Actor Upendra: ‘ಬುದ್ಧಿವಂತ’ ನಿಗೆ ಹೈಕೋರ್ಟ್ ನಿಂದ ರಿಲೀಫ್ ! FIR ಗೆ ತಡೆ!!!

Sandalwood news actor Upendra against FIR High Court Big Relief for Actor Upendra

Actor Upendra: ಸ್ಯಾಂಡಲ್ ವುಡ್‌ ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ (Actor Upendra) ಅವರು ಲೈವ್ ವಿಡಿಯೋದಲ್ಲಿ ಮಾತನಾಡುವಾಗ ‘ಊರು ಅಂದ್ಮೇಲೆ ಹೋಲಗೇರಿ ಇರುತ್ತೆ’ ಎಂದು ಗಾದೆ ಮಾತನ್ನು ಬಳಸಿದ್ದು, ಆ ಮೂಲಕ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗಿತ್ತು. ಇದೀಗ ‘ನಟ ಉಪೇಂದ್ರ’ಗೆ ‘ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ನಟ ಉಪೇಂದ್ರ ಅವರು ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆ ಅವರ ವಿರುದ್ಧ ದೂರು ದಾಖಲಾಗಿದ್ದು, ಈ ವಿಚಾರವಾಗಿ ಉಪೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಾನು ಜಾತಿ ನಿಂದರೆ ಮಾಡಿಲ್ಲ, FIR ರದ್ದು ಮಾಡಿ ಎಂದು ಹೈಕೋರ್ಟ್ ಗೆ ಮನವಿ ಮಾಡಿದ್ದರು. ಇಂದು ಹೈಕೋರ್ಟ್ ಎಫ್‌ಐಆರ್ ಗೆ ತಡೆ ನೀಡುವ ಮೂಲಕ ನಟನಿಗೆ ಬಿಗ್ ರಿಲೀಫ್ ನೀಡಿದೆ.

ನಟ ಉಪೇಂದ್ರ ವಿರುದ್ಧ ಜಾತಿನಿಂದನೆ ಪ್ರಕರಣಕ್ಕೆ
ಸಂಬಂಧಿಸಿದಂತೆ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ಮಧ್ಯಂತರ ತಡೆಯಾಜ್ಞೆ ನೀಡಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೆಯದನ್ನು ಮಾಡುವಾಗಲೂ ಟೀಕಿಸುವವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ಗಾದೆ ಬಳಸಲಾಗಿದೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿನಿಂದನೆಯಲ್ಲ. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ. ಅಲ್ಲದೆ, ಆಕ್ಷೇಪ ವ್ಯಕ್ತವಾದ ಕೂಡಲೇ ವಿಡಿಯೋ ಡಿಲೀಟ್ ಮಾಡಿ, ಕ್ಷಮೆ ಕೋರಿದ್ದೇನೆ ಎಂದು ಉಪೇಂದ್ರ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ನಟನ ವಿರುದ್ಧ ದಾಖಲಾಗಿದ್ದ ಅಟ್ರಾಸಿಟಿ ಕೇಸ್ ನ ಎಫ್‌ಐಆರ್ ಗೆ ತಡೆ ನೀಡಿದೆ. ಅಲ್ಲದೇ ಇದು ಎಸ್ ಸಿ ಎಸ್ಟಿ ಕಾಯ್ದೆಯ ಅಡಿ ದಾಖಲಾಗುವ ದೂರು ಅಲ್ಲ ಎಂಬುದಾಗಿ ತಿಳಿಸಿದೆ.

ಇದನ್ನೂ ಓದಿ: Actor Upendra: ಜಾತಿ ನಿಂದನೆ ಮಾಡಿಲ್ಲ, FIR ರದ್ದು ಮಾಡಿ ! ಸಿಡಿದು ನಿಂತ ಉಪೇಂದ್ರ ಹೈ ಕೋರ್ಟ್ ಗೆ ಮನವಿ !

Comments are closed.