Good News:ವರಮಹಾಲಕ್ಷ್ಮೀ ಹಬ್ಬಕ್ಕೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಬಂತು ನೋಡಿ ಸಿಹಿ ಸುದ್ದಿ!!!

Nation news Karnataka Anna Bhagya scheme update ration Card account money dept

Annabhagya Scheme : ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಬದಲಾಗಿ ಹಣ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಈ ನಡುವೆ ಅನ್ನ ಭಾಗ್ಯ ಯೋಜನೆಯ(Annabhagya Scheme) ಫಲಾನುಭವಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ.

ಬಡವರು ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರಕಾರದಿಂದ ಪಡಿತರ ಚೀಟಿ (Ration Card)ವ್ಯವಸ್ಥೆ ಮಾಡಲಾಗಿದೆ. ಅನ್ನ ಭಾಗ್ಯ ಯೋಜನೆಯಡಿ(AnnaBhagya Yojana) ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿಯ (Rice)ಬದಲಿಗೆ ಕೆಜಿಗೆ 34 ರೂಪಾಯಿಯ ಹಾಗೆ ಕುಟುಂಬದ ಸದಸ್ಯರೊಬ್ಬರಿಗೆ 170 ರೂ. ಯಂತೆ ಈಗಾಗಲೇ ಬ್ಯಾಂಕ್ ಖಾತೆಗೆ(Bank Account)ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಅಂತ್ಯೋದಯ ಕಾರ್ಡ್ನಲ್ಲಿ ನಾಲ್ವರು ಸದಸ್ಯರಿದ್ದರೆ 170 ರೂ. 5 ಸದಸ್ಯರಿದ್ದರೆ 510 ರೂ., 6 ಸದಸ್ಯರಿದ್ದರೆ 850 ರೂ. ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಲಾಗುತ್ತದೆ.

ಅನ್ನಭಾಗ್ಯ ಯೋಜನೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ಎರಡನೇ ಕಂತಿನ ಹಣ ಜಮೆ ಪ್ರಕ್ರಿಯೆ ನಡೆಯುತ್ತಿದೆ. ಈ ನಡುವೆ ಪಡಿತರ ಹಣ ನೀಡುವುದು ತಾತ್ಕಾಲಿಕ ಕ್ರಮವಾಗಿದ್ದು, ಅಕ್ಕಿ ಕೊರತೆ ಸಮಸ್ಯೆ ನೀಗಿದ ನಂತರ 10 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್ ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂಪಾಯಿ ಪಾವತಿ ಮಾಡಲಾಗುತ್ತದೆ. 31 ಜಿಲ್ಲೆಗಳಲ್ಲಿ ರಾಮನಗರ, ಬೀದರ್, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಫಲಾನುಭವಿಗಳಿಗೆ ಹಣ ಪಾವತಿ ಮಾಡಲಾಗುತ್ತದೆ. ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಮುಂದಿನ 5 ದಿನಗಳಲ್ಲಿ ಹಣ ಜಮೆ ಆಗಲಿದೆ.ಇದರೊಂದಿಗೆ ಗೃಹಲಕ್ಷ್ಮಿ ಯೋಜನೆಗೂ ಸಹ ಸಾಕಷ್ಟು ಜನರು ಅರ್ಜಿ ಸಲ್ಲಿಕೆ ಮಾಡಿದ್ದು, ಇದಕ್ಕೂ ಕೂಡ ಕಾರ್ಡ್‌ ಕಡ್ಡಾಯವಾಗಿದೆ.

ಅನ್ನಭಾಗ್ಯದ ಹಣ ನಿಮಗೆ ಜಮಾ ಆಗಬೇಕಾದರೆ ನೀವು ತಪ್ಪದೇ ಈ ಕೆಲಸ ಮಾಡಲೇಬೇಕು ರೇಷನ್ ಕಾರ್ಡ್ ಗೆ (Ration Card and Aadhaar Card Link)ಆಧಾರ್ ಲಿಂಕ್ ಮಾಡದೆ ಇದ್ದರೆ ಇಲ್ಲವೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದೆ ಇದ್ದರೆ ನಿಮ್ಮ ಖಾತೆಗೆ ಹಣ ಜಮೆಯಾಗದು.

ಇದನ್ನೂ ಓದಿ: BPL ಕಾರ್ಡ್ ದಾರರೇ ಸುಳ್ಳು ಮಾಹಿತಿ ನೀಡಿದ್ದರೆ, ನಿಮಗೊಂದು ಬಿಗ್ ಶಾಕಿಂಗ್ ನ್ಯೂಸ್!!!

Leave A Reply

Your email address will not be published.