Shivamogga Airport: ಶಿವಮೊಗ್ಗಕ್ಕೆ ಬಂದೇ ಬಿಟ್ಟ ಮೊದಲ ವಿಮಾನ: ಅರೇ, ಮೊದಲ ಪ್ರಯಾಣಿಕ ಇವರೇನಾ ?!
Shivamogga news first flight arrival at Shivamogga airport bs Yediyurappa MB Patil travel
Shivamogga Airport: ಈಗಾಗಲೇ ಫೆಬ್ರವರಿ 27, ಯಡಿಯೂರಪ್ಪ ಅವರ ಹುಟ್ಟು ಹಬ್ಬದ ದಿನದಂದೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು (Shivamogga Airport) ಉದ್ಘಾಟಿಸಿದ್ದರು. ಶಿವಮೊಗ್ಗದ ನಗರದಿಂದ 10 ಕಿ.ಮೀ ದೂರದಲ್ಲಿರುವ ಸೋಗಾನೆ ಬಳಿ ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದ್ದು, ಸದ್ಯ ಇಂದಿನಿಂದ ವಿಮಾನ ಹಾರಾಟಕ್ಕೆ ಅಧಿಕೃತ ಚಾಲನೆ ದೊರಕಿದೆ.
ಹೌದು, ಶಿವಮೊಗ್ಗದ ವಿಮಾನ ನಿಲ್ದಾಣದಿಂದ ಇಂದಿನಿಂದ ಪ್ರಯಾಣ ಆರಂಭವಾಗಿದ್ದು, ಶಿವಮೊಗ್ಗದಲ್ಲಿ ಇಳಿದ ಮೊದಲ ವಿಮಾನಕ್ಕೆ ವಾಟರ್ ಸೆಲ್ಯೂಟ್ ಮೂಲಕ ಸ್ವಾಗತ ಮಾಡಲಾಗಿದೆ.
ಸದ್ಯ ಬೆಂಗಳೂರಿನಿಂದ (Bengaluru) ಶಿವಮೊಗ್ಗಕ್ಕೆ ತೆರಳಿದ ಇಂಡಿಗೋ ವಿಮಾನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ಸಚಿವ ಎಂಬಿ ಪಾಟೀಲ್ (MB Patil) ಜೊತೆ ಆ ಭಾಗದ ಜನ ಪ್ರತಿನಿಧಿಗಳು ಪ್ರಯಾಣಿಸಿದ್ದಾರೆ.
ಇನ್ನು ವಿಮಾನದಲ್ಲಿ ಪ್ರಯಾಣಿಸುವುದಕ್ಕೂ ಮೊದಲು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ನಮ್ಮ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರೈತರು ಕೂಡ ಪ್ರಮುಖ ಕಾರಣ. ಯಾಕೆಂದರೆ ಯಾವುದೇ ತಕರಾರು ಇಲ್ಲದೇ ಜಮೀನು ಬಿಟ್ಟುಕೊಟ್ಟಿದ್ದಾರೆ ಇವರನ್ನು ನಾವು ನೆನಪು ಮಾಡಿಕೊಳ್ಳಲೇ ಬೇಕು. ಆದ್ದರಿಂದ ಆ ಖುಷಿಯಲ್ಲಿ ಇವತ್ತು ನನ್ನ ಜೊತೆ ಕೆಲ ರೈತರನ್ನೂ ವಿಮಾನದಲ್ಲಿ ಕರೆದುಕೊಂಡು ಹೋಗುತ್ತಿದ್ದೇನೆ ಎಂದರು.
ಇನ್ನು ವಾಣಿಜ್ಯ, ಕೈಗಾರಿಕೆ, ಮುಂತಾದ ಬೇರೆ ಕಾರಣಕ್ಕೂ ವಿಮಾನ ನಿಲ್ದಾಣ ಅನುಕೂಲ ಆಗಲಿದೆ. ಒಟ್ಟಿನಲ್ಲಿ ಏರ್‌ಪೋರ್ಟ್ ಆಗಲು ಕಾರಣರಾದ ಎಲ್ಲರಿಗೂ ಅಭಿನಂದನೆಗಳು. ಮುಖ್ಯವಾಗಿ ಸಂಸದ ರಾಘವೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸಿಎಂ ಆಗಿದ್ದಾಗಿನ ಕನಸು ನನಸಾಗಿರುವುದು ಬಹಳ ಸಂತೋಷ ತಂದಿದೆ ಎಂದು ಹೆಮ್ಮೆಯಿಂದ ಯಡಿಯೂರಪ್ಪ ಹೇಳಿಕೊಂಡಿದ್ದಾರೆ.
ವಿಮಾನದಲ್ಲಿ ಆಗಮಿಸಿದ ಗಣ್ಯರನ್ನು ಯಡಿಯೂರಪ್ಪ ಮುಂತಾದ ಗಣ್ಯರನ್ನು ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅದ್ದೂರಿಯಾಗಿ ಸ್ವಾಗತ ಮಾಡಿದ್ದು, ನಿಲ್ದಾಣ ಬಗೆಗಿನ ಮಾಹಿತಿ ನೀಡಿದರು.
ಇದನ್ನೂ ಓದಿ: ಸುಳ್ಯ : ಅಪಘಾತ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ