವರೆ ಮಾಡಿ