Charmadi ghat: ಮಧ್ಯರಾತ್ರಿ ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಬಸ್- ಸಹಾಯಕ್ಕಾಗಿ ಟ್ವೀಟ್ ಮಾಡಿದ ಪ್ರಯಾಣಿಕ- ನಂತರ ಆದದ್ದನ್ನು ಕೇಳಿದ್ರೆ ನೀವೇ ಶಾಕ್ ಆಗ್ತೀರಾ !!

charmadi Ghat KSRTC bus breaks down near charmadi Ghat passenger tweet for help

Charmadi ghat: ಧರ್ಮಸ್ಥಳದಿಂದ ಗದಗದ ತೆರಳುತ್ತಿದ್ದ ಬಸ್ಸೊಂದು ಭಾನುವಾರ (ಸೆಪ್ಟೆಂಬರ್‌ 03) ರಾತ್ರಿ 9 ಗಂಟೆ ಸುಮಾರಿಗೆ ಚಾರ್ಮಾಡಿ ಘಾಟ್(Charmadi ghat) ಬಳಿ ಕೆಟ್ಟು ನಿಂತಿದ್ದು, ಇದರಿಂದ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಸಹಾಯವಾಣಿಗೆ ಕರೆ ಮಾಡಿ ಎಷ್ಟೇ ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದರೆ ಕೊನೆಗೆ ಕೈ ಹಿಡಿದದ್ದೇ ಆ ಒಂದು ಟ್ವೀಟ್!!

ಹೌದು, ಸಾಮರ್ಥ್ಯಕ್ಕೂ ಮೀರಿ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಂಡು ಧರ್ಮಸ್ಥಳದಿಂದ ಗದಗದ ಮುಂಡರಗಿಗೆ ತೆರಳುತ್ತಿದ್ದ ಬಸ್ಸೊಂದು ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಚಾರ್ಮಾಡಿ ಘಾಟ್(Charmadi Ghat) ಬಳಿ ಕೆಟ್ಟು ನಿಂತಿದೆ. ಹೀಗಾಗಿ ಪ್ರಯಾಣಿಕರು ಕೆಎಸ್‌ಆರ್‌ಟಿಸಿ(KSRTC) ಸಹಾಯವಾಣಿಗೆ ಕರೆ ಮಾಡಿ ಎಷ್ಟೇ ಸಂಪರ್ಕಿಸಲು ಪ್ರಯತ್ನಿಸಿದರೂ ಎರಡು ಗಂಟೆಗಳ ಕಾಲ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಕೊನೆಗೆ ಪ್ರಯಾಣಿಕರಲ್ಲೊಬ್ಬರಾದ ರಘು ಎಂಬುವರು ಸಾರಿಗೆ ಸಂಸ್ಥೆಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೇಳಿದ್ದಾರೆ. ಕೊನೆಗೂ ಎಚ್ಚೆತ್ತ ಸಾರಿಗೆ ಸಂಸ್ಥೆ ಪರ್ಯಾಯ ಬಸ್​ ವ್ಯವಸ್ಥೆ ಮಾಡಿದೆ.

ಏನಿದು ಘಟನೆ?
ಚಾರ್ಮಾಡಿ ಘಾಟ್ ಬಳಿ ಬಸ್ ಕೆಟ್ಟುಹೋದ ಕಾರಣ 70ಕ್ಕೂ ಹೆಚ್ಚು ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗಿದ್ದರು. ಧರ್ಮಸ್ಥಳದಿಂದ ಹೊರಟ ಬಸ್ ಚಾರ್ಮಾಡಿ ಘಾಟ್ ಬಳಿ ಕೆಟ್ಟು ನಿಂತಿದ್ದು, ಈ ಸಮಯದಲ್ಲಿ ಈ ಮಾರ್ಗದಲ್ಲಿ ಬೇರೆ ಯಾವುದೇ ಬಸ್ಸುಗಳಿಲ್ಲ. ದಯವಿಟ್ಟು ಸಹಾಯ ಮಾಡಿ, ಮಳೆ ಬಂದರೆ ಏನು ಗತಿ? ಎಂದು ಟ್ವೀಟ್‌ ಮಾಡಿದ್ದಾರೆ. ಅಲ್ಲದೆ ಬಸ್ ಕೆಟ್ಟು ಹೋದ ಪರಿಣಾಮ ರಸ್ತೆ ಬದಿ ಪ್ರಯಾಣಿಕರು ವಿಶ್ರಾಂತಿ ಪಡೆಯುತ್ತಿದ್ದ ಫೋಟೋವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ರಘು ಅವರ ಟ್ವೀಟ್‌ಗೆ ಕೆಎಸ್‌ಆರ್‌ಟಿಸಿ ಪ್ರತಿಕ್ರಿಯಿಸಿದ್ದು, “ದಯವಿಟ್ಟು ಬಸ್ ಸಂಖ್ಯೆ ಅಥವಾ ಪಿಎನ್‌ಆರ್ ಪ್ರಯಾಣದ ವಿವರಗಳನ್ನು ಒದಗಿಸಿ” ಎಂದು ಕೇಳಿತು. ತಕ್ಷಣವೇ ರಘು ಮಾಹಿತಿ ನೀಡಿದ್ದಾರೆ. ಬಳಿಕ ಈ ವಿಚಾರ ತಿಳಿದ ಖಾಸಗಿ ಸುದ್ದಿ ಪತ್ರಿಕೆಯ ರಿಪೋರ್ಟರ್ ಬೆಂಗಳೂರಿನ KSRTC ಅಧಿಕಾರಿಗಳಿಗೆ ಕರೆ ಮಾಡಿ ಕೇಳಿದಾಗ, ಪುತ್ತೂರಿನಲ್ಲಿರುವ KSRTC ವಿಭಾಗೀಯ ನಿಯಂತ್ರಕ (DC) ರೊಂದಿಗೆ ಮಾತನಾಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಚಾರ್ಮಾಡಿ ಘಾಟ್​ಗೆ ಕೆಎಸ್‌ಆರ್‌ಟಿಸಿ ಬಸ್ ಹೋಗುತ್ತೆ. ಪ್ರಯಾಣಿಕರನ್ನು ಕರೆದುಕೊಂಡು ಬರಲಾಗುತ್ತೆ ಎಂದು ತಿಳಿಸಿದರು.

ಅಸಮಾಧಾನ ಹೊರಹಾಕಿದ ರಘು:
ತಡ ರಾತ್ರಿ 12.55 ಕ್ಕೆ, ರಘು ಅವರು ಟ್ವೀಟ್ ಮಾಡಿ, ಅಂತಿಮವಾಗಿ ಸಾರಿಗೆ ಇಲಾಖೆಯಿಂದ ಸಹಾಯ ಸಿಕ್ಕಿದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ 54 ಆಸನಗಳ ಸಾಮರ್ಥ್ಯವಿರುವ ಬಸ್​ನಲ್ಲಿ 78 ಜನರನ್ನು ಹತ್ತಿಸಿಕೊಳ್ಳಲಾಗಿದೆ. ಸಾರಿಗೆ ಇಲಾಖೆ ಬಸ್ ವ್ಯವಸ್ಥೆ ಮಾಡಿದ್ದು ಖುಷಿಯ ವಿಚಾರ ಆದ್ರೆ ಸಾಮರ್ಥ್ಯಕ್ಕೂ ಮೀರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಬಸ್​ನಲ್ಲಿ ಹತ್ತಿಸಿಕೊಳ್ಳುವ ಬಗ್ಗೆ ರಘು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರಾದರೂ ಈ ಬಗ್ಗೆ ಗಮನಹರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಮಸ್ಯೆ ಬಗ್ಗೆ ಅವರ ಅಧಿಕಾರಿಗಳಿಗೆ ಮನವರಿಕೆ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಹೀಗೆ ಮಾಡಿದ್ರೆ ಅದು ನಿಜಕ್ಕೂ ದೇವರಿಗೆ ಮಾಡೋ ಅವಮಾನ ಎಂದ ಸಿದ್ದರಾಮಯ್ಯ !! ಭಾರೀ ಕುತೂಹಲ ಕೆರಳಿಸಿದ ಸಿಎಂ ಹೇಳಿಕೆ

Leave A Reply

Your email address will not be published.