BJP: ಕಾಂಗ್ರೆಸ್ ಸೇರಲು ಬಯಸುವ ಬಿಜೆಪಿಗರಿಗೆ ಶಾಕಿಂಗ್ ನ್ಯೂಸ್! ಬಿಜೆಪಿ ಕೋರ್ ಕಮಿಟಿಯಲ್ಲಿ ಮಹತ್ವದ ತೀರ್ಮಾನ!!! ಏನದು? ಇಲ್ಲಿದೆ ಫುಲ್ ಡಿಟೇಲ್ಸ್
Political news BJP takes some decision in core committee meeting about who party leaders plan to jumping Congress
BJP: ಚುನಾವಣೆ(Election)ಎಂಬ ಮಹಾರಣರಂಗದಲ್ಲಿ ಗೆಲುವಿನ ಕೇಕೆ ಹಾಕಿ ತನ್ನ ಪಂಚ ಸೂತ್ರದ ಗ್ಯಾರಂಟಿ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್(Congress )ಪಕ್ಷಕ್ಕೆ ಬಲ ತುಂಬಲು ಕೆಲ ಬಿಜೆಪಿ ನಾಯಕರು(BJP Leaders)ವಲಸೆ ಹೋಗುತ್ತಿದ್ದು, ಕಾಂಗ್ರೆಸ್ ಸೇರಲು ಬಯಸುವವ ಬಿಜೆಪಿಗರಿಗೆ ಶಾಕಿಂಗ್ ನ್ಯೂಸ್ (Shocking News)ನೀಡಲು ಕಮಲ ಪಾಳಯ ಅಣಿಯಾಗಿದೆ.
ಕೋರ್ ಕಮಿಟಿಯಲ್ಲಿ ಬಿಜೆಪಿ ನಾಯಕರು ಈ ಕುರಿತು ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.ಒಂದು ಕಡೆ ಕಾಂಗ್ರೆಸ್ (Congress) ಆಪರೇಷನ್ ಆಟ ಆರಂಭಿಸಿದ್ದು,ಮತ್ತೊಂದೆಡೆ ಬಿಜೆಪಿ (BJP) ವಲಸೆ ಹೋಗುವವರನ್ನು ತಡೆಯುವ ಗೋಜಿಗೆ ಹೋಗದೆ ಬದಲಾವಣೆ ಜಗದ ನಿಯಮ ಎಂಬ ಸೂತ್ರವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ.
ನಿನ್ನೆ(ಆಗಸ್ಟ್ 21) ನಡೆದ ಬಿಜೆಪಿ ಕೋರ್ಕಮಿಟಿ ಸಭೆಯಲ್ಲಿ ಆದ ಚರ್ಚೆಯ ಅನುಸಾರ ಕಾಂಗ್ರೆಸ್‌ನತ್ತ ಮುಖ ಮಾಡಿರುವ ಬಾಂಬೆ ಫ್ರೆಂಡ್ಸ್ ಬಗ್ಗೆ ಕ್ಯಾರೇ ಎನ್ನದೇ ವಲಸೆ ಹೋಗುವವರು ಹೋಗಲಿ,ಅವರನ್ನು ಪಕ್ಷ ದಲ್ಲೇ ಉಳಿಸಲು ಮಾತುಕತೆ ನಡೆಸೋಣ ಆದರೆ, ಪಕ್ಷಾಂತರ ಮಾಡುವುದು ಶತ ಸಿದ್ದ ಎಂಬ ಧೋರಣೆ ಇದ್ದರೆ ಆ ಕುರಿತು ಹೆಚ್ಚೇನು ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂಬ ಮನಸ್ಥಿತಿಗೆ ಬಿಜೆಪಿ ನಾಯಕರು ಬಂದಿದ್ದಾರೆ.
ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನದ ಪರಿಣಾಮ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡರಾದ ಸಿ.ಎಂ. ಮಾರೇಗೌಡ ಮತ್ತು ಧನಂಜಯ ಪಕ್ಷದಿಂದ ಉಚ್ಛಾಟನೆ ವಿಚಾರವೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿದೆ. ಎಸ್.ಟಿ. ಸೋಮಶೇಖರ್ ಬೆಂಬಲಿಗರು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ವಲಸೆ ಹೋಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಎಸ್.ಟಿ.ಸೋಮಶೇಖರ್ ಬೆಂಬಲಿಗರಾದ, ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಆಪರೇಷನ್ ಹಸ್ತದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದೇನು ಬೇಡ. 2024ರ ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿಕೊಂಡು, ಪಕ್ಷ ಸಂಘಟನೆ ಬಲಗೊಳಿಸುವ ಬಗ್ಗೆ ಮಾತ್ರ ನಮ್ಮ ಚಿತ್ತವಿರಬೇಕು. ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಈಗ ನಾವು ಎಡವಿದ್ದೇವೆ. ಶಾಸಕರ ಜೊತೆಗೆ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಮ್ಮದು ಕೇಡರ್ ಬೇಸ್ ಪಾರ್ಟಿ, ಕಾರ್ಯಕರ್ತರಿಗೆ ಧೈರ್ಯ ತುಂಬಬೇಕಾದ ಅನಿವಾರ್ಯತೆಯಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಗೊಂದಲದಿಂದ ಸಮಸ್ಯೆಯಾಗಿದೆ. ಬಿಎಲ್ಪಿ ನಾಯಕ, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಬೇಕು. ಈ ಬಗ್ಗೆ ಬೇಕಿದ್ದರೆ ಮತ್ತೊಮ್ಮೆ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒತ್ತಾಯಿಸೋಣ ಅಂತಾ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.ಯಶವಂತಪುರದಲ್ಲಿ ಪಕ್ಷದ ಕಾರ್ಯಕರ್ತರಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಸೂಕ್ತ ನಾಯಕತ್ವ ನೀಡಿದ್ದಲ್ಲಿ ಗೆಲುವು ಸಾಧಿಸುವುದು ಕಷ್ಟವಾಗದು ಎಂಬ ತೀರ್ಮಾನ ಕೈಗೊಳ್ಳಲಾಗಿದೆ.
ಶಿವರಾಂ ಹೆಬ್ಬಾರ್ ವಿಚಾರದಲ್ಲಿ ಕೂಡ ಬಿಜೆಪಿ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಯಲ್ಲಾಪುರದಲ್ಲೂ ಬಿಜೆಪಿ ಬಲಿಷ್ಠವಾಗಿದ್ದು, ಇಲ್ಲಿ ಕೂಡ ತಳ ಮಟ್ಟದ ಕಾರ್ಯಕರ್ತರ ಮೂಲಕ ಪಕ್ಷ ಕಟ್ಟಬಹುದು. ಅನಂತ್ ಕುಮಾರ್ ಹೆಗಡೆ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅಂತಹ ನಾಯಕತ್ವ ಸ್ಥಾನವನ್ನು ತುಂಬಬಲ್ಲ ಬಿಜೆಪಿ ನಾಯಕರು ಬಂದಿದ್ದಾರೆ. ಹೀಗಾಗಿ ಸೋಮಶೇಖರ್ ಹಾಗೂ ಹೆಬ್ಬಾರ್ ಪಕ್ಷ ಬಿಡುವ ವಿಚಾರಕ್ಕೆ ಬಿಜೆಪಿ ನಾಯಕರು ಮಾನಸಿಕವಾಗಿ ಸಿದ್ದತೆ ನಡೆಸಿ ಬದಲಿ ವ್ಯವಸ್ಥೆ ಮಾಡಲು ಅಣಿಯಾಗಿದ್ದಾರೆ.
ಇದನ್ನೂ ಓದಿ: ಮಹಿಳೆಯರಿಗೆ ಹೊಡೆಯಿತು ಲಾಟ್ರಿ! ಗೃಹಲಕ್ಷ್ಮಿ ಜೊತೆ ಜೊತೆಗೆ ಸರಕಾರದಿಂದ ವರಮಹಾಲಕ್ಷ್ಮಿ ಹಬ್ಬಕ್ಕೂ ಬಂಪರ್ ಗಿಫ್ಟ್!!
Comments are closed.