Yuva Nidhi ಯೋಜನೆ ಜಾರಿ ಕುರಿತು ಸಿಎಂ ಕೊಟ್ರು ಬಿಗ್ ಅಪ್ಡೇಟ್!

Congress: ಕಾಂಗ್ರೆಸ್ ನ (Congress)ಈ ಐದು ಗ್ಯಾರೆಂಟಿಗಳ ಮೂಲಕ ಐತಿಹಾಸಿಕ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಚುನಾವಣಾ ಪೂರ್ವ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹರಸಾಹಸ ಪಡುತ್ತಿದೆ.

 

ಮಹಿಳೆಯರು ಕಾತುರದಿಂದ ಎದುರು ನೋಡುತ್ತಿದ್ದ ಕಾಂಗ್ರೆಸಿನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ,(Rahul Gandhi)ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯನವರು(Siddaramaiah) ಚಾಲನೆ ನೀಡಿದ್ದಾರೆ. ಗೃಹ ಲಕ್ಷ್ಮೀ ಯೋಜನೆಗೆ (Gruha Lakshmi Yojana)ಚಾಲನೆ ಸಿಗುತ್ತಿದ್ದಂತೆ ಮನೆಯ ಯಜಮಾನಿಗೆ ಖಾತೆಗೆ 2 ಸಾವಿರ ರೂ ಜಮೆಯಾಗಲಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯನವರು ಯುವ ನಿಧಿ ಯೋಜನೆಯ ಕುರಿತು ಬಿಗ್ ಅಪ್ಡೇಟ್ ನೀಡಿದ್ದಾರೆ.

 

ಯುವ ನಿಧಿ ಯೋಜನೆ ಡಿಸೆಂಬರ್‌/ಜನವರಿಯಲ್ಲಿ ಜಾರಿ ಮಾಡಲಿರುವ ಕುರಿತು ಸಿಎಂ ಸಿದ್ದರಾಮಯ್ಯರವರು ಹೇಳಿದ್ದಾರೆ. ಇಂದು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ.

 

ಪ್ರತಿದಿನ ಕೋಟಿಗೂ ಅಧಿಕ ಮಂದಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಪ್ರತಿ ತಿಂಗಳು ನಮ್ಮ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಹೀಗಾಗಿ, ಪ್ರಧಾನಿ ಮೋದಿ ಅವರ ಮಾತುಗಳು ಸುಳ್ಳಾಗಿವೆ ಎಂದು ವಿವರಣೆ ನೀಡಿದ್ದಾರೆ. ಈ ಯೋಜನೆಯನ್ನು ಪೂರ್ಣ ದೇಶದಲ್ಲಿ ಜಾರಿಗೆ ತರಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಹುಲ್ ಗಾಂಧಿಯವರು ಇದೆ ವೇಳೆ ತಿಳಿಸಿದ್ದಾರೆ.

 

Leave A Reply

Your email address will not be published.