ಶಿಕ್ಷಕ ಉದ್ಯೋಗ ಬಯಸುವವರಿಗೆ ಭರ್ಜರಿ ಸಿಹಿ ಸುದ್ದಿ! ರಾಜ್ಯ ಸರಕಾರದಿಂದ 10 ಸಾವಿರ ಶಿಕ್ಷಕರ ನೇಮಕಕ್ಕೆ ಆದೇಶ!

Government job news teacher recruitment State Government orders for recruitment of 10000 guest teachers appointment

Guest Teachers Appointment: ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮತ್ತು ಉತ್ತಮ ಗುಣಮಟ್ಟದ ಶೈಕ್ಷಣಿಕ ಬಲವರ್ಧನೆಯ ಸಲುಗವಾಗಿ, ರಾಜ್ಯ ಸರ್ಕಾರ 2023-2024ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ (Government Primary and High school) ಒಟ್ಟು 10 ಸಾವಿರ ಅತಿಥಿ ಶಿಕ್ಷಕರನ್ನು (Guest Teachers Appointment) ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಹೌದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 8 ಸಾವಿರ ಮತ್ತು ಪ್ರೌಢ ಶಾಲೆಗಳಿಗೆ 2 ಸಾವಿರ ಸೇರಿ ಒಟ್ಟಾರೆ 10 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಅಥವಾ 2024ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿಯಾಗಿ ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.

ಶಾಲಾ ಶಿಕ್ಷಣ ಇಲಾಖೆಯು 13,352 ಕಾಯಂ ಶಿಕ್ಷಕರ ನೇಮಕಾತಿಗೆ ಮುಂದಾಗಿದ್ದರೂ ಹಲವು ಕಾರಣಗಳಿಂದಾಗಿ ಪ್ರಕ್ರಿಯೆ ವಿಳಂಬವಾಗಿ ಮಕ್ಕಳಿಗೆ ತೊಂದರೆ ಉಂಟಾಗಿತ್ತು. ಆದ್ದರಿಂದ ಶಿಕ್ಷಕರ ಕೊರತೆ ನೀಗಿಸುವಂತೆ ಜನಪ್ರತಿನಿಧಿಗಳು, ಪೋಷಕರ ಕೋರಿಕೆ ಮೇರೆಗೆ ತಾತ್ಕಾಲಿಕವಾಗಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

2023-24ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 8000 ಮತ್ತು ಪ್ರೌಢ ಶಾಲೆಗಳಿಗೆ 2000 ಎರಡನೇ ಕಂತಿನ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮಂಜೂರಾತಿ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಹಾಗೂ ಆರ್ಥಿಕ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಮತ್ತು ರಾಜ್ಯಾಧ್ಯಕ್ಷರಾದ ಕೆ. ನಾಗೇಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಸದ್ಯ ಖಾಲಿ ಇರುವ ಹುದ್ದೆ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿಯಾಗಿರುವ ಹುದ್ದೆಗಳನ್ನು ಅತಿಥಿ ಶಿಕ್ಷಕರಿಂದ ಆದ್ಯತೆ ಮೇಲೆ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯು ಸೂಚಿಸಿದೆ.

Guest Teachers Appointment

Guest Teachers Appointment

Guest Teachers Appointment

ಇದನ್ನೂ ಓದಿ: ಹಿರಿಯ ನಾಗರಿಕರೇ ನಿಮಗೊಂದು ಸಿಹಿ ಸುದ್ದಿ! ಈ ನಾಲ್ಕು ಬ್ಯಾಂಕ್‌ನಲ್ಲಿ ನಿಮ್ಮ ಖಾತೆಯೇನಾದರೂ ಇದ್ದರೆ, ಹೊಡಿತು ನಿಮಗೆ ಲಾಟ್ರಿ!!!

Comments are closed.