Soujanya murder case: ಸೌಜನ್ಯ ತನಿಖೆಗೆ ಕಾನೂನಿನಲ್ಲಿ ಅವಕಾಶವಿಲ್ಲ; ಪೋಷಕರಿಗೂ ಅದನ್ನೇ ಹೇಳಿದ್ದೇನೆ | ಕರಾವಳಿ ನಿಯೋಗ ಸಂದರ್ಭ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ !
Soujanya murder case CM Siddaramaiah says No provision in law for State govt to order re-investigation
Soujanya murder case: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಒತ್ತಾಯಿಸಲು ಹಿಂದೆ ಕರಾವಳಿಯ ಶಾಸಕರ ದಂಡು ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿತ್ತು. ತದನಂತರ ಕರಾವಳಿಯ ಶಾಸಕರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸೌಜನ್ಯ ಪ್ರಕರಣವನ್ನು (Soujanya murder case) ತನಿಖೆ ನಡೆಸಬೇಕೆಂದು ಅವರು ಬಲವಿ ಪತ್ರ ಸಲ್ಲಿಸಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಏನಂದ್ರು ಸಿದ್ದರಾಮಯ್ಯ ?
ಪ್ರಕರಣವನ್ನು ತನಿಖೆಗೆ ಒಳಪಡಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈ ಕುರಿತು ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿದ್ದು ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು. ಅಥವಾ ಕೇಂದ್ರಿಯ ತನಿಖಾ ಸಂಸ್ಥೆ ಸಿಬಿಐಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆಯೆoದು ಮುಖ್ಯಮಂತ್ರಿ ಸಿದ್ಧರಾಮಯ್ಯರವರು ತಿಳಿಸಿರುವುದಾಗಿ ನಿಯೋಗದಲ್ಲಿದ್ದ ಬಿಜೆಪಿ ಶಾಸಕರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಈ ಹೇಳಿಕೆ ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ.
ಬೆಳ್ತಂಗಡಿಯಲ್ಲಿ ಜೂನ್ 27 ರಂದು ಕರಾವಳಿಯ ಬಿಜೆಪಿ ಶಾಸಕರು ಸೌಜನ್ಯಳ ನ್ಯಾಯಕ್ಕೆ ಒತ್ತಾಯಿಸಿ ಪ್ರತಿಭಟನೆ ಸಭೆ ನಡೆಸಿದ್ದರು. ಆ ಸಭೆಯಲ್ಲಿ ಮುಖ್ಯಮಂತ್ರಿಗಳ ಬಳಿ ತೆರಳಿ ಮರು ತನಿಖೆಗೆ ಒತ್ತಾಯಿಸುವುದಾಗಿ ಆಗ್ರಹಿಸಿದ್ದರು. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗ ರಾಜ್ಯಪಾಲರನ್ನು ಥಾವರ್ ಚಂದ್ ಗೆಹ್ಲಟ್ ಅವರನ್ನು ಭೇಟಿ ಮಾಡಿದ್ದರು. ಕು.ಸೌಜ್ಯನಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಸಿದರು.
ಆದರೂ, ನೀವೆಲ್ಲ ಇಲ್ಲಿ ಬಂದುದನ್ನು ನೋಡಿ ಇನ್ನೊಂದು ಸಲ ಕಾನೂನು ತಜ್ಞರ ಸಲಹೆ ಪಡೆಯುತ್ತೇನೆ ಎನ್ನುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ ಎಂದು ವರದಿಯಾಗಿದೆ.