ಮಂಗಳೂರು:ಎ ಜೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಬೆಳ್ತಂಗಡಿಯ ಗರ್ಭಿಣಿ ಬಲಿ!! ಕುಟುಂಬಸ್ಥರ ಆಕ್ರೋಶದ ಮಧ್ಯೆ ಪೊಲೀಸ್ ಬಲ ಪ್ರಯೋಗ – ಎಲ್ಲಿದೆ ನ್ಯಾಯ?

ಮಂಗಳೂರು:ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎನ್ನುವ ಗಂಭೀರ ಆರೋಪ ವ್ಯಕ್ತವಾದ ಬೆನ್ನಲ್ಲೇ ಮಹಿಳೆಯ ಸಂಬಂಧಿಕರು ಪ್ರತಿಭಟಿಸಿದಾಗ ಪೊಲೀಸ್ ಬಲ ಪ್ರಯೋಗ ನಡೆದಿದ್ದು, ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಪ್ರದೀಪ್ ಆಚಾರ್ಯ ಎಂಬವರ ಪತ್ನಿ ಶಿಲ್ಪಾ ಆಚಾರ್ಯ ಮೃತ ದುರ್ದೈವಿಯಾಗಿದ್ದು, ಆಸ್ಪತ್ರೆಯ ವೈದ್ಯರಾದ ವೀಣಾ ಭಗವಾನ್, ಡೀನ್ ಅಶೋಕ್ ಹೆಗ್ಡೆ,  ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆ ವಿವರ:ತುಂಬು ಗರ್ಭಿಣಿ ಮಹಿಳೆ ಶಿಲ್ಪಾ ಆಚಾರ್ಯ ಚೊಚ್ಚಲ ಹೆರಿಗೆಗಾಗಿ ಮಂಗಳೂರಿನ ಹೆಸರಾಂತ ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಕರ್ತವ್ಯದಲ್ಲಿದ್ದ ವೈದ್ಯರು ಸಿಝರಿನ್ ಮೂಲಕ ಹೆರಿಗೆ ಮಾಡಿಸಬೇಕು ಎಂದು ಹೇಳಿದ್ದರು ಎನ್ನಲಾಗಿದೆ. ಈ ವೇಳೆ ಅಲ್ಲಿನ ಮಹಿಳಾ ವೈದ್ಯೆ ವೀಣಾ ಭಗವಾನ್ ಎಂಬವರಿಗೆ ಕರೆ ಮಾಡಿದಾಗ ಭಾನುವಾರದ ಕಾರಣ ಹೇಳಿದ್ದರು.

ಈ ವೇಳೆ ಬೇರೊಬ್ಬ ವೈದ್ಯರು ಹೆರಿಗೆ ಮಾಡಿಸಿದ್ದು, ಹೆಣ್ಣು ಮಗುವಿನ ಜನನದ ಬಳಿಕ ಗರ್ಭಕೋಶವನ್ನೇ ತೆಗೆಯಬೇಕು ಎನ್ನುವ ಸೂಚನೆ ಕುಟುಂಬಕ್ಕೆ ಶಾಕ್ ನೀಡಿದೆ. ಎರಡು ದಿನಗಳ ಬಳಿಕ ಬಾಣಂತಿಗೆ ಜ್ವರ ಬಂದಿದ್ದು, ಕೂಡಲೇ ಐಸಿಯು ಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಮೇಜರ್ ಬ್ರೈನ್ ಡ್ಯಾಮೇಜ್ ಆಗಿದೆ ಎಂದು ವೈದ್ಯ ಮೂಲಗಳು ತಿಳಿಸಿವೆ.

ಆದರೆ ಜುಲೈ 25 ರಂದು ಬಾಣಂತಿ ಶಿಲ್ಪಾ ಆಚಾರ್ಯ ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷಕ್ಕೆ ಆಕೆಯ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.ಈ ಬಗ್ಗೆ ಆಕೆಯ ಪತಿ ಠಾಣೆಗೆ ದೂರು ನೀಡಿದ ಬಳಿಕ ಮಳೆಯ ನಡುವೆಯ ಆಸ್ಪತ್ರೆಯ ಮುಂಭಾಗದಲ್ಲಿ ಆಡಳಿತ ಮಂಡಳಿಯ ಮಧ್ಯಪ್ರವೇಶಕ್ಕಾಗಿ ಪ್ರತಿಭಟಿಸಲಾಯಿತು.

ಈ ವೇಳೆ ಪೊಲೀಸ್ ಬಲ ಪ್ರಯೋಗ ನಡೆದಿದೆ ಎನ್ನುವ ಆರೋಪವೂ ಕೇಳಿ ಬಂದಿದ್ದು,ಚೊಚ್ಚಲ ಹೆರಿಗೆಗೆ ದಾಖಲಾದ ಗರ್ಭಿಣಿಯ ಸಾವಿಗೆ ನ್ಯಾಯ ಕೇಳಿದಾಗ ಪೊಲೀಸರು ಬಲ ಪ್ರಾಯೋಗಿಸಿ ಶವ ಸಾಗಿಸಿದ್ದಾರೆ ಎನ್ನುವ ಗಂಭೀರ ಆರೋಪ ವ್ಯಕ್ತವಾಗುವ ಮಧ್ಯೆ ಎ.ಜೆ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ನಾಗರೀಕ ಸಮಾಜ ಆಕ್ರೋಶ ಹೊರಹಾಕಿದೆ.

Leave A Reply

Your email address will not be published.