ರಾಜಕೀಯ ವಲಯದಲ್ಲಿ ಕೆರಳಿದ ಕುತೂಹಲ ! ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ಭೇಟಿಯಾದ ತೇಜಸ್ವಿನಿ ಅನಂತ ಕುಮಾರ್

Share the Article

ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿ.ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಉಪ‌ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ತೇಜಸ್ವಿನಿ ಅನಂತ ಕುಮಾರ್ ಅವರು ಪತಿ ದಿ. ಅನಂತಕುಮಾರ್ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಆದರೆ ಕೊನೆ ಕ್ಷಣದಲ್ಲಿ ತೇಜಸ್ವಿನಿ ಅನಂತ ಕುಮಾರ್ ಅವರಿಗೆ ಟಿಕೆಟ್ ತಪ್ಪಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ತೇಜಸ್ವಿನಿ ಅವರಿಗೆ ಅಸಮಾಧಾನ ಇತ್ತು .

ಅನಂತಕುಮಾರ್ ನಿಧನಾನಂತರ ತೇಜಸ್ವಿನಿ ಹಲವು ಸಂದರ್ಭಗಳಲ್ಲಿ ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸಿ ಪ್ರತಿಕ್ರಿಯೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ತೇಜಸ್ವಿನಿ ಅವರು ಭೇಟಿಯಾಗಿರುವುದು ಸಾಕಷ್ಟು ಊಹಾಪೂಹಗಳಿಗೆ ಕಾರಣವಾಗಿದೆ.

Leave A Reply