CT Ravi: ಸಿಟಿ ರವಿಯವರಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಹುದ್ದೆ ಕುರಿತು ಸ್ಫೋಟಕ ಹೇಳಿಕೆ!
Latest Karnataka political news Will not aspirant for Karnataka BJP president post says CT Ravi
CT Ravi: ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ (Karnataka BJP President Post) ಹೊಸಬರನ್ನು ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಸಿಟಿ ರವಿ (CT Ravi) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಬೆನ್ನಲ್ಲೆ ಇದೀಗ ಸಿಟಿ ರವಿಯವರಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಹುದ್ದೆ ಕುರಿತು ಸ್ಪೋಟಕ ಹೇಳಿಕೆ ಹೊರಬಿದ್ದಿದೆ.
ಸಿಟಿ ರವಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಫಿಕ್ಸ್, ಹೈಕಮಾಂಡ್ನಿಂದ ಅಧಿಕೃತ ಘೋಷಣೆ ಅಷ್ಟೇ ಬಾಕಿ ಇದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ, ಇದೀಗ ಕರ್ನಾಟಕ ಬಿಜೆಪಿ ಅಧ್ಯಕ್ಷ ಹುದ್ದೆ ಬಗ್ಗೆ ಸಿಟಿ ರವಿ ಹೇಳಿಕೆ ಅಚ್ಚರಿ ಮೂಡಿಸಿದೆ.
ಬೆಂಗಳೂರಿನಲ್ಲಿ ಇಂದು (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಜವಾಬ್ದಾರಿಯುತವಾದದ್ದು. ಈ ಹುದ್ದೆಯ ಬಗ್ಗೆ ಪಕ್ಷ ನಿರ್ಧರಿಸುತ್ತದೆ. ಅದನ್ನು ಕೇಳಿ ಪಡೆಯುವಂತದ್ದಲ್ಲ ಎಂದು ಹೇಳಿದರು.
ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಪಕ್ಷದ ಯಾವುದೇ ಹುದ್ದೆ, ಅಧಿಕಾರ ಶಾಶ್ವತ ಅಲ್ಲ. ಈವರೆಗೂ ಪಕ್ಷ ನೀಡಿದ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ನಾನೀಗ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ಮುಂದೆ ಪಕ್ಷದ ಕಾರ್ಯಕರ್ತನಾಗಿ ನನ್ನ ಕೆಲಸ ಮುಂದುವರಿಸುತ್ತೇನೆ ಎಂದರು.
ಇದನ್ನೂ ಓದಿ: Zilla Panchayat: ಜಿಲ್ಲಾ ಪಂಚಾಯಿತಿಗಳ ಗಡಿ ನಿಗದಿ ಮಾಡಲು ಮಾರ್ಗಸೂಚಿ ಪ್ರಕಟ !