SSLC-PUC Students: SSLC ಹಾಗೂ PUC ವಿದ್ಯಾರ್ಥಿಗಳೇ ಗಮನಿಸಿ- ಇನ್ಮುಂದೆ ನೀವು ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಬೇಕು !! ಅರೇ.. ಏನಿದು ಹೊಸ ವಿಚಾರ

Karnataka education news good news for SSLC and PUC students from now on opportunity to write the exam 3 times a year

SSLC-PUC Students: ಇಂದು ದೇಶಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಬೆಂಗಳೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪ ಅವರು SSLC ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಹೌದು ಇನ್ಮುಂದೆ ವರ್ಷಕ್ಕೆ 3 ಬಾರಿ SSLC ಹಾಗೂ ಪಿಯುಸಿ ವಿದ್ಯಾರ್ಥಿಗಳು(SSLC-PUC Students ) ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಅನುತ್ತೀರ್ಣರಾಗುವ ಎಸ್‌ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಅನುತ್ತೀರ್ಣ ಅಥವಾ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳಿಗೆ 3 ಬಾರಿ ಪರೀಕ್ಷೆ ಬರೆಯಲು ಸುವರ್ಣ ಅವಕಾಶ ನೀಡಲಾಗುತ್ತದೆ ಎಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಶಿಕ್ಷಣವನ್ನು ಉನ್ನತ ಮಟ್ಟಕ್ಕೆ ತಲುಪಿಸುವ ಗುರಿಯಲ್ಲಿ ಎಸ್ ಎಸ್ ಎಲ್ ಸಿ ಅನುತ್ತೀರ್ಣರಾದವರಿಗೆ ಪಿಯುಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಶಿಕ್ಷಕರ ದಿನಾಚರಣೆಯಲ್ಲಿ ಇಂದು ಪ್ರಾಥಮಿಕ ಮತ್ತು ಶಾಲಾಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ.

ಇನ್ನು ಎಸ್ ಎಸ್ ಎಲ್ ಸಿಯಲ್ಲಿ ಕನಿಷ್ಠ ಅಂಕ ಪಡೆದ ವಿದ್ಯಾರ್ಥಿ ಕೆಲ ವಿಷಯಗಳಲ್ಲಿ ಫೇಲಾದರೂ ಪಿಯುಸಿ ಪ್ರವೇಶಕ್ಕೆ ಅನುಮತಿ ನೀಡುವ ನಿಯಮವನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಇದನ್ನೂ ಓದಿ: ‘ ಗ್ಯಾರಂಟಿ’ ಗಳ ಜಾರಿ ಬೆನ್ನಲ್ಲೇ ರಾಜ್ಯ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ಸರ್ಕಾರ – ಹೊಸ ಭಾಗ್ಯದ ಜಾರಿಗೆ ನಿರ್ಧಾರ

Leave A Reply

Your email address will not be published.