Educational Rule: ಶಾಲಾ ಕಾಲೇಜು -ಆಸು ಪಾಸು ಇವೆಲ್ಲ ಬ್ಯಾನ್ ! ಶಿಕ್ಷಣ ಇಲಾಖೆಯಿಂದ ಕಟ್ಟು ನಿಟ್ಟಿನ ಆದೇಶ, ತಕ್ಷಣದಿಂದ ಜಾರಿ
Educational news school colleges near this rule must follow
Educational Rule: ವಿದ್ಯಾರ್ಥಿಗಳ (Students) ಹಿತ ದೃಷ್ಟಿಯಿಂದ ಶಿಕ್ಷಣ ಇಲಾಖೆಯಿಂದ ಕಟ್ಟು ನಿಟ್ಟಿನ ಆದೇಶ ಹೊರಡಿಸಲಾಗಿದ್ದು, ಈ ಆದೇಶ ತಕ್ಷಣದಿಂದ ಜಾರಿಯಾಗಲಿದೆ. ಹೌದು, ರಾಜ್ಯದ (karnataka) ಶಾಲೆಗಳಲ್ಲಿ ಮೊಬೈಲ್ (Mobile) ಬಳಕೆ ನಿಷೇಧ ಸೇರಿದಂತೆ ಕೆಲ ನಿಯಮಗಳನ್ನು ಪಾಲಿಸಬೇಕು ಎಂದು ಶಿಕ್ಷಣ (Educational Rule) ಇಲಾಖೆ ಮಹತ್ವದ ಸೂಚನೆ ನೀಡಿದೆ.
ಶಾಲಾ/ಕಾಲೇಜುಗಳ (college) ಆವರಣದಿಂದ 100 ಮೀಟರ್ ಗಳ ಅಂತರದಲ್ಲಿ ತಂಬಾಕುಯುಕ್ತ ವಸ್ತುಗಳ ಮಾರಾಟ ನಿಷೇಧದ ಬಗ್ಗೆ ಸೂಕ್ತ ಕ್ರಮವಹಿಸಿ ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ. ಹಾಗೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಶಾಲಾ ಅವಧಿಯಲ್ಲಿ ಹಾಗೂ ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ.
ಶಾಲಾ ಆವರಣವು ಶಾಲೆಯಲ್ಲಿ ಮಕ್ಕಳಿಗೆ ದೈನಂದಿನ ಪಾಠ ಸೇರಿದಂತೆ ಶೈಕ್ಷಣಿಕ ಚಟುವಟಿಕೆಗೆ ಮಾತ್ರ, ಅದು ಬಿಟ್ಟು ಯಾವುದೇ ಕಾರಣಕ್ಕೂ ಶೈಕ್ಷಣಿಕೇತರ ಚಟುವಟಿಕೆಗಳಿಗೆ/ ಉದ್ದೇಶಗಳಿಗೆ ಬಳಸಬಾರದಾಗಿ ಹಾಗೂ ಅನುಮತಿ ನೀಡಬಾರದಾಗಿ ಸೂಚಿಸಲಾಗಿದೆ.
ರಾಜ್ಯದ ಎಲ್ಲಾ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರುಗಳಿಗೆ ಶಾಲಾ ಸುರಕ್ಷತೆ ಮತ್ತು ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಸರಕು ಸಾಗಾಣಿಕೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಮೋಟಾರು ವಾಹನ ಕಾಯಿದೆ/ನಿಯಮಗಳನ್ನು ಉಲ್ಲಂಘಿಸಿ ಸುರಕ್ಷಿತವಲ್ಲದ ರೀತಿಯಲ್ಲಿ ತರದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.
Comments are closed.