Gruha lakshmi Scheme: ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆ ಯಜಮಾನಿ ಮೃತಪಟ್ಟಿದ್ರೆ ದುಡ್ಡು ಯಾರ ಕೈಗೆ ಸೇರುತ್ತೆ? ಇಲ್ಲಿದೆ ಉತ್ತರ!!
Latest Karnataka news Congress guarantee important information about gruha Lakshmi scheme
Gruha lakshmi Scheme: ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರಕಾರವು ‘ಗೃಹಲಕ್ಷ್ಮಿ’ ಯೋಜನೆ ಆರಂಭಿಸಿದೆ. ಬಹು ನಿರೀಕ್ಷಿತ ಹಾಗೂ ಕಾತುರದಿಂದ ಕಾಯುತ್ತಿರುವ ಗೃಹಲಕ್ಷ್ಮಿ ಯೋಜನೆಗೆ (GruhaLakshmi Scheme) ಜುಲೈ 19ರಿಂದ ಅರ್ಜಿ ಹಾಕಲು ಸರ್ಕಾರ ಚಾಲನೆ ನೀಡಿದ್ದು ಈಗಾಗಲೇ ಲಕ್ಷಾಂತರ ಮಹಿಳೆಯರು ನೊಂದಾವಣಿ ಮಾಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ ( Gruha Lakshmi Scheme) ಹಾಗೂ ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆಯಲು ರೇಷನ್ ಕಾರ್ಡ್ ನಲ್ಲಿ (Ration Card) ಕುಟುಂಬದ ಯಜಮಾನಿ ಮಹಿಳೆ ಎಂಬುದಾಗಿ ಇರಬೇಕು. ಆದರೆ, ಕೆಲ ಕಾರ್ಡ್ದಾರರ ಮನೆ ಯಜಮಾನಿ ಸಾವನ್ನಪ್ಪಿರೋದು ಇದೆ. ಹಾಗಾದ್ರೇ ಇಂತಹ ಸಂದರ್ಭದಲ್ಲಿ ಯಾರಿಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗಲಿದೆ?. ಇಲ್ಲಿದೆ ನೋಡಿ ಉತ್ತರ.
ಪಡಿತರ ಕಾರ್ಡ್ ನಲ್ಲಿ ಇರುವಂತ ಮನೆಯ ಯಜಮಾನಿ ಒಂದು ವೇಳೆ ಮೃತಪಟ್ಟರೇ ಅಂತಹವರ ಹೆಸರನ್ನು ಕಾರ್ಡ್ ನಿಂದ ತೆಗೆದು ಹಾಕುವುದಕ್ಕೆ ತಿದ್ದುಪಡಿಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ನೀವು ಮನೆಯ ಯಜಮಾನಿ ಮಹಿಳೆ ಯಾರು ಎಂಬುದಾಗಿ ಬದಲಾವಣೆ ಮಾಡುತ್ತೀರಾ ಅವರಿಗೆ ಗೃಹ ಲಕ್ಷ್ಮಿ ಯೋಜನೆಯ 2000 ರೂ ಹಣ ಸಿಗಲಿದೆ. ಹೀಗಾಗಿ ಕಾರ್ಡ್ ನಲ್ಲಿ ತಿದ್ದುಪಡಿ ಇದ್ದರೇ, ಬೇಗ ಸರಿ ಮಾಡಿಕೊಳ್ಳುವುದು ಒಳಿತು.
ಮರಣ ಹೊಂದಿದವರ ಹೆಸರನ್ನು ಪಡಿತರ ಚೀಟಿಗಳಲ್ಲಿ ತೆಗೆದು ಹಾಕಲು, ಕುಟುಂಬದ ಯಜಮಾನರ ಹೆಸರನ್ನು ಬದಲಾವಣೆ ಮಾಡಲು, ನಿನ್ನೆಯಿಂದ ನ್ಯಾಯಬೆಲೆ ಅಂಗಡಿಯಲ್ಲಿ ಅವಕಾಶವನ್ನು ನೀಡಲಾಗಿದೆ. ರಾಜ್ಯದ ಜನರು ತಮ್ಮ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ, ರೇಷನ್ ಕಾರ್ಡ್ ನಲ್ಲಿ ಮೃತ ಕುಟುಂಬದ ಹೆಸರನ್ನು ತೆಗೆಸಿ ಹಾಕಿ, ಹಾಲಿ ಕಾರ್ಡ್ ನಲ್ಲಿ ಇರುವಂತ ಸದಸ್ಯರೊಬ್ಬರನ್ನು ಮುಖ್ಯಸ್ಥರನ್ನಾಗಿ ಬದಲಾವಣೆ ಮಾಡಿಸಬಹುದಾಗಿದೆ.
ರೇಷನ್ ಕಾರ್ಡ್ ಗೆ ಹೊಸ ಕುಟುಂಬ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳೇನು ?
• ಕುಟುಂಬದ ಯಜಮಾನರ ಬಳಿ ರೇಷನ್ ಕಾರ್ಡ್ ಹಾಗೂ ಅದರ
ಜೆರಾಕ್ಸ್ ಪ್ರತಿ
• ಮಗುವಿನ ಅಥವಾ ಕುಟುಂಬದ ಹೊಸ ಸದಸ್ಯರ ಜನನ
ಪ್ರಮಾಣ ಪತ್ರ ಆಧಾರ್ ಕಾರ್ಡ್
• ಮಗುವಾಗಿದಲ್ಲಿ ಪೋಷಕರ ಆಧಾರ್ ಕಾರ್ಡ್,
• ಹೊಸ ವಿವಾಹಿತ ಮಹಿಳೆಯಾಗಿದ್ದರೆ ಆಧಾರ್ ಕಾರ್ಡ್, ವಿವಾಹ ಪ್ರಮಾಣಪತ್ರ, ತನ್ನ ಪೋಷಕರ ರೇಷನ್ ಕಾರ್ಡ್ ಅನ್ನು
ಹೊಂದಿರಬೇಕಾಗುತ್ತದೆ.
ರೇಷನ್ ಕಾರ್ಡ್ ಗೆ ಹೊಸ ಸದಸ್ಯರ ಸೇರ್ಪಡೆಗೆ ಅರ್ಜಿ ಸಲ್ಲಿಕೆ:
• kar.nic.in ವೆಬ್ ಸೈಟ್ ಗೆ ಭೇಟಿ ನೀಡಿ.
• ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.
• ಹೋಮ್ ಪೇಜ್‌ನಲ್ಲಿರುವ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವ ಆಯ್ಕೆ ಒತ್ತಿ ಕ್ಲಿಕ್ ಮಾಡಿ,
• ಹೊಸ ಕುಟುಂಬ ಸದಸ್ಯರ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿಕೊಳ್ಳಿ
• https://ahara.kar.nic.in/Home/EServices ಗೂ
ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
• ಪಡಿತರ ಚೀಟಿ ಆಯ್ಕೆ ಆ ಬಳಿಕ, ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆಗೆ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ.
• ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆಗಾಗಿ ಅರ್ಜಿಯನ್ನು ಸಲ್ಲಿಸಿ.
ಗೃಹಲಕ್ಷ್ಮಿ ಯೋಜನೆಗೆ ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು ?
• ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಗ್ರಾಮದ ಸಮೀಪವಿರುವ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಹೋಗಬೇಕು.
• ನಗರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಸಮೀಪದ ಕರ್ನಾಟಕ ಒನ್, ವಾರ್ಡ ಕಛೇರಿ, ಸ್ಥಳಿಯ ನಗರಾಡಳಿತ ಸಂಸ್ಥೆಯ ಕಛೇರಿ, ಗೃಹಲಕ್ಷ್ಮೀ ನೋಂದಣಿ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಸಹಾಯವಾಣಿ:
ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಏನಾದರೂ ಗೊಂದಲಗಳು ಇದ್ದರೆ ಹೆಲ್ಪ್ ಲೈನ್ ಸಂಖ್ಯೆ – 1902ಕ್ಕೆ ಕರೆ ಮಾಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅಲ್ಲದೆ ಈ ಸಂಬಂಧ ಯಾವುದೇ ಮಾಹಿತಿಯನ್ನಾದರೂ ಕೇಳಿ ಪಡೆದುಕೊಳ್ಳಲು ಹಾಗೂ ವಂಚನೆ ಪ್ರಕರಣಕ್ಕೆ ಕಡಿವಾಣ ಹಾಕಲು ಪಡಿತರ ಚೀಟಿಯ ಸಂಖ್ಯೆಯನ್ನು 8147500500 ಈ ಸಂಖ್ಯೆ ಎಸ್‌ಎಂಎಸ್ ಮಾಡಬಹುದು.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಲಾಗಿನ್ ಐಡಿಯ ಕುರಿತು ಮಹತ್ವದ ಮಾಹಿತಿ! ತಪ್ಪದೇ ಓದಿ