ಮಂಗಳೂರು : ಕೆಎಸ್‌ಆರ್‌ಟಿಸಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ
Job requirements Mangalore Application invitation for KSRTC teacher training
KSRTC: ರಾಜ್ಯ ರಸ್ತೆ ಸಾರಿಗೆ ನಿಗಮದ ( KSRTC) ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್ಸೆಸ್ಸೆಲ್ಸಿ ಅಥವಾ ಐ.ಟಿ.ಐನ ಮೆಕ್ಯಾನಿಕ್ ಡೀಸೇಲ್, ಎಲೆಕ್ನಿಷಿಯನ್, ಮಷಿನಿಷ್ ಎಲೆಕ್ಟೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಮೋಟಾರ್ ವೆಹಿಕಲ್ ಬಾಡಿ ಬಿಲ್ಡರ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆ.25ರೊಳಗೆ ನಗರದ ಬಿಜೈ ನಲ್ಲಿರುವ ಕರಾರಸಾನಿ, ಮಂಗಳೂರು ವಿಭಾಗೀಯ ಕಚೇರಿಗೆ ಅರ್ಜಿ ಸಲ್ಲಿಸಿ, ಸೆ. 11ರಂದು ಬೆಳಗ್ಗೆ 10 ಗಂಟೆಗೆ ಮೂಲ ದಾಖಲಾತಿ ಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಲು ನಿಗಮದ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.