Bantwala: ಏಕಾಏಕಿ ಕುಸಿದು ಬಿದ್ದು ಬಂಟ್ವಾಳ ಬಿಜೆಪಿ ಯುವ ಕಾರ್ಯಕರ್ತ ಸಾವು

Bantwala: ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಮದ್ದು ಪಡೆಯಲು ಬಂದಂತಹ ಯುವ ಬಿಜೆಪಿ(BJP) ಕಾರ್ಯಕರ್ತನೋರ್ವ ಸ್ಥಳದಲ್ಲೇ ಏಕಾ ಏಕಿ ಕುಸಿದು ಬಿದ್ದು ಮೃತ ಪಟ್ಟ ಘಟನೆ ದಕ್ಷಿಣ ಕನ್ನಡ(Dakshina kannada) ಜಿಲ್ಲೆ ಬಂಟ್ವಾಳ(Batwala)ದಲ್ಲಿ ನಡೆದಿದೆ.

ಹೌದು, ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಬೆಳ್ಳೂರು(43) ಅವರು ಅ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಔಷಧಿಗೆಂದು ಸೆ.18ರಂದು ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಪ್ರಕಾಶ್ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಂದಹಾಗೆ ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದಾರೆ.

ಇನ್ನು ಪ್ರಮುಖ ಬಿಜೆಪಿ ನಾಯಕರಾದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ಸಹಿತ ಅನೇಕ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Leave A Reply