Gruha Lakshmi Yojana: ರಾಜ್ಯದ ಯಜಮಾನಿಯರಿಗೆ ಬಿಗ್ ಶಾಕ್- ‘ಗೃಹಲಕ್ಷ್ಮೀ’ ನೊಂದಣಿ ತಾತ್ಕಾಲಿಕ ಸ್ಥಗಿತ- ಕೊನೇ ಕ್ಷಣದಲ್ಲಿ ಹೊಸ ಟ್ವಿಸ್ಟ್
Congress guarantee gruh Lakshmi scheme registration of gruhalakshmi yojana is temporarily suspended
Gruha lakshmi Yojana: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ (Gruha Lakshmi Yojana)ಅನುಸಾರ ಕರ್ನಾಟಕ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000ಗಳನ್ನು ನೀಡಲಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಮನೆಯ ಯಜಮಾನಿಯರು ಎದುರು ನೋಡುತ್ತಿದ್ದಾರೆ. ಈ ನಡುವೆ, ರಾಜ್ಯದಲ್ಲಿ ಮಹಿಳೆಯರಿಗೆ 2000 ರೂ. ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ(Congress Government)ಸ್ಥಗಿತಗೊಳಿಸಿದೆ.
ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ(Gruha Lakshmi Scheme) ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಟ್ವೀಟ್ ಮೂಲಕ ಮಾಹಿತಿಯನ್ನು ನೀಡಿದೆ.
ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಗೃಹಲಕ್ಷ್ಮಿ ಯೋಜನೆ ಬಗ್ಗೆ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಸರ್ಕಾರವು ಇದುವರೆಗೆ ನೋಂದಾಯಿತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ರೂ.2000 ಹಣ ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲವಾಗದಿರಲಿ ಎಂಬ ಉದ್ದೇಶದಿಂದ ‘ಗೃಹ ಲಕ್ಷ್ಮಿ ಯೋಜನೆ’ಯ ಹೊಸ ನೋಂದಣಿ ತಾತ್ಕಾಲಿಕ ಸ್ಥಗಿತಗೊಂಡಿದೆ. ನೋಂದಣಿಯಾದ ಎಲ್ಲಾ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮೆಯಾದ ಬಳಿಕ ನೋಂದಣಿ ಪ್ರಕ್ರಿಯೆ ಪುನರಾರಂಭಗೊಳ್ಳಲಿದೆ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಲು ಶೀಘ್ರವೇ ಅನುವು ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1902 ಕ್ಕೆ ಕರೆಮಾಡಿ ಎಂದು ಮಾಹಿತಿ ನೀಡಿದೆ.