DCM DK Shivakumar: ಪಂಚ ಗ್ಯಾರಂಟಿ ಎಫೆಕ್ಟ್‌! ಈ ಬಾರಿ ಕರ್ನಾಟಕದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ- ಡಿಕೆಶಿ

Latest news poliics DK Shivakumar says Karnataka cannot develop this year with Congress government

D K Shivakumar: ಕರ್ನಾಟಕ ಸರ್ಕಾರ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ್ದ, ಪಂಚ ಗ್ಯಾರಂಟಿಗಳನ್ನು (congress guarantee) ಅನುಷ್ಠಾನ ಮಾಡಿರುವುದರಿಂದಾಗಿ ಈ ವರ್ಷ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕೆಲಸ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್(D K Shivakumar) ಹೇಳಿದ್ದಾರೆ.

ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ, ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ತಮ್ಮ ಪಕ್ಷದ ಅಸಮಾಧಾನಿತ ಶಾಸಕರನ್ನು ಉದ್ದೇಶಿಸಿ ಅವರು ಈ ಹೇಳಿಕೆ ನೀಡಿದ್ದಾರೆ. ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಉಚಿತ ‘ಗ್ಯಾರಂಟಿ’ಗಳನ್ನು ಈಡೇರಿಸಲು ಹಣಕಾಸಿನ ಅಡಚಣೆಯಾಗುವುದನ್ನು ಶಾಸಕರು ಅರ್ಥಮಾಡಿಕೊಳ್ಳಬೇಕೆಂಬ ದೃಷ್ಟಿಯಿಂದ ಈ ಮಾತು ಹೇಳಿದ್ದಾರೆ ಎನ್ನಲಾಗಿದೆ.

ನಾವು ಈ ವರ್ಷ 5 ಗ್ಯಾರಂಟಿಗಳಿಗಾಗಿ 40,000 ಕೋಟಿ ರೂಪಾಯಿಗಳನ್ನು ಮೀಸಲಿಡಬೇಕಾಗಿದೆ. ಹೀಗಾಗಿ ಈ ವರ್ಷ ನಾವು ಅಭಿವೃದ್ಧಿಯನ್ನು ನೀಡಲು ಸಾಧ್ಯವಿಲ್ಲ. ನೀರಾವರಿ ಮತ್ತು ಸಾರ್ವಜನಿಕ ಕೆಲಸಗಳಲ್ಲಿಯೂ ಸಹ ಅಭಿವೃದ್ಧಿಗೆ ಹಣ) ನೀಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಮ್ಮ ಸಂಪುಟದ ಸಚಿವರಿಗೆ ತಾಳ್ಮೆಯಿಂದ ಇರುವಂತೆ ಸೂಚಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿರುವುದಾಗಿ ಮಾಹಿತಿ ಲಭಿಸಿದೆ.

ಹಿಂದಿನ ಬಿಜೆಪಿ ಸರ್ಕಾರವನ್ನು(BJP government) ದೂಷಿಸಿದ ಉಪಮುಖ್ಯಮಂತ್ರಿ ಶಿವಕುಮಾರ್, ಹಿಂದಿನ ಬಿಜೆಪಿ ಸರ್ಕಾರ ಬೊಕ್ಕಸವನ್ನು ಬರಿದುಮಾಡಿತು. ಹೆಚ್ಚುವರಿ ಟೆಂಡರ್‌ಗಳನ್ನು ಕರೆಯಲಾಗಿತ್ತು. ಅದರ ಪರಿಣಾಮವಾಗಿ ಖಜಾನೆ ಖಾಲಿಯಾಗಿದೆ ಎಂದು ಹೇಳಿದ್ದಾರೆ. ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಮ್ಮ ಭರವಸೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಮೊದಲ ವರ್ಷದಲ್ಲಿ ನಾವು ನಮ್ಮ ಮಾತನ್ನು ಉಳಿಸಿಕೊಂಡಿದ್ದೇವೆ. ಆದ್ದರಿಂದ, ಒಂದು ವರ್ಷಕ್ಕೆ ಅನುದಾನ ಕೇಳದಂತೆ ಎಲ್ಲರೂ ತಾಳ್ಮೆಯಿಂದಿರಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಸಿದ್ದರಾಮಯ್ಯ (CM Siddaramaiah) ಅವರು 2023-24 ಬಜೆಟ್ ಅನ್ನು ಮಂಡಿಸಿದರು, ಇದರಲ್ಲಿ ಅವರು ಕಾಂಗ್ರೆಸ್‌ನ ಐದು ಗ್ಯಾರಂಟಿಗಳಾದ ಗೃಹ ಜ್ಯೋತಿ (Gruha Jyothi), ಗೃಹ ಲಕ್ಷ್ಮಿ (Gruhalakshmi Scheme) , ಅನ್ನ ಭಾಗ್ಯ (Anna Bhagy), ಶಕ್ತಿ ಯೋಜನೆ(Shakti scheme)ಮತ್ತು ಯುವ ನಿಧಿಗೆ(Yuva nidhi) 35,000 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ. ಇದರಿಂದಾಗಿ 12,522 ಕೋಟಿ ರೂ. ಆದಾಯ ಕೊರತೆ ಹಾಗೂ ಸಾಲ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

 

ಇದನ್ನು ಓದಿ: Daily horoscope: ಇಂದು ಈ ರಾಶಿಯವರಿಗೆ ಎಲ್ಲಾ ವರ್ಗದವರಿಗೂ ಅನುಕೂಲಕರ ವಾತಾವರಣ ಇರುತ್ತದೆ! 

Leave A Reply

Your email address will not be published.