Anna Bhagya Scheme: ಜನರಿಗೆ ಮತ್ತೊಂದು ಸಂತಸದ ಸುದ್ದಿ- ಇನ್ಮುಂದೆ ಇವರಿಗೂ ಸಿಗಲಿದೆ ಅನ್ನಭಾಗದ 5 ಕೆಜಿ ಅಕ್ಕಿ !!
Congress guarantee anna bhagya scheme Karnataka plans to replace cash aid to with 5 kg rice in drought hit taluks
Anna Bhagya Scheme:ರಾಜ್ಯ ಸರಕಾರದ(Government)ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ(Anna Bhagya Scheme) ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 5 ಕೆಜಿಯ ಹಾಗೆ ಆಹಾರಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ. ಈ ನಡುವೆ, ಜನರಿಗೆ ಮತ್ತೊಂದು ಸಂತಸದ ಸುದ್ದಿಯನ್ನು ಸರ್ಕಾರ ಪ್ರಕಟಿಸಿದೆ.
ಹೌದು!!ಇನ್ಮುಂದೆ ಇವರಿಗೂ ಸಿಗಲಿದೆ ಅನ್ನಭಾಗದ 5 ಕೆಜಿ ಅಕ್ಕಿ !!ಬರಪೀಡಿತ ತಾಲೂಕುಗಳಲ್ಲಿ ನಗದು ಬದಲಾಗಿ ಅಕ್ಕಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.ಅನ್ನ ಭಾಗ್ಯ ಯೋಜನೆಯಡಿ(Anna Bhagya Yojana) ಸರ್ಕಾರವು ಪ್ರತಿ ಕೆಜಿಗೆ 34 ರೂ. ದರದಲ್ಲಿ ಜನರಿಗೆ ನಗದು ನೀಡುತ್ತಿದೆ. ಈ ಪ್ರಯೋಜನವು ಬಡತನ ರೇಖೆಗಿಂತ ಕೆಳಗಿರುವ (BPL) ಮತ್ತು ಅಂತ್ಯೋದಯ ಕುಟುಂಬಗಳ ಪ್ರತಿಯೊಬ್ಬ ಸದಸ್ಯರಿಗೂ ಅನ್ವಯ ಆಗಲಿದೆ. ಈ ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು ಒಟ್ಟಾರೆ 170 ರೂಪಾಯಿಗಳನ್ನು ಓರ್ವ ವ್ಯಕ್ತಿಗೆ ನೀಡಲಾಗುತ್ತದೆ.
ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಹಣವನ್ನು ನೀಡುವ ಬದಲಿಗೆ ಬರಪೀಡಿತ ಎಂದು ಗೊತ್ತುಪಡಿಸಿದ ತಾಲ್ಲೂಕುಗಳಲ್ಲಿ 5 ಕೆಜಿ ಅಕ್ಕಿಯನ್ನು ವಿತರಿಸಲು ಯೋಜಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪರವರು ತಿಳಿಸಿದ್ದಾರೆ.ಸರ್ಕಾರ ಬರ ಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಅಕ್ಕಿ ವಿತರಣೆಯನ್ನು ಆರಂಭಿಸಲಾಗುತ್ತದೆ ಎಂದು ಸಚಿವರಾದ ಮುನಿಯಪ್ಪರವರು ಮಾಹಿತಿ ನೀಡಿದ್ದಾರೆ.
ಪ್ರಸ್ತುತ, ಸಾಕಷ್ಟು ಅಕ್ಕಿ ದಾಸ್ತಾನು ಇಲ್ಲದೆ ಇರುವ ಹಿನ್ನೆಲೆ ಸರ್ಕಾರವು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಫಲಾನುಭವಿಗಳಿಗೆ ಹಣದ ನೆರವನ್ನು ನೀಡುತ್ತಿದೆ. ಸಮೀಕ್ಷೆಯ ಬಳಿಕ ಉಳಿದ 51 ತಾಲ್ಲೂಕುಗಳಲ್ಲಿ ಬರಗಾಲದಂತಹ ಪರಿಸ್ಥಿತಿ ವರದಿಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಂತಿಮ ಪಟ್ಟಿ ಸಲ್ಲಿಸುವ ಮುನ್ನ ಮತ್ತೊಮ್ಮೆ ಸಮೀಕ್ಷೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನುಸಾರ, ರಾಜ್ಯದ 62 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಾಧ್ಯತೆಗಳಿವೆ. ಮಳೆ ಕೊರತೆಯಿಂದ ತೀವ್ರ ಬೆಳೆ ನಷ್ಟ ಎದುರಿಸುತ್ತಿರುವ 113 ತಾಲೂಕುಗಳಲ್ಲಿ ಸಮೀಕ್ಷೆ ನಡೆಸಿ ಈ ತಾಲೂಕುಗಳನ್ನು ಗುರುತಿಸಲಾಗಿದೆ. ಮುಂದಿನ ಹತ್ತು ದಿನಗಳಲ್ಲಿ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಿಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಸರ್ಕಾರ ಆಂಧ್ರಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢದೊಂದಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ಪಡೆಯಲು ಯೋಜನೆ ಹಾಕಿದೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದ್ದಾರೆ.