World Cup 2023: ವಿಶ್ವಕಪ್‌ಗೆ ಬಲಿಷ್ಠ ಟೀಂ ಇಂಡಿಯಾ ಲಿಸ್ಟ್ ಪ್ರಕರಣ- ತಂಡದಲ್ಲಿ ಏಕೈಕ ಕನ್ನಡಿಗನಿಗೆ ಒಲಿದ ಸ್ಥಾನ – ಯಾರ್ಯಾರು ಹೊರಕ್ಕೆ ?

World Cup 2023: ಭಾರತದ ಆತಿಥ್ಯದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್(World cup)ಟೂರ್ನಿಗೆ ಕೊನೆಗೂ ಭಾರತವು ಬಲಿಷ್ಠ ತಂಡವನ್ನು ರಚಿಸಿದ್ದು, ಇದೀಗ ಬಿಸಿಸಿಐ(BCCI) ಈ ಪಟ್ಟಿ ಪ್ರಕಟಿಸಿದೆ. ತಂಡದಲ್ಲಿ ಒಬ್ಬ ಕನ್ನಡಿಗನಿಗೆ ಅವಕಾಶ ಸಿಕ್ಕಿದ್ಧು, ಉಳಿದಂತೆ ಯಾರೆಲ್ಲಾ ಇದ್ದಾರೆ ಎಂಬುದನ್ನು ಇಲ್ಲಿ ನೋಡಿ.

 

ಹೌದು, ಅಕ್ಟೋಬರ್ 5ರಿಂದ ಭಾರತದಲ್ಲಿ ಶುರುವಾಗುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ (ICC Cricket World Cup 2023) ಟೂರ್ನಿಗೆ ಬಲಿಷ್ಠ ಭಾರತ (Team India) ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಜಿತ್ ಅಗರ್ಕರ್ (Ajit Agarkar) ನೇತೃತ್ವದ ಆಯ್ಕೆ ಸಮಿತಿಯು 15 ಸದಸ್ಯರ ಬಲಿಷ್ಠ ತಂಡವನ್ನು ಘೋಷಿಸಿದೆ. ನಾಯಕ ರೋಹಿತ್ ಶರ್ಮಾ, ಹೆಡ್ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಈ ಟೂರ್ನಿಗೆ ಅಳೆದು ತೂಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ. ನಾಯಕ ರೋಹಿತ್ ಶರ್ಮಾ ಹಾಗೂ ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಜಂಟಿ ಸುದ್ದಿಗೋಷ್ಠಿ ನಡೆಸಿ ವಿಶ್ವಕಪ್ ನಲ್ಲಿ ಭಾಗವಹಿಸುವ ಭಾರತದ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದಾರೆ.

 

ಅಂದಹಾಗೆ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದು, ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಉಪನಾಯಕತ್ವ ವಹಿಸಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಮೇಲಿಂದ ಮೇಲೆ ವಿಫಲವಾಗಿರುವ ಸೂರ್ಯಕುಮಾರ್‌ ಯಾದವ್‌, ಏಷ್ಯಾಕಪ್‌ ಬಳಿಕ ವಿಶ್ವಕಪ್‌ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಅತ್ತ ವಿಕೆಟ್‌ ಕೀಪರ್‌ ಸಂಜು ಸ್ಯಾಮ್ಸನ್‌ ತಂಡದಿಂದ ಹೊರಬಿದ್ದಿದ್ದು, ಅನುಭವಿ ಸ್ಪಿನ್ನರ್‌ಗಳಾದ ಆರ್‌ ಅಶ್ವಿನ್‌ ಹಾಗೂ ಯುಜ್ವೇಂದ್ರ ಚಹಾಲ್‌ ಕೂಡಾ ನಿರಾಸೆ ಅನುಭವಿಸಿದ್ದಾರೆ.

 

ನಿರೀಕ್ಷೆಯಂತೆಯೇ ಕನ್ನಡಿಗ ಕೆ ಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಉಪನಾಯಕ ಪಟ್ಟ ಕಟ್ಟಲಾಗಿದೆ. ಸದ್ಯ ಏಷ್ಯಾಕಪ್ ಟೂರ್ನಿಯಲ್ಲೂ ಹಾರ್ದಿಕ್ ಪಾಂಡ್ಯ ಭಾರತ ತಂಡದ ಉಪನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

 

ತಂಡದಲ್ಲಿ ಯಾರೆಲ್ಲಾ ಇದ್ದಾರೆ?

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

 

ಇನ್ನೂ ಅಕ್ಟೋಬರ್ 5 ರಿಂದ ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 58 ಪಂದ್ಯಗಳು ನಡೆಯಲಿವೆ. ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲ ಪಂದ್ಯದ ಮೂಲಕ ಟೀಮ್ ಇಂಡಿಯಾ ಅಭಿಯಾನವನ್ನು ಆರಂಭಿಸಲಿದೆ. ಅಕ್ಟೋಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಪಂದ್ಯ‌ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಮಹತ್ವದ ಪೈಪೋಟಿಗೆ ಆತಿಥ್ಯ ವಹಿಸಲಿದೆ.

Leave A Reply

Your email address will not be published.