ಬಹುಮಹಡಿ ಕಟ್ಟಡದ ಲಿಫ್ಟ್ ಕುಸಿದು 7 ಮಂದಿ ಸಾವು
Maharashtra news 7 people died in multi-storied building lift collapse
Maharashtra : ಬಹುಮಹಡಿ ಕಟ್ಟಡದ ಲಿಫ್ಟ್ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಥಾಣೆಯಲ್ಲಿನ ಹೈಲ್ಯಾಂಡ್ ಪಾರ್ಕ್ ನಾರಾಯಣಿ ಶಾಲೆಯ ಪಕ್ಕದಲ್ಲಿರುವ ರನ್ವಾಲ್ ಗಾರ್ಡನ್‌ನ ಎಂಬ ಬಹುಮಹಡಿ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ.
40 ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಭಾನುವಾರ ಸಂಜೆ ಕಾರ್ಮಿಕರು ನೀರು ಹರಿಸಿ ಮೇಲಿನ ಅಂತಸ್ತಿನಿಂದ ಕೆಳಕ್ಕೆ ಲಿಫ್ಟ್ ನಲ್ಲಿ ಬರುತ್ತಿರುವ ವೇಳೆ ಈ ಅವಘಡ ಸಂಭವಿಸಿದೆ. ಲಿಫ್ಟ್ ಇದ್ದಕ್ಕಿದ್ದಂತೆ ಕುಸಿದಿದೆ. ಇದರಿಂದ ಸ್ಥಳದಲ್ಲೇ 6 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿತ್ತು ಗಾಯಾಳುಗಳ ಪೈಕಿ ಓರ್ವ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ದ.ಕ. : ಮತ್ತೆ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ ,ಅಪಾರ ಪ್ರಮಾಣದ ಕೃಷಿ ನಾಶ