Sullia: ಅಪಘಾತ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

Sullia accident news car accident at sullia three member dead

Share the Article

Sullia : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ 3 ಮಂದಿ ಮೃತಪಟ್ಟಿದ್ದಾರೆ.ಈ ಘಟನೆ ಸುಳ್ಯ (Sullia) ತಾಲೂಕಿನ ಅಡ್ಕಾರು ಎಂಬಲ್ಲಿ ಆ.31ರಂದು ಬೆಳಿಗ್ಗೆ ನಡೆದಿದೆ.

ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು.ಅವರಿಬ್ಬರೂ ಮೃತಪಟ್ಟಿದ್ದಾರೆ. ಒಬ್ಬರು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಡ್ಕಾರಿನ ಹೊಟೇಲ್ ಒಂದರ ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ಅಡ್ಕಾರಿಗೆ ಆಗಮಿಸಿದ್ದರು. ಕಾರ್ಮಿಕರಿಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಕಾರು ಡಿಕ್ಕಿ ಹೊಡೆಯಿತು.

ಇದನ್ನೂ ಓದಿ: ಬೆಳ್ತಂಗಡಿ: ಪ್ರತಿಭಾವಂತ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣು

Leave A Reply