B K Hariprasad: ಸಿ ಎಂ ಸಿದ್ದರಾಮಯ್ಯರನ್ನು ಟೀಕಿಸುತ್ತಿರೋ ಬಿ. ಕೆ ಹರಿಪ್ರಸಾದ್’ಗೆ ಕಾಂಗ್ರೆಸ್ ನಿಂದ ಬಿಗ್ ಶಾಕ್ !!

Political news Congress party CM Siddaramaiah notice statement to BK Hariprasad

B K Hariprasad: ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ(Congress government)ಅಸ್ತಿತ್ವಕ್ಕೆ ಬಂದಾಗ ನಿಂದಲೂ ಪಕ್ಷದ ಒಳಗೊಳಗೆ ಅಸಮಾಧಾನಗಳು ಸ್ಫೋಟ ಗೊಳ್ಳುತ್ತಿವೆ. ಮೇಲ್ನೋಟಕ್ಕೆ ಯಾವುದೇ ರೀತಿಯ ತೊಂದರೆಗಳಿಲ್ಲದಂತೆ ಕಂಡರೂ ಕೂಡ ಪಕ್ಷದೊಳಗಡೆ ಕೆಲವೊಂದು ಭಿನ್ನಾಭಿಪ್ರಾಯಗಳಿವೆ. ಅದರಲ್ಲೂ ಕೂಡ ಇತ್ತೀಚಿನ ದಿನಗಳಲ್ಲಿ ವಿದಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದರಂತೂ(B K Hariprasad) ಸಚಿವ ಸ್ಥಾನ ಸಿಗದಿದ್ದರಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಆದರೀಗ ಈ ನಿಟ್ಟಿನಲ್ಲಿ ಹರಿಪ್ರಸಾದರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ.

ಹೌದು, ಬಿಜೆಪಿ ಸರ್ಕಾರ ಇರುವ ಸಂದರ್ಭದಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರಾಗಿದ್ದಾರೆ, ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕನಾಗಿ ಬಿಕೆ ಹರಿಪ್ರಸಾದ್ ಅವರು ಇದ್ದರು. ಈ ಸಂದರ್ಭದಲ್ಲಿ ಈ ಇಬ್ಬರು ನಾಯಕರುಗಳು ಬಾಯಿ ಬಾಯಿ ಎಂದುಕೊಂಡು ಓಡಾಡುತ್ತಿದ್ದರು. ಆದರೆ ಇದೀಗ ಚುನಾವಣೆಯಲ್ಲಿ ಗೆದ್ದು ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಾಗೂ ಸಿಎಂ ಸಿದ್ದರಾಮಯ್ಯನವರೇನ ತನಗೇ ಸಚಿವ ಸ್ಥಾನ ತಪ್ಪಲು ಕಾರಣ ಎಂದು ಹರಿಪ್ರಸಾದ್ ಅವರು ತಿಳಿದಿರುವ ಕಾರಣ ಅವಕಾಶ ಸಿಕ್ಕಾಗಲೆಲ್ಲ ನಿರಂತರವಾಗಿ ಸಿಎಂ ಸಿದ್ದು ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ.

ಮೊನ್ನೆಯೂ ಕೂಡ ಪಂಚೆ, ಖಾಕಿ ಚಡ್ಡಿ ಹಾಕಿದ್ರೆ ಸಮಾಜವಾದಿ ಆಗೋಲ್ಲ. ದೇವರಾಜ ಅರಸು ಕಾರಿನಲ್ಲಿ ಹೋದಾಕ್ಷಣ ದೇವರಾಜು ಅರಸು ಆಗುವುದಿಲ್ಲ, ಅವರ ಚಿಂತನೆ ಇರಬೇಕು. ಅಲ್ಲದೆ ನಾನು ಅಧಿಕಾರ ಸಿಕ್ಕಿಲ್ಲವೆಂದು ಅಡ್ವಾಣಿ ಅವರನ್ನು ಭೇಟಿ ಮಾಡಿ, ಅವರ ಮನೆಯಲ್ಲಿ ಉಪಹಾರ ಸ್ವೀಕರಿಸಿ ಬಿಜೆಪಿ ಸೇರಲು ಹೋಗಿರಲಿಲ್ಲ. ಯಾರು ಹೋಗಿದ್ದರು ಎಂಬುದಕ್ಕೆ ಸಾಕ್ಷಿಯಾಗಿದ್ದ ವೆಂಕಯ್ಯ ನಾಯ್ಡು ಹಾಗೂ ಅರವಿಂದ ಲಿಂಬಾವಳಿ ಈಗಲೂ ಇದ್ದಾರೆ ಎಂದು ಹೇಳಿದ್ದರು.ಎಂದು ಪರೋಕ್ಷವಾಗಿ ಹರಿಪ್ರಸಾದರು ವಾಗ್ದಾಳಿ ನಡೆಸಿದ್ದರು. ಸದ್ಯ ಇದನ್ನೆಲ್ಲ ಗಮನಿಸಿದ ಕಾಂಗ್ರೆಸ್ ಹೈಕಮಾಂಡ್ ಬಿ ಕೆ ಹರಿಪ್ರಸಾದ್ ಗೆ ನೋಟಿಸ್ ಕೊಡುವ ಮೂಲಕ ಶಾಕ್ ನೀಡಿದೆ.

ಸದ್ಯ ಹರಿಪ್ರಸಾದ್ ಅವರಿಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. 10 ದಿನಗಳ ಒಳಗೆ ಉತ್ತರ ನೀಡುವಂತೆ ನೋಟಿಸ್ ನೀಡಲಾಗಿದೆ. ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರನ್ನು ಬಹಿರಂಗವಾಗಿ ಟೀಕಿಸಿದ್ದ ಹಿನ್ನೆಲೆಯಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಏನಿದೆ ನೋಟಿಸ್ ನಲ್ಲಿ?
ಎಐಸಿಸಿ ಶಿಸ್ತುಪಾಲನಾ ಸಮಿತಿಯಿಂದ ಬಿ.ಕೆ. ಹರಿಪ್ರಸಾದ್​ಗೆ ಇಂದು ನೋಟಿಸ್ ಜಾರಿ ಆಗಿದೆ. ಬಿಜೆಪಿ ಮತ್ತು ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ನಾಯಕರಿಂದ ವೇದಿಕೆಯಲ್ಲಿ ಭಾಗಿಯಾಗಿ, ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಕಾರಣ ನೀಡಿ ಹತ್ತು ದಿನಗಳ ಒಳಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: High court: ಶಾಲಾ ಸಮಯದಲ್ಲಿ ಮಹತ್ವದ ಬದಲಾವಣೆ ?! ಹೈಕೋರ್ಟ್ ಹೇಳಿದ್ದೇನು ?!

Leave A Reply

Your email address will not be published.