ಗಾಯಗೊಂಡ ಕಾಡಾನೆ ದಾಳಿ : ಅರಣ್ಯ ಇಲಾಖೆಯ ಸಿಬ್ಬಂದಿ ಮೃತ್ಯು

Share the Article

Hassan : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಆಲೂರು ಸಮೀಪ(Hassan) ಹಳ್ಳಿಯೂರಿನಿಂದ ವರದಿಯಾಗಿದೆ.

 

ಗುರುವಾರ ಬೆಳಗ್ಗೆ ಗಾಯಗೊಂಡು ತಿರುಗಾಡುತಿದ್ದ ಭೀಮ ಹೆಸರಿನ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟೇಶ್ ಮುಂದಾಗಿದ್ದರು.ಈ ವೇಳೆ ವೆಂಕಟೇಶ್ ಅವರ ಮೇಲೆ ಆನೆ ದಾಳಿ ನಡೆಸಿದೆ.

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ತಕ್ಷಣ ಹಾಸನದ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

 

“ಹಾಸನ ಅರಣ್ಯ ವಿಭಾಗದ ಆಲೂರು, ಬೇಲೂರು. ಯಸಳೂರು, ಸಕಲೇಶಪುರ ಮತ್ತು ಅರಕಲಗೂಡು ವಲಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಭೀಮ ಕಾಡಾನೆಗೆ ಇತರೆ ಕಾಡಾನೆಗಳು ಆಗಸ್ಟ್ ಎರಡನೇ ವಾರದಲ್ಲಿ ದಾಳಿ ಮಾಡಿರುವುದರಿಂದ ತೀವ್ರವಾಗಿ ಗಾಯಗೊಂಡಿತ್ತು”

 

ಕಾಡಾನೆಗೆ ಆ.25 ರಂದು ಚಿಕಿತ್ಸೆ ನೀಡಲಾಗಿದ್ದು, ಗಾಯವಾಸಿಯಾಗದೇ ಉಲ್ಬಣಗೊಂಡಿರುವುದರಿಂದ ಹೆಚ್ಚಿನ ಚಿಕಿತ್ಸೆ ನೀಡುವ ಕಾರ್ಯಾಚರಣೆ ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಅನುಮತಿ ನೀಡಿದ್ದರು.

ಇದನ್ನೂ ಓದಿ : ನೀವ್ ಊರ್ ಬಿಟ್ರಿ ಅಂದ್ರೆ ನಿಮ್ ಆಯಸ್ಸು 12 ವರ್ಷ ಜಾಸ್ತಿ ಆಯ್ತು ಅಂತಲೇ ಅರ್ಥ !ಏನಿದೆ ಅಲ್ಲಿ ಅಂತದ್ದು?

Leave A Reply