Mangalore Krishna Janmashtami: ಕೃಷ್ಣ ಜನ್ಮಾಷ್ಟಮಿಗೆ ಮಂಗಳೂರು ಕಮಿಷನರ್‌ ಮಾರ್ಗಸೂಚಿ ಬಿಡುಗಡೆ!!! ಏನಿದೆ ಗೊತ್ತಾ? ಈ ಪಾಲನೆ ಕಡ್ಡಾಯ!!!

krishna janmastami mangalore news police releases guidelines

Krishna Jnanmashtami – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದಿಂದ ಆಚರಿಸುವ ಹಬ್ಬಗಳಲ್ಲಿ ಕೃಷ್ಣ ಜನ್ಮಾಷ್ಟಮಿ(Krishna Jnanmashtami) ಕೂಡ ಒಂದಾಗಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ (Dakshina Kannada)ಜಿಲ್ಲೆಯಾದ್ಯಂತ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿದೆ.

ಸೆಪ್ಟೆಂಬರ್ 6ರಂದು ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದ್ದು, ಈ ವೇಳೆ ದಕ್ಷಿಣ ಕನ್ನಡ, ಉಡುಪಿ(Udupi)ಮತ್ತು ಕಾಸರಗೋಡು(Kasaragod )ಜಿಲ್ಲೆಯ ವಿವಿಧ ಕೃಷ್ಣ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಆಚರಣೆಗಳು ನಡೆಯುತ್ತವೆ. ಮಂಗಳೂರು ನಗರದಲ್ಲಿ ಕೂಡ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದ್ದು, ಸಾಂಪ್ರದಾಯಿಕ ಆಚರಣೆಯೊಂದಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಮಾರ್ಗಸೂಚಿ ಹೊರಡಿಸಿದ್ದಾರೆ. ಕಾರ್ಯಕ್ರಮ ಹಮ್ಮಿಕೊಳ್ಳುವ ಮುನ್ನ ಆಯೋಜಕರು ಅನುಮತಿ ಪಡೆಯುವುದು ಕಡ್ಡಾಯವೆಂದು ಮಾರ್ಗಸೂಚಿಯಲ್ಲಿ ಸೂಚನೆ ನೀಡಲಾಗಿದೆ. ಇದರ ಜೊತೆಗೆ, ಸುರಕ್ಷತೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲು ಸೂಚಿಸಲಾಗಿದೆ.

ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್ ಜೈನ್ ಅವರು ಮಾಹಿತಿ ನೀಡಿದ್ದು, ಶ್ರೀಕೃಷ್ಣ ಜನ್ಮಾಷ್ಟಮಿ ಸಾಂಪ್ರದಾಯಿಕವಾಗಿ ಆಚರಿಸುವುದರೊಂದಿಗೆ ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಮಾರ್ಗಸೂಚಿ ನೀಡಲಾಗಿದ್ದು, ಸಂಘಟಕರು ಈ ಬಗ್ಗೆ ಗಮನಹರಿಸಲು ತಿಳಿಸಲಾಗಿದೆ. ಪೊಲೀಸ್‌ ಇಲಾಖೆಯಿಂದ ನೀಡಲಾದ ಪರವಾನಗಿಯಲ್ಲಿ ನಿಗದಿ ಮಾಡಿದ ಸಮಯದವರೆಗೆ ಮಾತ್ರ ಧ್ವನಿವರ್ಧಕ ಬಳಕೆ ಮಾಡತಕ್ಕದ್ದು. ಡಿ.ಜೆ. ಬಳಸಲು ಅವಕಾಶವಿಲ್ಲ ಜೊತೆಗೆ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಸ್ಫಷ್ಟಪಡಿಸಿದ್ದಾರೆ.

ಕಾರ್ಯಕ್ರಮ ಆಯೋಜಿಸುವವರು ಕಡ್ಡಾಯವಾಗಿ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಲು ಸೂಚಿಸಲಾಗಿದ್ದು,ಮಡಕೆಗಳನ್ನು 14 ಅಡಿ ಎತ್ತರದವರೆಗೆ ಮಾತ್ರ ಕಟ್ಟಬೇಕು ಎಂದು ಸೂಚಿಸಲಾಗಿದೆ. ಮಡಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಟ್ಟುವಂತಿಲ್ಲ. ಮಡಕೆ ಒಡೆಯುವ ಸ್ವಯಂಸೇವಕರ ಮೇಲೆ ತಂಪು ನೀರನ್ನು ಚೆಲ್ಲಬಾರದು ಎಂಬ ಬಗ್ಗೆ ಸ್ಪಷ್ಟವಾಗಿ ಸೂಚಿಸಲಾಗಿದೆ.

ಮಾರ್ಗಸೂಚಿ ಪ್ರಮುಖ ಅಂಶಗಳು ಹೀಗಿವೆ:
* ಮಡಕೆಗಳನ್ನು ಕಟ್ಟುವಾಗ ಸಾರ್ವಜನಿಕ ವಾಹನ ಸಂಚಾರಕ್ಕೆ ಅಡ್ಡಿಯಾಗಬಾರದು.
* ಪೊಲೀಸ್‌ ಇಲಾಖೆಯಿಂದ ಅಂತಿಮಗೊಳಿಸಲಾದ ರೂಟ್‌ನಲ್ಲಿ ಮಾತ್ರ ಮೆರವಣಿಗೆ ತೆರಳಬೇಕು.
*ಯಾವುದೇ ಧರ್ಮ, ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವಂತಹ ಟ್ಯಾಬ್ಲೋ, ನೃತ್ಯರೂಪಕ ಇರಬಾರದು.
* ಮಡಕೆ ಕಟ್ಟುವಾಗ, ಸ್ತಬ್ಧಚಿತ್ರ ತಯಾರಿಸುವಾಗ ಸ್ಥಳದಲ್ಲಿ ಹಾದುಹೋಗಿರುವ ವಿದ್ಯುತ್‌ ತಂತಿ ಬಗ್ಗೆ ಎಚ್ಚರ ವಹಿಸಬೇಕು. * ಮೆರವಣಿಗೆಯಲ್ಲಿ ಒಂದು ಸುಸಜ್ಜಿತ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಿರಬೇಕು.
* ಸುಪ್ರೀಂಕೋರ್ಟ್‌ ಆದೇಶದ ಅನುಸಾರ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಕೆ ಮಾಡತಕ್ಕದ್ದು. ಅನಂತರ ಸುಡುಮದ್ದು/ಪಟಾಕಿಗಳನ್ನೂ ಬಳಕೆ ಮಾಡುವಂತಿಲ್ಲ
* ಫಿಟ್‌ನೆಸ್‌ ಸರ್ಟಿಫಿಕೇಟ್‌, ಇನ್ಶೂರೆನ್ಸ್‌ ಸರ್ಟಿಫಿಕೇಟ್‌ ಇರುವ ವಾಹನಗಳಲ್ಲಿ ಮಾತ್ರ ಸ್ತಬ್ಧ ಚಿತ್ರವನ್ನು ಅಳವಡಿಸಬೇಕು.
* ಸ್ವಯಂಸೇವಕರನ್ನು ಗುಂಪುಗಳಾಗಿ ವಿಂಗಡಿಸಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ನಿಯೋಜಿಸಿ ಮೆರವಣಿಗೆಯು ಸುಲಲಿತವಾಗಿ ಸಾಗಲು ಅನುವು ಮಾಡಿಕೊಡಬೇಕು.
*ಆಸ್ಪತ್ರೆಗಳ ಬಳಿ, ಜನಸಂದಣಿಯ ಮಧ್ಯೆ ಸುಡುಮದ್ದು ಬಳಕೆ ಮಾಡಬಾರದು.
* ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ಅಳವಡಿಸುವ ಮುನ್ನ ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆಯತಕ್ಕದ್ದು.
* ಯಾವುದೇ ಪ್ರಚೋದನಾತ್ಮಕ ಬರಹಗಳು, ಚಿತ್ರಗಳನ್ನು ಬಳಕೆ ಮಾಡಬಾರದು. ಕಾರ್ಯಕ್ರಮ ಮುಗಿದ ಕೂಡಲೇ ಸಂಘಟಕರೇ ಕಡ್ಡಾಯವಾಗಿ ತೆರವುಗೊಳಿಸಬೇಕು.

Leave A Reply

Your email address will not be published.