Education News: ರಾಜ್ಯದ ಎಲ್ಲಾ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹೊಸ ಸೂಚನೆ- ಸರ್ಕಾರ ಮಾಡ್ತು ಮಹತ್ವದ ಘೋಷಣೆ !! ಏನದು ಗೊತ್ತಾ?

Education news NCERT syllabus for 1st PUC students from next academic years says KSEB

PUC Students: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ನೀಡಿದೆ. ಕರ್ನಾಟಕ ಪ್ರಥಮ ಪಿಯುಸಿ(PUC Students)ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಎನ್‌ಸಿಇಆರ್‌ಟಿ (NCERT) ಪಠ್ಯ ವಿಧಾನ ಕಲಿಸಲಾಗುವ ಕುರಿತು ಮಾಹಿತಿ ನೀಡಿದೆ.

ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನಿಂದ ಅದರಲ್ಲಿಯೂ ಪ್ರಥಮ ಪಿಯುಸಿ ಕಲಾ ಹಾಗೂ ವಾಣಿಜ್ಯ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ ಪಠ್ಯ) ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಲಾಗುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾಹಿತಿ ನೀಡಿದೆ.

ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಾದ ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರಾನ್ಸ್‌ ಟೆಸ್ಟ್‌ (NEET), ಜಾಯಿಂಟ್‌ ಎಂಟ್ರ್ಯಾನ್ಸ್‌ ಎಕ್ಸಾಮಿನೇಷನ್‌ (JEE) ಮತ್ತು ಕಾಮನ್ ಎಂಟ್ರ್ಯಾನ್ಸ್‌ ಟೆಸ್ಟ್‌( CET ) ಒಳಗೊಂಡಂತೆ ಇನ್ನುಳಿದ ಪರೀಕ್ಷೆಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ನೆರವಾಗುವ ಸದ್ದುದೇಶದಿಂದ 2013 ರಿಂದಲೇ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಹಂತಹಂತವಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ವಿಜ್ಞಾನ ವಿಷಯಗಳಿಗೆ ಒತ್ತು ನೀಡಲಾಗಿದ್ದು, ಇದೀಗ ವಾಣಿಜ್ಯ, ಕಲಾ ವಿಭಾಗದ ವಿಷಯಗಳನ್ನು ಕೂಡ ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಸಿಂಧೂ ಬಿ ರೂಪೇಶ್‌ ಮಾಹಿತಿ ನೀಡಿದ್ದಾರೆ.

2024-25 ಸಾಲಿನಿಂದ ಪ್ರಥಮ ಪಿಯುಸಿ ತರಗತಿಗಳಿಗೆ ಗಣಕ ವಿಜ್ಞಾನ, ಗೃಹ ವಿಜ್ಞಾನ ಮತ್ತು ಮನಃಶಾಸ್ತ್ರ ವಿಷಯಗಳ ಪಠ್ಯಪುಸ್ತಕಗಳನ್ನು ಮತ್ತು 2025-26ನೇ ಶೈಕ್ಷಣಿಕ ಸಾಲಿನಿಂದ ದ್ವಿತೀಯ ಪಿಯುಸಿ ತರಗತಿಗಳಿಗೆ ಅಳವಡಿಸಿಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶಕಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ. ಇಲ್ಲಿಯವರೆಗೆ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮಾತ್ರವೇ ಎನ್‌ಸಿಇಆರ್‌ಟಿ ಪಠ್ಯವನ್ನು ಅಧ್ಯಯನ ಮಾಡುತ್ತಿದ್ದರು. ಇನ್ನು ಮುಂದೆ ಕಲಾ ಹಾಗೂ ವಾಣಿಜ್ಯ ವಿದ್ಯಾರ್ಥಿಗಳಿಗೂ ಕೂಡ ಎನ್‌ಸಿಇಆರ್‌ಟಿ ಪಠ್ಯ ಕ್ರಮ ಅಳವಡಿಸಲು ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: PF ನಿರೀಕ್ಷೆಯಲ್ಲಿರೋರಿಗೆ ಸಿಹಿ ಸುದ್ದಿ- ಕೂಡಲೇ ಇದೊಂದು ಕೆಲಸ ಮಾಡಿರಿ, ಕೆಲವೇ ಗಂಟೆಗಳಲ್ಲಿ ಹಣ ಪಡೆಯಿರಿ

Leave A Reply

Your email address will not be published.