Kodi Mutt Shree Prediction: ಕೋಡಿಮಠ ಶ್ರೀಗಳಿಂದ ಚಂದ್ರಯಾನ-3 ಕುರಿತು ಆಘಾತಕಾರಿ ಭವಿಷ್ಯ ನುಡಿ! ಹಣದ ಹಿಂದೆ ಮನುಷ್ಯ ಹೋಗದೇ ದೈವದ ಹಿಂದೆ ಹೋಗಬೇಕು ಎಂದು ಸ್ವಾಮೀಜಿ ಹೇಳಿದ್ಯಾಕೆ!!!

Kodi mutt Swamiji prediction about chandrayaan-3 politics and other major dangerous things about people life style

kodi mutt Shree Prediction: ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ (kodi mutt swamiji predict) ಅವರು ಚಂದ್ರಯಾನ-3 ಕುರಿತು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಜೊತೆಗೆ ಜಗತ್ತಿನ ಆಗು-ಹೋಗುಗಳ ಬಗ್ಗೆ ಭವಿಷ್ಯ (kodi mutt Shree Prediction) ನುಡಿದಿದ್ದು ಸಾವು -ನೋವು ಹೆಚ್ಚಳವಾಗಲಿದೆ ಎಂದಿದ್ದಾರೆ. ಇನ್ನೂ ಹಣದ ಹಿಂದೆ ಮನುಷ್ಯ ಹೋಗದೇ ದೈವದ ಹಿಂದೆ ಹೋಗಬೇಕು ಎಂದು ಸ್ವಾಮೀಜಿ ಹೇಳಿದ್ದು, ಕುತೂಹಲ ಸೃಷ್ಟಿಸಿದೆ.

ಬೆಳಗಾವಿಯಲ್ಲಿ ಮಾತನಾಡಿರುವ ಶ್ರೀಗಳು, ವಿಷಾನೀಲ ಬೀಸುವ ಪ್ರಸಂಗವಿದ್ದು ಎಲ್ಲಾ ಕಡೆಯೂ ವ್ಯಾಪಿಸಲಿದೆ. ಜಾಗತಿಕ ಮಟ್ಟದಲ್ಲಿ ವಿಷಾನೀಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಜಗತ್ತಿನ ಸಾಮ್ರಾಟ್‌ಗಳ ತಲ್ಲಣಗೊಳ್ಳುವ ಪ್ರಸಂಗವೂ ಇದೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ. ಭೂಕಂಪಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತೆ. ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗುತ್ತವೆ. ಆದರೆ, ದಕ್ಷಿಣ ಭಾರತದಲ್ಲಿ ಸಮೃದ್ಧಿಯ ಲಕ್ಷಣಗಳಿವೆ, ಯಾವುದೇ ತೊಂದರೆಯಿಲ್ಲ ಎಂದಿದ್ದಾರೆ.

ಚಂದ್ರಯಾನ-3 ಕುರಿತು ಭವಿಷ್ಯ ನುಡಿದಿರುವ ಕೋಡಿ ಶ್ರೀಗಳು ದೇಶದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾಗಲಿದೆ, ಒಳ್ಳೆಯದಾಗಲಿದೆ ಎಂದು ಹೇಳಿದ್ದಾರೆ.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

ಸದ್ಯ ಪ್ರಾಕೃತಿಕ ದೋಷದಿಂದಲೇ ಸಾವು-ನೋವು ಹೆಚ್ಚುತ್ತಿವೆ. ಇದೀಗ ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗಿದ್ದು ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಕೆಮಿಕಲ್ ಸಿಂಪಡಣೆಯಿಂದ ಫಲ ಸಿಗುತ್ತಿದೆ. ಇದರಿಂದ ಜನರು ವಿಷವನ್ನೇ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ತಿನ್ನುತ್ತಿದ್ದಾರೆ. ಹಾಗಿದ್ದಾಗ ಆರೋಗ್ಯ ವೃದ್ಧಿಯಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಅಲ್ಲದ್ದೆ, ಮನುಷ್ಯ ಪ್ರಕೃತಿ ನಾಶ ಮಾಡುತ್ತಿದ್ದು, ಇದರ ದೋಷ ಮನುಕುಲಕ್ಕೆ ಇದೆ. ಈಗ ಎಲ್ಲೆಡೆ ಬೋರವೆಲ್ ತಲೆ ಎತ್ತಿವೆ. ಹೀಗಾಗಿ ಪ್ರಳಯ ಜಾಸ್ತಿ ಆಗುತ್ತಿವೆ ಎಂದು ಭವಿಷ್ಯ ನುಡಿದಿದ್ದಾರೆ.

ರಾಜಕೀಯದ ಬಗ್ಗೆ ಮಾತನಾಡಿರುವ ಶ್ರೀಗಳು, ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಹೇಳಲು ತುಂಬಾನೇ ಸಮಯವಿದೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿಬೇಕು. ಯಾರು ದೈವ ನಂಬುತ್ತಾನೇಯೋ ಅಂಥವರಿಗೆ ತೊಂದರೆಯಿಲ್ಲ. ದೈವ ನಂಬದವರಿಗೆ ಅಪಾಯವೇ ಹೆಚ್ಚು. ಅಂತವರಿಗೆ ಆಪತ್ತು, ಸಾವುಗಳು ಸಂಭವಿಸುತ್ತವೆ. ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ, ಇದು ಪ್ರಕೃತಿ ನಿಯಮ ಎಂದು ಹೇಳಿದರು.

ರಾಜ್ಯ ರಾಜಕಾರಣದಲ್ಲಿ ಸರ್ಕಾರಕ್ಕೆ‌ ತೊಂದರೆಯಿಲ್ಲ‌‌. ಈಗ ಅಸ್ಥಿರತೆ ಉಂಟಾಗುತ್ತಿದೆ ಎಂದರು. ಈ ವೇಳೆ ಶ್ರೀ ಗಳಿಗೆ ಈ ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಆಗುವ ಯೋಗ ಇದೆಯೇ? ಎಂಬ ಪ್ರಶ್ನೆ ಎದುರಾಗಿದ್ದು, ಅದಕ್ಕೆ ಉತ್ತರಿಸಿರುವ ಕೋಡಿಶ್ರೀ, ಇವರದ್ದು ಮುಗಿಲಿ, ಎಲ್ಲವನ್ನೂ ಕಿತ್ತುಕೊಳ್ಳುತ್ತಿದ್ದಾರೆ. ಒಮ್ಮೆ ಮಹಿಳೆಯರಿಗೆ ಸಿಎಂ ಆಗುವ ಅವಕಾಶ ಸಿಗಲಿದೆ. ಹಣದ ಹಿಂದೆ ಮನುಷ್ಯ ಹೋಗದೇ ದೈವದ ಹಿಂದೆ ಹೋಗಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಮನುಷ್ಯ ಅತಿವೇಗದಲ್ಲಿ ಹಣ ಮಾಡಲು ಹೊರಟಿದ್ದಾನೆ. ಇದರಿಂದ ಆಪತ್ತು ಹೆಚ್ಚಿವೆ. ಇವೆಲ್ಲದಕ್ಕೆ ಕಡಿವಾಣ ಹಾಕಲು ದೇವರಿದ್ದಾನೆ. ವಿಪರ್ಯಾಸವೆಂದರೆ ಮನುಷ್ಯ‌ ದೇವರನ್ನೇ ಮರೆತು ಹಣ ಮಾಡಲು ತೊಡಗಿದ್ದಾನೆ. ದೈವ, ನಂಬಿಕೆ ಮೇಲೆ ಜೀವನ ಮಾಡಬೇಕು. ಇವುಗಳನ್ನು ಕಳೆದುಕೊಂಡ ಪರಿಣಾಮವೇ ಅನಾಹುತ ಆಗುತ್ತವೆ ಎಂದು ಹೇಳಿದರು.

ಇದನ್ನೂ ಓದಿ: Rain Alert: ಎಚ್ಚರ, ಕರಾವಳಿಗರೇ, ಮತ್ತೆ ಅಬ್ಬರಿಸಲಿದ್ದಾನೆ ವರುಣ! ಯೆಲ್ಲೋ ಅಲರ್ಟ್‌ ಘೋಷಣೆ, ಈ ದಿನದಿಂದ!

Comments are closed.