Bpl card : ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್! ಹೊಸ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುವು! ಇಲ್ಲಿದೆ ನೋಡಿ ಡೀಟೇಲ್ಸ್

BPL Card : BPL ರೇಷನ್ ಕಾರ್ಡ್ (Ration Card)ಅಥವಾ ಪಡಿತರ ಚೀಟಿಯನ್ನು ಹೊಂದಿರುವ ಬಳಕೆದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ. ಬಡವರು ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರಕಾರದಿಂದ ಪಡಿತರ ಚೀಟಿ (Ration Card)ವ್ಯವಸ್ಥೆ ಮಾಡಲಾಗಿದೆ. ಇದೀಗ, ಪಡಿತರ ಚೀಟಿ ಹೊಂದಿರುವವರಿಗೆ(Ration Card Holder) ಗುಡ್ ನ್ಯೂಸ್(Good News)ಹೊರ ಬೀಳುವ ಸಾಧ್ಯತೆ ದಟ್ಟವಾಗಿದೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುವ ನಿಟ್ಟಿನಲ್ಲಿ ಕೆಲವರು ನಕಲಿ ದಾಖಲೆಗಳನ್ನು ನೀಡಿ ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ (BPL Card Application) ಸಲ್ಲಿಸುತ್ತಿದ್ದಾರೆ. ಈ ರೀತಿ ಮೋಸ ಮಾಡುವವರ ಪತ್ತೆಗಾಗಿ ಶೀಘ್ರದಲ್ಲೇ ಆಹಾರ ಇಲಾಖೆ ಹೊಸ ಮಾರ್ಗಸೂಚಿ (New Rules) ಬಿಡುಗಡೆ ಮಾಡಲಿದ್ದು, ಅಂಥವರ ಕಾರ್ಡನ್ನು ರದ್ದು ಮಾಡಲಾಗುತ್ತದೆ. ಇದರ ನಡುವೆಯೇ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.

ಬಿಪಿಎಲ್ ಕಾರ್ಡ್ದಾರರಿಗೆ (BPL Card) ಆಹಾರ ಇಲಾಖೆ (Food Department) ಗುಡ್ ನ್ಯೂಸ್ ನೀಡುವ ಸುಳಿವು ನೀಡಿದ್ದು, ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಡಿತರ ಚೀಟಿಯಲ್ಲಿರುವ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಸೆಪ್ಟೆಂಬರ್ 14ರ ವರೆಗೆ ಅನುವು ಮಾಡಿಕೊಡಲಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ 14 ರವರೆಗೆ ಕಾಲಾವಕಾಶ ನೀಡಲಾಗಿದೆ. ಈಗಾಗಲೇ ಸಲ್ಲಿಕೆಯಾಗಿರುವ 3 ಲಕ್ಷ ಎಪಿಎಲ್ ಕಾರ್ಡ್ ಅರ್ಜಿಗಳಲ್ಲಿ ಶೇ 75ರ ದೃಢೀಕರಣ ಪೂರ್ಣಗೊಂಡಿದ್ದು, ಸದ್ಯದಲ್ಲೆ ಈ ಕಾರ್ಡ್ಗಳನ್ನು ವಿತರಣೆ ಮಾಡುವ ಸಂಭವವಿದೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಕಾರ್ಡ್ಗಳನ್ನು ವಿತರಣೆ ಮಾಡಿದ್ದಲ್ಲಿ, ಹೊಸ ಕಾರ್ಡ್ಗಳಿಗೆ ಅವಕಾಶ ನೀಡಲು ಸಾಧ್ಯವಾಗುತ್ತದೆ.

ಬಿಪಿಎಲ್ ಕಾರ್ಡ್ಗಳಲ್ಲಿ ಮೃತಪಟ್ಟಿರುವ ಫಲಾನುಭವಿಗಳ ಹೆಸರುಗಳನ್ನು ಡಿಲೀಟ್ ಮಾಡಿಸುವ ಜೊತೆಗೆ ಆಹಾರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಬಳಸುತ್ತಿದ್ದ ಫಲಾನುಭವಿಗಳನ್ನ ಪತ್ತೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ತಿಂಗಳಷ್ಟೇ 5 ಲಕ್ಷಕ್ಕೂ ಹೆಚ್ಚು ಕಾರ್ಡ್ಗಳನ್ನು ರದ್ದು ಮಾಡಲಾಗಿದ್ದು, ರಾಷ್ಟ್ರೀಯ ಆಹಾರ ಹಕ್ಕು ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಮಿತಿಯನ್ನು ಮೀರಿದ್ದರಿಂದ ಹೊಸ ಅರ್ಜಿ ಸಲ್ಲಿಕೆಗೆ ಅನುವು ಮಾಡಿಕೊಡಲಾಗಿದೆ.

Leave A Reply

Your email address will not be published.