Gruha Jyothi: ಶೂನ್ಯ ಮೀಟರ್ ಸ್ಟಾರ್ಟ್ ಆಗಿದೆ, ನೀವೂ ಅರ್ಹರಾ – ಈ ಚೆಕ್ ಲಿಸ್ಟ್ ನೋಡಿ !

Latest Karnataka news Congress guarantee gruha jyoti Scheme latest update

Gruha jyothi scheme: ಗೃಹಜ್ಯೋತಿ (Gruha jyothi yojana) ಯೋಜನೆಗೆ, ಆಗಸ್ಟ್ 5 ರಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ನಿನ್ನೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮಾಹಿತಿ ನೀಡಿದ್ದಾರೆ.

ಆದರೆ ಬಹುತೇಕ ಜನ ಈ ನಡುವೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಈ ಯೋಜನೆಗೆ ತಾವು
ಅರ್ಹರಾಗಿದ್ದೇವೆಯೇ ಎನ್ನುವುದು ಜನರಲ್ಲಿ ಗೊಂದಲ ಉಂಟಾಗಿದೆ. ಇದಕ್ಕೆಲ್ಲ ನಿನ್ನೆ ಸಚಿವರೇ ಉತ್ತರ ನೀಡಿದ್ದು ಅದರ ವಿವರ ಈ ಕೆಳಕಂಡತಿದೆ.

ಈಗಾಗಲೇ 2022- 2023 ಹಣಕಾಸು ವರ್ಷದ ಸರಾಸರಿ ಬಳಕೆಯನ್ನು ಪರಿಗಣಿಸಿ, ಪ್ರತಿ ಗ್ರಾಹಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ 10 ಪ್ರತಿಶತವನ್ನು ನೀಡುವ ಮೂಲಕ ಮಾಸಿಕ ವಿದ್ಯುತ್ ಬಳಕೆಯ ಅಂದಾಜು ನಿರ್ಧರಿಸಲಾಗಿದೆ. ಅದಲ್ಲದೆ ಗರಿಷ್ಠ ಉಚಿತ ವಿದ್ಯುತ್ ಬಳಕೆಯ ಮಿತಿಯನ್ನು 200 ಯುನಿಟ್‌ಗಳಿಗೆ ನಿರ್ಬಂಧ ಮಾಡಲಾಗಿದೆ.

ನೀವು ಸರಾಸರಿ ಬಳಸುವ ಯೂನಿಟ್ ವಿದ್ಯುತ್ 200 ಯೂನಿಟ್ ಕಡಿಮೆಯಿದ್ದರೆ, ಮನೆಯ ಗ್ರಾಹಕರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಸರಾಸರಿಗಿಂತ ಹೆಚ್ಚಿನ ಯೂನಿಟ್ ಬಳಸಿದರೆ, ಹೆಚ್ಚುವರಿ ಯೂನಿಟ್‌ಗೆ ಮಾತ್ರ ಶುಲ್ಕ ವಿಧಿಸಲಾಗುತ್ತದೆ. ಆದರೆ, 200ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಪೂರ್ಣ ಶುಲ್ಕ ಪಾವತಿಸಬೇಕಾಗುತ್ತದೆ.

ಗೃಹ ಜ್ಯೋತಿ ಯೋಜನೆಯ ಪ್ರಮುಖ ವಿವರಗಳು:
ರಾಜ್ಯದ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್‌ಗಳ ವಿದ್ಯುತ್ ಬಳಕೆ ಉಚಿತ. ಆದ್ರೆ ಈ ಯೋಜನೆಯು ವಾಣಿಜ್ಯ ಗ್ರಾಹಕರಿಗೆ ಅನ್ವಯಿಸುವುದಿಲ್ಲ.

2022- 2023ರ ಹಣಕಾಸು ವರ್ಷದ ಸರಾಸರಿ ವಿದ್ಯುತ್ ಬಳಕೆಯನ್ನು ಗಣನೆಗೆ ತೆಗೆದುಕೊಂಡು ಪ್ರತಿ ಗ್ರಾಹಕರ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ 10 ಪ್ರತಿಶತವನ್ನು ಮಾಸಿಕ ವಿದ್ಯುತ್ ಬಳಕೆಯ ಅಂದಾಜು ನಿರ್ಧರಿಸಲಾಗಿದೆ. ಗರಿಷ್ಠ ಉಚಿತ ವಿದ್ಯುತ್ ಬಳಕೆಯ ಮಿತಿಯನ್ನು 200 ಯುನಿಟ್‌ಗಳಿಗೆ ಇಡಲಾಗಿದೆ.

ಪ್ರತಿ ಬಳಕೆದಾರರಿಗೆ ನಿಗದಿಪಡಿಸಲಾದ ತಿಂಗಳ ಸರಾಸರಿ ಯೂನಿಟ್‌ಗೆ ವಿದ್ಯುತ್ ಬಳಕೆ ಮಾಡುವ ಗ್ರಾಹಕರ ಬಿಲ್ ಮೊತ್ತವು ಶೂನ್ಯವಾಗಿದೆ.

ನಿಗದಿತ ಸರಾಸರಿ ಬಳಕೆಯ ಮಿತಿ ಮೀರಿದರೂ 200 ಯೂನಿಟ್
ಒಳಗಿದ್ದರೆ ಹೆಚ್ಚುವರಿ ಯೂನಿಟ್‌ಗೆ ಮಾತ್ರ ಶುಲ್ಕ ಪಾವತಿಸಲಾಗುತ್ತದೆ.

ಗ್ರಾಹಕರು ಮಾಸಿಕ ಸರಾಸರಿ ಬಳಕೆ 200 ಯುನಿಟ್‌ಗಳನ್ನು ಮೀರಿದರೆ ಬಿಲ್‌ನ ಸಂಪೂರ್ಣ ಮೊತ್ತವನ್ನು ಪಾವತಿಸಬೇಕಾಗುತ್ತದೆ.

ಯೋಜನೆಗೆ ಲಾಭ ಬಯಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಬಹುದು.

ಗ್ರಾಹಕರು ತಮ್ಮ ಆಧಾರ್ ಸಂಖ್ಯೆಗಳನ್ನು ಬಿಲ್‌ನಲ್ಲಿ ನಮೂದಿಸಲಾದ ಗ್ರಾಹಕ ಐಡಿ ಅಥವಾ ಖಾತೆ ಐಡಿಯನ್ನು ಲಿಂಕ್ ಮಾಡಬೇಕು.

ಭಾಗ್ಯ ಜ್ಯೋತಿ/ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಫಲಾನುಭವಿಗಳನ್ನು ಹೊಸದಾಗಿ ಪ್ರಾರಂಭಿಸಲಾದ ಗೃಹ ಜ್ಯೋತಿ ಯೋಜನೆಗೆ ಜೋಡಿಸಲಾಗಿದೆ.

ಯೋಜನೆ ಕಾರ್ಯಗತಗೊಳಿಸಲು ಸರ್ಕಾರವು ಗೃಹ ಜ್ಯೋತಿ ಸಬ್ಸಿಡಿ ಮೊತ್ತ ಮತ್ತು ಈಪಿಪಿ0ಅ
ಮೊತ್ತವನ್ನು ಎಲ್ಲಾ ಎಸ್ಕಾಂಗಳಿಗೆ ಮುಂಚಿತವಾಗಿ ಪಾವತಿಸುತ್ತದೆ.

ಗೃಹ ಜ್ಯೋತಿ ನೋಂದಣಿ ಮಾಡುವ ಕೊನೆಯ ದಿನಾಂಕವನ್ನು ಇನ್ನೂ ನಿರ್ಧಾರ ಮಾಡಿಲ್ಲ. ಈ ನಿಟ್ಟಿನಲ್ಲಿ ಅರ್ಹತೆ ಉಳ್ಳವರು ಲಾಭ ಪಡೆದುಕೊಳ್ಳಬಹುದು ಎಂದು ಸಚಿವ ಜಾರ್ಜ್​ ತಿಳಿಸಿದ್ದಾರೆ.

ಇದನ್ನೂ ಓದಿ: ಚಂದುಳ್ಳಿ ಚೆಲುವೆಯಿಂದಲೇ ನಡೆಯುತ್ತಿತ್ತು ಹನಿಟ್ರ್ಯಾಪ್!! ವಿಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಿದಾಕೆಯ ಸಹಿತ ಖತರ್ನಾಕ್ ಗ್ಯಾಂಗ್ ಅರೆಸ್ಟ್

Comments are closed.