Vande Bharat Train: ಮಂಗಳೂರು – ಬೆಂಗಳೂರು, ಗೋವಾ ವಂದೇ ಭಾರತ್ ರೈಲು, ಪ್ರಾರಂಭ ಯಾವಾಗ ಗಮನಿಸಿ !
Nalin Kumar kateel says vande Bharat to start soon from Mangaluru to Bengaluru
Vande Bharat train : ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರಕಾರ ದೇಶಾದ್ಯಂತ 508 ರೈಲು ನಿಲ್ದಾಣಗಳನ್ನು ಮರು ಅಭಿವೃದ್ಧಿಗೊಳಿಸುತ್ತಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ (Nalin Kumar katil) ಮಂಗಳೂರು- ಗೋವಾ ವಂದೇ ಭಾರತ್ ರೈಲು ಆರಂಭಿಸಲು ರೈಲ್ವೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರು- ಬೆಂಗಳೂರು (manglore-banglore) ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡ ತಕ್ಷಣ ವಂದೇ ಭಾರತ್ ರೈಲು (Vande Bharat train) ಸಂಚಾರ ಆರಂಭವಾಗಲಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು 19.32 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ನಿರ್ಮಾಣಗೊಳ್ಳಲಿದ್ದು, ಒಂದು ವರ್ಷದ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಅವಧಿ ನಿಗದಿಪಡಿಸಲಾಗಿದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಶಾಸಕ ಡಿ.ವೇದವ್ಯಾಸ ಕಾಮತ್, ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಎರಡು ರಸ್ತೆಗಳು ಕಿರಿದಾಗಿದೆ. ಹಾಗಾಗಿ 40 ಅಡಿ ಅಗಲದ ರಸ್ತೆ ನಿರ್ಮಾಣ ಮಾಡಲಾಗುವುದು. ಇನ್ನು ತಿಂಗಳಿಗೊಮ್ಮೆ ರೈಲ್ವೆ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ವಿಲೇವಾರಿ ಮಾಡಲಿದ್ದಾರೆ ಎಂದರು.
2023-24ರ ಬಜೆಟ್ ಘೋಷಣೆಯಂತೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ, ಸೆಂಟ್ರಲ್ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಮಾಡಲಾಗುವುದು ಎಂದು ಘೋಷಿಸಲಾಗಿತ್ತು. ಇತರ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಬೇಗನೆ ಕೈಗೆತ್ತಿಕೊಳ್ಳಲಾಗುವುದು ಎಂದು ನಳಿನ್ ಹೇಳಿದರು.
ಇದನ್ನೂ ಓದಿ: Sim Number Portability: ನಿಮ್ಮಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಿಕೊಳ್ಳಬಹುದು, ಟ್ರಾಯ್ ತಂದಿದೆ ಹೊಸ ನಿಯಮ !
Comments are closed.