CM Siddaramaiah: ಸುಳ್ಳು ಸುದ್ದಿ ಹರಡೋರಿಗೆ, ದ್ವೇಷದ ಭಾಷಣ ಮಾಡೋರಿಗೆ ಬಂತು ಹೊಸ ಕಾನೂನು !! CM ಸಿದ್ದರಾಮಯ್ಯನಿಂದ ಖಡಕ್ ಎಚ್ಚರಿಕೆ

Political news CM Siddaramaiah says keep strict vigilance and take strict action against who spread false news

CM Siddaramaiah: ಬೆಂಗಳೂರು ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು ಮತ್ತು ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆದರೆ ಡಿಸಿಪಿ, ಎಸ್‍ಪಿ ಮಟ್ಟದ ಅಧಿಕಾರಿಗಳನ್ನು ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ತಿಳಿಸಿದ್ದಾರೆ.

ನೃಪತುಂಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೀಡಿದ ಸೂಚನೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ. ಸುಳ್ಳು ಸುದ್ದಿ, ದ್ವೇಷ ಭಾಷಣಕ್ಕೆ ‘ಸುಮೋಟೋ ಕೇಸ್’ ಹಾಕಲು ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ. ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಸುಮ್ಮನಾಗುವುದಿಲ್ಲ. ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಸುಳ್ಳು ಸುದ್ದಿ ಹಬ್ಬಿಸುವ ಮತ್ತು ದ್ವೇಷ ಭಾಷಣದ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಸಾರ್ವಜನಿಕರು ದೂರು ನೀಡುವವರೆಗೆ ಕಾದುಕೊಂಡು ಕೂರಬೇಕಾಗಿಲ್ಲ. ಪೊಲೀಸರೇ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನೈತಿಕ ಪೊಲೀಸ್ ಗಿರಿ, ದ್ವೇಷ ಭಾಷಣಕಾರರು ಹಾಗೂ ಸುಳ್ಳು ಸುದ್ದಿ ಹಬ್ಬಿಸುವವರು ಒಳಗೊಂಡಂತೆ ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡುವವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ( ಸುಮೋಟೋ) ಪ್ರಕರಣವನ್ನು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಹಿಳೆಯ ಶೇಪ್ ಇರೋ ಟ್ರೋಫಿ ನೋಡಿದ್ರೆ ಟೆಂಪ್ಟ್ ಆಗುತ್ತೆ – ಅದಕ್ಕೆ ಹೀಗ್ ಮಾಡಿ ಎಂದ ನಟ !! ಏನಿದು ಹೊಸದಾದ ವಿಚಿತ್ರ ಮನವಿ

Leave A Reply

Your email address will not be published.