Rain Alert: ಮತ್ತೆ ಅಬ್ಬರಿಸಲಿರೋ ವರುಣ !! ಎಲ್ಲೆಲ್ಲಿ ಆರ್ಭಟಿಸಲಿದ್ದಾನೆ ಗೊತ್ತಾ?

Rain Alert: ರಾಜ್ಯದಲ್ಲಿ (karnataka) ಮಳೆಯ (rain) ಆರ್ಭಟ ಶುರುವಾಗಿದೆ. ಸೆಪ್ಟೆಂಬರ್ ಆರಂಭದಲ್ಲೇ ಮಳೆ ಅಬ್ಬರಿಸಲು ಶುರು ಮಾಡಿದೆ. ಇದರಿಂದ ರೈತರಿಗೆ ಸಂತಸ ಉಂಟಾಗಿರೋದು ನಿಜಾನೇ. ಇದೀಗ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಮುಂದಿನ 4 ದಿನಗಳ ಕಾಲ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆ (Rain Alert) ಸಿಕ್ಕಿದೆ. ಎಲ್ಲೆಲ್ಲಿ ವರುಣ ಆರ್ಭಟಿಸಲಿದ್ದಾನೆ ಗೊತ್ತಾ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್ !!!.

ಸದ್ಯ, ಬಂಗಾಳಕೊಲ್ಲಿ (Bay Of Bengal) ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ‌. ಇದರಿಂದಾಗಿ ರಾಜ್ಯದಲ್ಲಿ 4 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಅಲ್ಲದೆ, ಈ ವಾಯುಭಾರ ಕುಸಿತ ನೋಡುತ್ತಿದ್ದರೆ ಮುಂದಿನ ಒಂದು ವಾರ ಮಳೆಯ ಅಬ್ಬರ ಇರಬಹುದು ಎನ್ನಲಾಗಿದೆ.

ಅಂದಹಾಗೆ, ಕರ್ನಾಟಕದ ಉತ್ತರ ಒಳನಾಡು & ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹಾಗೂ ಕರಾವಳಿ (karavali) ಜಿಲ್ಲೆಗಳಲ್ಲಿ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ ಎಂದು ತಿಳಿದುಬಂದಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ & ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಭಾರಿ ಮಳೆ ಬೀಳುವ ಮುನ್ಸೂಚನೆ ಸಿಕ್ಕಿದೆ.

ಉತ್ತರ ಒಳನಾಡು ಭಾಗದಲ್ಲಿ ಬಾಗಲಕೋಟೆ ಸೇರಿದಂತೆ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ & ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಬೀಳುವ ಮುನ್ಸೂಚನೆ ಸಿಗುತ್ತಿದೆ. ದಕ್ಷಿಣ ಕರ್ನಾಟಕದಲ್ಲಿ ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ ಸೇರಿ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ. ಕೊಡಗು & ಚಿಕ್ಕಮಗಳೂರಲ್ಲಿ ಭಾರೀ ಮಳೆಯಾಗಲಿದೆ.

ಉಡುಪಿ (Udupi), ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಮುನ್ಸೂಚನೆ ನೀಡಲಾಗಿದೆ. ಹಾಗಾಗಿ ದಕ್ಷಿಣ ಕನ್ನಡ (dakshina kannada), ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಯೆಲ್ಲೋ ಅಲರ್ಟ್ (yellow alert) ಘೋಷಿಸಲಾಗಿದೆ. ಈ ವಾರ ಮಾತ್ರವಲ್ಲ, ಸೆಪ್ಟೆಂಬರ್ ತಿಂಗಳು ಪೂರ್ತಿ ಭಾರೀ ಮಳೆಯಾಗಲಿದೆ.

Leave A Reply

Your email address will not be published.