Central Government: ಸಿಹಿ ಸುದ್ದಿ! ಪ್ರಾದೇಶಿಕ ಭಾಷೆಗಳಲ್ಲಿ ಇನ್ನು ಮುಂದೆ ಕೇಂದ್ರ ಸರಕಾರಿ ನೇಮಕಾತಿ ಪರೀಕ್ಷೆ!
Central Government recruitment exam slated to be held in kannada and other 15 regional languages
Central Government: ಉದ್ಯೋಗಾಂಕ್ಷಿಗಳಿಗೆ (Job Seekers)ಖುಷಿಯ ಸುದ್ದಿ!! ಭಾಷೆಯ (Language)ಸಮಸ್ಯೆಯಿಂದ ಹೆಚ್ಚಿನ ಯುವಜನತೆ ಉದ್ಯೋಗಾವಕಾಶದಿಂದ ವಂಚಿತರಾಗುತ್ತಿರುವುದನ್ನು ಮನಗಂಡು ಕೇಂದ್ರ ಸರ್ಕಾರ(Central Government)15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ.
ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆಗಳು ಮತ್ತು ಪಿಂಚಣಿ ಸಚಿವಾಲಯಕ್ಕೆ ಸಂಬಂಧಪಟ್ಟ14ನೇ ಹಿಂದಿ ಸಲಹಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಕುರಿತ ಮಹತ್ವದ ಮಾಹಿತಿ ನೀಡಿದ್ದಾರೆ.
ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ಒಡಿಯಾ, ತೆಲುಗು, ಉರ್ದು, ತಮಿಳು, ಪಂಜಾಬಿ, ಮಣಿಪುರಿ, ಕೊಂಕಣಿ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ. ಕೇಂದ್ರದ ಈ ನಿರ್ಣಯದಿಂದ ಲಕ್ಷಾಂತರ ಉದ್ಯೋಗಾಂಕ್ಷಿಗಳಿಗೆ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ದೊರೆಯಲಿದೆ. ಈ ಮೂಲಕ ಸರ್ಕಾರಿ ನೌಕರರು ಭಾಷೆಯ ಸಮಸ್ಯೆಯಿಂದ ಉದ್ಯೋಗದಿಂದ ವಂಚಿತರಾಗುವುದು ತಪ್ಪುತ್ತದೆ.
ಇದನ್ನೂ ಓದಿ: ಕೊಡಗು: ಬೈಕುಗಳ ಮುಖಾಮುಖಿ ಡಿಕ್ಕಿ, ಕೆನರಾ ಬ್ಯಾಂಕ್ ಉದ್ಯೋಗಿ ಮೃತ್ಯು!
Comments are closed.