G-20 Summitː ಭಾರತಕ್ಕೆ ಬಂದ ಅಮೇರಿಕಾ ಪ್ರೆಸಿಡೆಂಟ್ ಬೈಡನ್ ಬೆಂಗಾವಲು ವಾಹನ ಚಾಲಕ ಪೋಲೀಸ್ ವಶಕ್ಕೆ!! ಅರೆ.. ಇದೇನಿದು ಶಾಕಿಂಗ್ ನ್ಯೂಸ್

G-20 Summitː ಜಿ20 ಶೃಂಗಸಭೆಯ (G20 Summit) ಹಿನ್ನೆಲೆ ಭಾರತಕ್ಕೆ ಆಗಮಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಬೆಂಗಾವಲು ವಾಹನ ಪಡೆಯ ಚಾಲಕನೊಬ್ಬ ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘಿಸಿದ್ದು, ಈ ಕಾರಣದಿಂದಾಗಿ ವಾಹನ ಚಾಲಕನನ್ನು ದೆಹಲಿಯಲ್ಲಿ ವಶಕ್ಕೆ ಪಡೆಯಲಾಯಿತು. ಆದರೆ, ವಿಚಾರಣೆಯ ನಂತರ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಾರು ಚಾಲಕ ಜೋ ಬೈಡನ್ ತಂಗಿದ್ದ ಐಟಿಸಿ ಮೌರ್ಯ ಹೋಟೆಲ್‌ಗೆ ಬೆಳಗ್ಗೆ 9:30ಕ್ಕೆ ಬರಬೇಕಿತ್ತು. ಆದರೆ, ಚಾಲಕ ಲೋಧಿ ಎಸ್ಟೇಟ್ ಪ್ರದೇಶದಿಂದ ಬಂದ ಉದ್ಯಮಿಯನ್ನು ತಾಜ್‌ಗೆ ಬಿಡಬೇಕಾಗಿದ್ದರಿಂದ ತಾಜ್ ಹೋಟೆಲ್‌ಗೆ ಅದೇ ಕಾರಿನಲ್ಲಿ ಬಂದಿದ್ದ. ಅಂದಹಾಗೆ, ಆತನಿಗೆ ಶಿಷ್ಟಾಚಾರದ (Protocol) ಬಗ್ಗೆ ಗೊತ್ತಿರಲಿಲ್ಲ ಎಂದು ಹೇಳಲಾಗಿದೆ.

ಈ ಘಟನೆ ನಡೆದಿದ್ದು, G-20 ಶೃಂಗಸಭೆ ಹಿನ್ನೆಲೆಯಲ್ಲಿ UAE ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ತಂಗಿದ್ದ ತಾಜ್ ಹೋಟೆಲ್‌ಗೆ ಅಮೆರಿಕ ಅಧ್ಯಕ್ಷರ ಬೆಂಗಾವಲು ಪಡೆಯ ಕಾರು ಪ್ರವೇಶಿಸಿದ ನಂತರ ಎನ್ನಲಾಗಿದೆ. ಬೆಂಗಾವಲು ವಾಹನದಲ್ಲಿ ಹಲವು ಸ್ಟಿಕರ್‌ಗಳಿರುವುದಾಗಿಯೂ ಭದ್ರತಾ ಸಿಬ್ಬಂದಿ ಸಂದೇಶ ರವಾನಿಸಿದ್ದಾರೆ. ವಾಹನ ಚಾಲನೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದಾಗಿ ಚಾಲಕನನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆಯ ನಂತರ ಆತನನ್ನು ಬಿಡುಗಡೆ ಮಾಡಲಾಗಿದೆ.

Leave A Reply

Your email address will not be published.