Rahul Gandhi: ರಾಹುಲ್ ಗಾಂಧಿ ವಿರುದ್ಧ ಮತ್ತೆ ಹರಿಹಾಯ್ದ ಹಿಮಂತ ಬಿಸ್ವಾ: ಪ್ರಧಾನಿಯಾಗಲು ಚಂದ್ರ ಗ್ರಹದಲ್ಲಿ ಪ್ರಯತ್ನಿಸಲು ಸಲಹೆ!
Political news Assam CM Himanta biswa sarma says no chance for Rahul Gandhi become prime minister on earth
Himanta Biswa Sarma: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ರಾಹುಲ್ ಗಾಂಧಿ (Rahul Gandhi) ಕುರಿತಂತೆ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಹೆಸರನ್ನು ಬದಲಿಸಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದ ಹಿಮಂತ ಬಿಸ್ವಾ ರಾಹುಲ್ ಗಾಂಧಿಗೆ ಪ್ರಧಾನಿಯಾಗಲು ಭೂಮಿಯಲ್ಲಿ ಅವಕಾಶವಿಲ್ಲ ಎಂದು ಹರಿಹಾಯ್ದಿದ್ದಾರೆ.
ಇತ್ತೀಚೆಗಷ್ಟೇ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ, ಗಾಂಧಿ ಕುಟುಂಬ”ದೇಶವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ಹೆಸರಿನ ಗಾಂಧಿ ಪಟ್ಟವನ್ನು ಬಿಟ್ಟುಕೊಡಬೇಕು ಎಂದು ಪಟ್ಟು ಹಿಡಿದಿದ್ದಲ್ಲದೇ, ಈ ಗಾಂಧಿ ಕುಟುಂಬವು “ನಕಲಿಗಳ ಸರದಾರ” ಅಷ್ಟೆ ಅಲ್ಲದೇ, ಅವರು “ಹಲವಾರು ಹಗರಣಗಳನ್ನು” ಮಾಡಿದ್ದಾರೆ ಎಂದು ಆರೋಪಿಸಿದ್ದರು. ಇದೀಗ,ಮತ್ತೊಮ್ಮೆ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದ ಬಿಸ್ವಾ ಸಲಹೆಯೊಂದನ್ನು ನೀಡಿದ್ದಾರೆ.
ಹಿಮಂತ್ ಬಿಸ್ವಾ ಶರ್ಮಾ ಬಿಹಾರದ ನಲಂದಾ ಜಿಲ್ಲೆಯ ರಾಜ್ ಗಿರ್ ಗೆ ಭೇಟಿ ನೀಡಿದ್ದ ಸಂದರ್ಭ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸನಾತನ ಧರ್ಮವನ್ನು ಪ್ರಶ್ನಿಸುತ್ತಿರುವ ಇಂಡಿಯಾ ಮೈತ್ರಿಕೂಟಕ್ಕೆ 2024ರ ಲೋಕಸಭಾ ಚುನಾವಣಾ ವೇಳೆಗೆ ಜನರು ಸರಿಯಾದ ಉತ್ತರ ನೀಡಲಿದ್ದಾರೆ ಎಂಬ ವಿಶ್ವಾಸವನ್ನು ಇದೇ ವೇಳೆ ಸಚಿವರು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮುಖಂಡ ಮತ್ತು ಇಂಡಿಯಾ ಮೈತ್ರಿಕೂಟದ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಾಗ್ದಾಳಿ ನಡೆಸಿದ್ದು, ಒಂದು ವೇಳೆ ರಾಹುಲ್ ಗಾಂಧಿಗೆ ಈ ದೇಶದ ಪ್ರಧಾನಿಯಾಗಬೇಕೆಂಬ ಅಭಿಲಾಷೆಯಿದ್ದರೆ ರಾಹುಲ್ ಗಾಂಧಿ ಸೂರ್ಯ ಇಲ್ಲವೇ ಚಂದ್ರಗ್ರಹಕ್ಕೆ ಹೋಗುವುದು ಉತ್ತಮವೆಂದು ಬಿಸ್ವರವರು ಲೇವಡಿ ಮಾಡಿದ್ದಾರೆ.
ಇದನ್ನೂ ಓದಿ: Arabic College: ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಗ್ರ ತರಬೇತಿ- ದೇಶದ ಈ ಭಾಗಗಳಲ್ಲಿ ನಡೆಯುತ್ತಿದೆ NIA ಶೋದ