Department of fisheries: ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

Government news department of fisheries application invitation for various schemes

Department of fisheries: ಮಂಗಳೂರು: ಮೀನುಗಾರಿಕೆ ಇಲಾಖೆಯ (Department of fisheries)ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಮತ್ತು ರಾಜ್ಯ ವಲಯ ಯೋಜನೆಯಡಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಅಂಗವಿಕಲರಿಗೆ ವಿವಿಧ ಯೋಜನೆಗಳನ್ನು ಅನು ಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೀನುಗಾರಿಕೆಯಲ್ಲಿ ಅನುಭವ ಹೊಂದಿರುವ ಅರ್ಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್‌ಗಳನ್ನು, ಸಾಮಾನ್ಯ ವರ್ಗದವರಿಗೆ ಮೀನು ಮಾರಾಟ ವಾಹನ ಖರೀದಿಗೆ ಸಹಾಯ, ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ ಸಾಮಗ್ರಿಗಳನ್ನು ಹಾಗೂ ಮೀನು ಕೃಷಿ ಕೊಳಗಳ ನಿರ್ಮಾಣಕ್ಕೆ ಸಹಾಯ ಸೌಲಭ್ಯ ಪಡೆಯಲು ಆ.30ರ ಒಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ: ಎಐಐಎಂಎಸ್ ನರ್ಸಿಂಗ್ ಪರೀಕ್ಷೆಗೆ ಅರ್ಜಿ ಆಹ್ವಾನ

Comments are closed.