“ಉಪ್ಪು ತಿಂದವರು ನೀರು ಕುಡಿಯಲೇ ಬೇಕು” ! ಚೈತ್ರಾ ಕುಂದಾಪುರ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯೆ

Share the Article

 

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಹುಕೋಟಿ ವಂಚಿಸಿದ ಪ್ರಕರಣದಲ್ಲಿ ಈಗಾಗಲೇ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ.ಆಕೆಗೂ ನನಗೂ ಯಾವುದೇ ರೀತಿಯ ಸಂಪರ್ಕ ಇರಲಿಲ್ಲ, ಆಕೆಯ ಬಂಧನವಾದ ವಿಚಾರವನ್ನು ಮಾಧ್ಯಮದ ಮೂಲಕ ತಿಳಿದಿದ್ದೇನೆ ಎಂದರು.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಬಹು ಕೋಟಿಯ ವಂಚನೆ ಪ್ರಕರಣದಲ್ಲಿ ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಯಾಗಲಿ, ಹೊರತು ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದರು.ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ಹಾಗೆಯೇ ಆಕೆ ತಪ್ಪು ಮಾಡಿದ್ದು ಸಾಬೀತಾದರೆ ಶಿಕ್ಷೆಗೆ ಗುರಿಯಾಗಲಿ ಎಂದರಲ್ಲದೇ, ಕೆಲವೊಂದು ಬಾರಿ ಒಂದೇ ವೇದಿಕೆಯಲ್ಲಿ ಸಿಕ್ಕಾಗ ಫೋಟೋ ತೆಗೆದುಕೊಂಡಿರಬಹುದು ವಿನಃ ವೈಯಕ್ತಿಕ ಯಾವುದೇ ಸಂಪರ್ಕ ಇರಲಿಲ್ಲ ಎಂದು ಅವರು ಹೇಳಿದರು.

ಈ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ಸಿಗುತ್ತದೆ ಎನ್ನುತ್ತಿದ್ದ ಚೈತ್ರಾಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಟಿಕೆಟ್ ಯಾರಿಗೆ ನೀಡಬೇಕು ಎನ್ನುವುದನ್ನು ಬಿಜೆಪಿ ಪಕ್ಷದ ಹಿರಿಯರು ಹಾಗೂ ವರಿಷ್ಠರು ನಿರ್ಧರಿಸುತ್ತಾರೆ, ಇಲ್ಲಿ ಯಾವುದೇ ಹಣದ ಆಮಿಷ, ವಂಚನೆ ನಡೆಯುವುದಿಲ್ಲ. ಉತ್ತಮ ಕಾರ್ಯಕರ್ತ ನಾಯಕರನ್ನು ಗುರುತಿಸಿ ಟಿಕೆಟ್ ನೀಡಲಾಗುತ್ತದೆ ಎಂದರು.

Leave A Reply