Soujanya case: ಸುಬ್ರಹ್ಮಣ್ಯದಲ್ಲಿ ಜನಸಾಗರ: ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಬೃಹತ್ ಪಾದಯಾತ್ರೆ, ಬಳಿಕ ಸಭೆ
Dharmasthala Sowjanya murder case demand for re investigation padayatra at Subrahmanya
Sowjanya case: ಸುಬ್ರಹ್ಮಣ್ಯ : ಸೌಜನ್ಯ ಹತ್ಯೆ ಪ್ರಕರಣದ (Soujanya case )ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಆ.31 ರಂದು ಸುಬ್ರಹ್ಮಣ್ಯದ ಕುಮಾರಧಾರ ಬಳಿಯಿಂದ ದೇವಸ್ಥಾನದವರೆಗೆ ಮೌನ ಮೆರವಣಿಗೆ ಸಾಗರೋಪಾದಿಯಲ್ಲಿ ಜನ ಬೀದಿಗೆ ಬಂದು ಪ್ರತಿಭಟನೆ ನಡೆಸಿದ್ದಾರೆ. ಸುಬ್ರಹ್ಮಣ್ಯದ ಸೌಜನ್ಯಳ ನ್ಯಾಯಕ್ಕಾಗಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ಆರಂಭಗೊಂಡಿದೆ. ಕುಮಾರಧಾರ ಬಳಿಯಿಂದ ಆರಂಭವಾದ ಪಾದಯಾತ್ರೆ ದೇವಸ್ಥಾನದವರೆಗೆ ಸಾಗಿ ಅಲ್ಲಿ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಮೊದಲಾದವರು ಭಾಗವಹಿಸಿದ್ದಾರೆ.
ಸುಬ್ರಹ್ಮಣ್ಯ ರೋಟರಿ ಕ್ಲಬ್ ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಜೆಸಿಐ ಸುಬ್ರಹ್ಮಣ್ಯ, ಬಿಎಂಎಸ್ ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ, ಕುಕ್ಕೇ ಶ್ರೀ ಆಟೋ ಚಾಲಕ ಮಾಲಕ ಸಂಘ, ಕುಕ್ಕೆ ಶ್ರೀ ಟ್ಯಾಕ್ಸಿ ಚಾಲಕ ಮಾಲಕ ಸಂಘ, ಸಂಜೀವಿನಿ ಒಕ್ಕೂಟ, ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ಸುಬ್ರಹ್ಮಣ್ಯ ವರ್ತಕರ ಸಂಘ, ಗೌಡ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಪ್ರತಿನಿಧಿಗಳು ಮತ್ತು ಸ್ಥಳೀಯರು ಭಾಗವಹಿಸಿದ್ದಾರೆ.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಡಾ.ರವಿ ಕಕ್ಕೆ ಪದವು,ಗೋಪಾಲ ಎಣ್ಣೆಮಜಲು, ದಿನೇಶ್ ಸಂಪ್ಯಾಡಿ, ಚಿದಾನಂದ ಕಂದಡ್ಕ ಗುರುಪ್ರಸಾದ್ ಮೇಲ್ನಾಡ್, ಸತೀಶ್.ಕೆ.ಪಿ. ಕೊಮ್ಮೆಮನೆ, ದಿನೇಶ್ ಶಿರಾಡಿ, ವಿವೇಕಾನಂದ ದೇವರಗದ್ದೆ, ತಿಲಕ್ ಎ.ಎ. ,ಭಾರತಿ ದಿನೇಶ್, ಶೇಖರ್ ಆಗೋಲಿಕಜೆ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಉಸ್ತುವಾರಿ ಸಚಿವರೆಂದೂ ನೋಡದೆ ದುಬಾರಿ ದಂಡದ ಚೀಟಿ ಹರಿದ ಅಧಿಕಾರಿ: ಪ್ರಿಯಾಂಕಾ ಖರ್ಗೆ ಏನ್ ಮಾಡಿದ್ರು ಅಂತ ತಪ್ಪು ?