Mangalore: ಮಂಗಳೂರಿನ ಪ್ರತಿಷ್ಠಿತ ಹೋಟೆಲ್‌ನ ಸ್ವಿಮ್ಮಿಂಗ್‌ಪೂಲ್‌ನಲ್ಲಿ ಬ್ಯಾಂಕ್‌ ಅಧಿಕಾರಿಯ ಶವ ಪತ್ತೆ!

Share the Article

Mangalore Crime News: ಮಂಗಳೂರಿನ ಹೋಟೆಲೊಂದರ ಸ್ವಿಮ್ಮಿಂಗ್‌ಪೂಲ್‌ನಲ್ಲಿ ವ್ಯಕ್ತಿಯೋರ್ವ ಮೃತದೇಹ ಪತ್ತೆಯಾಗಿದೆ. ಮೃತ ಪಟ್ಟಿರುವ ವ್ಯಕ್ತಿ ಬ್ಯಾಂಕ್‌ ಅಧಿಕಾರಿ ಎಂದು ತಿಳಿದು ಬಂದಿದೆ. ಈ ಘಟನೆ ನಗರದ ಪ್ರತಿಷ್ಠಿತ ಹೋಟೆಲ್‌ ಮೋತಿ ಮಹಲ್‌ನ ಸ್ಮಿಮ್ಮಿಂಗ್‌ ಪೂಲ್‌ನಲ್ಲಿ ನಡೆದಿದೆ.

ಮೃತಪಟ್ಟ ಅಧಿಕಾರಿಯನ್ನು ಬ್ಯಾಂಕ್‌ ಅಧಿಕಾರಿ ಎಂದು ತಿಳಿದುಬಂದಿದೆ. ಯೂನಿಯನ್‌ ಬ್ಯಾಂಕ್‌ ಅಧಿಕಾರಿ ಹುದ್ದೆಯ ವ್ಯಕ್ತಿ ಎಂದು ತಿಳಿದು ಬಂದಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್‌ ನಾಯರ್‌ ಎಂದು ಗುರುತಿಸಲಾಗಿದೆ.

ನಿನ್ನೆ ಮಂಗಳೂರಿಗೆ ಬಂದಿದ್ದ ಇವರು ಮೋತಿ ಮಹಲ್‌ ಹೋಟೆಲ್‌ನಲ್ಲಿ ಉಳಿದು ಕೊಂಡಿದ್ದು, ಇಂದು ಬೆಳಿಗ್ಗೆ 4 ಗಂಟೆಗೆ ಹೋಟೆಲ್‌ ರೂಮ್‌ನಿಂದ ಹೊರ ಹೋಗಿದ್ದು, ಈಜುಕೊಳಕ್ಕೆ ಇಳಿಯುವ ಮುನ್ನ ಮದ್ಯಪಾನ ಮಾಡಿದ್ದರೆಂದು ವರದಿಯಾಗಿದೆ. ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹನ್ನೊಂದು ಅಡಿ ಆಳದಲ್ಲಿದ್ದ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಗೋಪು ಆರ್‌ ನಾಯರ್‌ ಅವರ ಮೃತದೇಹವನ್ನು ಮುಳುಗು ತಜ್ಞರು ಹೊರತೆಗೆದಿದ್ದಾರೆ. ಈಜುತ್ತಿರುವಾಗ ಮೇಲೆ ಬರಲು ಸಾಧ್ಯವಾಗದೆ ಮುಳುಗಿರುವ ಅನುಮಾನ ವ್ಯಕ್ತವಾಗಿದೆ. ರೂಮ್‌ನಲ್ಲಿ ಮದ್ಯದ ಬಾಟಲಿ, ಆಹಾರ ಪತ್ತೆಯಾಗಿದ್ದು, ತನಿಖೆ ನಡೆಯುತ್ತಿದೆ.

Leave A Reply