ಕೊಡಗು: ಬೈಕುಗಳ ಮುಖಾಮುಖಿ ಡಿಕ್ಕಿ, ಕೆನರಾ ಬ್ಯಾಂಕ್ ಉದ್ಯೋಗಿ ಮೃತ್ಯು!

Kodagu news bike Accident at Kodagu canara bank employee death

Kodagu: ಕೊಡಗು (Kodagu) ಜಿಲ್ಲೆಯ ಅಮ್ಮತ್ತಿಯಲ್ಲಿ ನಿನ್ನೆ ತಡರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ(Accident )ಸಂಭವಿಸಿದ್ದು, ಬ್ಯಾಂಕ್‌ ಉದ್ಯೋಗಿ ಸಾವಿಗೀಡಾಗಿರುವ(Death )ಘಟನೆ ನಡೆದಿದೆ.

ವಿರಾಜಪೇಟೆ(Virajapet)ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು, ಮೃತ ದುರ್ದೈವಿ ಅಮೃತ (24) ಎನ್ನಲಾಗಿದ್ದು, ಬ್ಯಾಂಕ್ ಉದ್ಯೋಗಿಯಾಗಿರುವ ಇವತಿ ಮೂಲತಃ ಕೇರಳದ ತ್ರಿಶೂರ್ ಮೂಲದವರು ಎನ್ನಲಾಗಿದೆ. ಎರಡೂ ಬೈಕ್‌ಗಳು ರಭಸವಾಗಿ ಡಿಕ್ಕಿಯಾಗಿರುವ ಪರಿಣಾಮ ಅಮೃತ ತೀವ್ರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಅಮೃತಾಳನ್ನು ಮೈಸೂರು ಅಪೊಲೋ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಅಮೃತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಗರ್ ಹುಕಂ ಸಾಗುವಳಿ ಸಕ್ರಮ ಮತ್ತಷ್ಟು ವಿಳಂಬ!

Comments are closed.