Krishi bhagya: ಮಹಿಳೆಯರ ಬಳಿಕ ರೈತರಿಗೆ ಭರ್ಜರಿ ಗುಡ್ ನ್ಯೂಸ್ – ಮತ್ತೆ ಈ ಯೋಜನೆ ಜಾರಿಗೆ ಮುಂದಾದ ಸರ್ಕಾರ- ಮುಖ್ಯಮಂತ್ರಿಗಳಿಂದ ಮಹತ್ವದ ನಿರ್ಧಾರ

Political news Congress government CM Siddaramaiah implement krishi Bhagya for farmers land

Krishi bhagya : ಧಾರವಾಡದ ಕೃಷಿ ವಿವಿಯಲ್ಲಿ ಶನಿವಾರ ಕೃಷಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಹೌದು, ಹಿಂದಿನ ಬಿಜೆಪಿ ಸರ್ಕಾರ ಕೃಷಿ ಭಾಗ್ಯ (Krishi bhagya) ಯೋಜನೆ ಸ್ಥಗಿತಗೊಳಿಸಿತ್ತು. ಈ ಯೋಜನೆಯನ್ನು ಮತ್ತು ಕೃಷಿ ಯಂತ್ರಧಾರೆ ಯೋಜನೆಗಳ ಮರು ಜಾರಿ ಘೋಷಿಸಲಾಗಿದೆ ಎಂದು ಸಿಎಂ (Siddaramaiah) ರೈತರಿಗೆ ಮತ್ತೇ ಸಿಹಿ ಸುದ್ದಿ ನೀಡಿದ್ದಾರೆ.

ರೈತರು ನಮ್ಮ ದೇಶದ ಬೆನ್ನೆಲುಬು ಮತ್ತು ನಮಗೆಲ್ಲ ಅನ್ನದಾತರು ಕೂಡ ಹೌದು. ಆದರೆ ರೈತರ ಕಷ್ಟ ರೈತರಿಗೇ ಗೊತ್ತು. ರೈತರು ತಮ್ಮ ಕೃಷಿ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಟ್ಟು ಬೆಳೆಸುತ್ತಾರೆ. ನಂತರ ಕಟಾವು ಮಾಡಿ ಮಾರಾಟ ಮಾಡಿ ಸರಿಯಾದ ಬೆಲೆಯನ್ನು ಪಡೆಯಲು ಸಾಧ್ಯ ಆಗದೆ ರೈತರು ಕಣ್ಗೆಟ್ಟು ಹೋಗುವುದು ಪ್ರತಿಯೊಂದು ವರ್ಷವೂ ಒಂದಲ್ಲಾ ಒಂದು ಕಾರಣದಿಂದ ನಡೆಯುತ್ತಲೇ ಇದೆ.

ಇದೀಗ ಒಣ ಬೇಸಾಯ ಮಾಡುವವರಿಗೆ ಅವಶ್ಯವಾಗಿರುವ ಕೃಷಿಭಾಗ್ಯ ಯೋಜನೆಯನ್ನು ಮತ್ತೆ ಆರಂಭಿಸುಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವುದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದರು.

ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು. ಆಗ ಮಾತ್ರ ವಿಜ್ಞಾನಿಗಳ ಸಂಶೋಧನೆಗಳು ಫಲಪ್ರದವಾಗುತ್ತದೆ. ಕೃಷಿ ಭಾಗ್ಯ, ಕೃಷಿ ಯಂತ್ರಧಾರೆ ಯೊಜನೆಗಳ ಮರುಜಾರಿ ಘೋಷಿಸಲಾಗಿದೆ. ರಾಜ್ಯದಲ್ಲಿ ಸಣ್ಣ ರೈತರು ಹೆಚ್ಚಿಗೆ ಇರುವುದರಿಂದ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರಗಳನ್ನು ರೈತರಿಗೆ ನೀಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯವಾಗಿ ರಾಜ್ಯ ಸರ್ಕಾರ ಈ ವರ್ಷದಿಂದ ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಮತ್ತು 15 ಲಕ್ಷ ರೂ.ವರೆಗೆ ಕೇವಲ ಶೇ.3 ರಷ್ಟು ಬಡ್ಡಿ ನಿಗದಿಗೊಳಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: Bangluru bandh: ಬೆಂಗಳೂರು ಬಂದ್ ಎಫೆಕ್ಟ್- ಇಂತವರು ರಸ್ತೆಗೆ ಬಂದ್ರೆ ಬೀಳುತ್ತೆ ಮೊಟ್ಟೆ ಏಟು !! ಸಂಘಟನೆಗಳಿಂದ ಖಡಕ್ ಎಚ್ಚರಿಕೆ

Leave A Reply

Your email address will not be published.