Chaitra Kundapura: ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ದುಡ್ಡು ಕೊಟ್ಟ ಉದ್ಯಮಿ ‘ಗೋವಿಂದ’ ಬಾಬುಗೆ ಎದುರಾಯ್ತು ಹೊಸ ಸಂಕಷ್ಟ

Chitra kundapura fraud case CCB called Govind Babu pujari for MLA ticket 5 crore money fraud case investigation

Chaitra Kundapura Fraud Case :ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ (Chaitra Kundapura Fraud Case)ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವ ಭರವಸೆ ನೀಡಿ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬಂಧಿಸಿದ್ದು ಗೊತ್ತಿರುವ ಸಂಗತಿ. ಚೈತ್ರ ಕುಂದಾಪುರ ಬಂಧನದ ಬಳಿಕ ಅನೇಕ ರೋಚಕ ಮಾಹಿತಿಗಳು ಹೊರ ಬೀಳುತ್ತಿವೆ.

ಚೈತ್ರಾ ಕುಂದಾಪುರ(Chaitra Kundapura) ಮತ್ತು ಆಕೆಯ ತಂಡ ಎಂಎಲ್​ಎ(MLA) ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ವಂಚನೆ ಕೇಸ್ ಕುರಿತಂತೆ ಈ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರಾಗಿರುವ ಗೋವಿಂದ ಬಾಬು ಪೂಜಾರಿಗೆ(Govinda Babu Poojary) ಮತ್ತೆ ವಿಚಾರಣೆಗೆ ಹಾಜರಾಗಲು ಸಿಸಿಬಿ(CCB) ಪೊಲೀಸರು ಸೂಚನೆ ನೀಡಿದ್ದಾರೆ.

ಸಿಸಿಬಿ ಅಧಿಕಾರಿಗಳು ಗೋವಿಂದ ಪೂಜಾರಿಯ ಸಂಪೂರ್ಣ ಹಣದ ವಿವರ ಕಲೆ ಹಾಕುತ್ತಿದ್ದು ಹಣದ ಅದಾಯದ ಮೂಲದ ಬಗ್ಗೆಯೂ ಮಾಹಿತಿ ಕೇಳಿದ್ದಾರೆ ಎನ್ನಲಾಗಿದೆ. ಸಾಲ ಮಾಡಿ ಹಣ ಕೊಟ್ಟಿರುವೆ ಎಂದು ಗೋವಿಂದ ಪೂಜಾರಿ ತಿಳಿಸಿದ್ದು, ಅದರ ಬಗ್ಗೆಯೂ ಸಿಸಿಬಿ ಪೊಲೀಸರು ತನಿಖೆ ಮಾಡಲಿದ್ದಾರೆ. ಬ್ಯಾಂಕ್ ನಿಂದ ಆ ಸಾಲದ ಬಗ್ಗೆ ಮಾಹಿತಿ ಕಲೆ ಹಾಕಲಿದ್ದು, ನಗದು ರೂಪದಲ್ಲಿ ಹಣ ನೀಡಿರುವ ಹಿನ್ನೆಲೆ ಈ ಎಲ್ಲಾ ಮಾಹಿತಿ ನೀಡಿಬೇಕಾದ ಅವಶ್ಯಕತೆ ಎದುರಾಗಿದೆ. ಸಿಸಿಬಿ ಪೊಲೀಸರುಈ ಎಲ್ಲ ಮೂಲ ದಾಖಲಾತಿಗಳನ್ನು ಸಲ್ಲಿಸಲು ಗೋವಿಂದ ಬಾಬುಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸದ್ಯ ಸಿಸಿಬಿ ಐದು ಕೋಟಿ ಮೂಲದ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಿಸಿಬಿ ಪೊಲೀಸರು ಗೋವಿಂದ ಬಾಬು ಅವರಿಂದ ಮಾಹಿತಿ ಸಂಗ್ರಹ ಮಾಡಲಿದ್ದು, ಹಣದ ಮೂಲದ ಬಗ್ಗೆ ಸಮಗ್ರ ಮಾಹಿತಿ ನೀಡದೆ ಹೋದರೆ ಗೋವಿಂದ ಬಾಬು ಪೂಜಾರಿಗೂ ಸಂಕಷ್ಟ ಎದುರಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಈಗಾಗಲೇ ಮಹಜರು ಪ್ರಕ್ರಿಯೆ ನಡೆಸಲಾಗಿದ್ದು, ವಿಜಯನಗರದ ನಿವಾಸ, ಕೆಕೆ ಗೆಸ್ಟ್ ಹೌಸ್, ಗೋವಿಂದ ಬಾಬು ಪೂಜಾರಿ ಕಚೇರಿ ಸೇರಿ ಹಲವೆಡೆ ಮಹಜರು ನಡೆಸಲಾಗಿದೆ.

ಈ ಪ್ರಕರಣದಲ್ಲಿ ಇಲ್ಲಿಯವರೆಗೆ 2 ಕೋಟಿಗೂ ಹೆಚ್ಚು ಮೌಲ್ಯದ ನಗದು, ಚಿನ್ನ ಜಪ್ತಿ ಮಾಡಲಾಗಿದೆ. ಚೈತ್ರಾ ಕುಂದಾಪುರ ತನ್ನ ಸಂಬಂಧಿಕರ ಹೆಸರಲ್ಲಿ ಖಾಸಗಿ ಬ್ಯಾಂಕ್​ನಲ್ಲಿ ಇಟ್ಟಿದ್ದ 1 ಕೋಟಿ ಎಂಟು ಲಕ್ಷದ ಠೇವಣಿ ಪತ್ರ ಜಪ್ತಿ ಮಾಡಲಾಗಿದೆ. ಚೈತ್ರಾಗೆ ಸೇರಿದ್ದ ಸುಮಾರು 65 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದ್ದು, ತನ್ನ ಭಾವ ಮ್ಯಾನೇಜರ್ ಆಗಿದ್ದ ಬ್ಯಾಂಕ್​ನಲ್ಲಿ ಇಟ್ಟಿದ್ದ 40 ಲಕ್ಷ ಜಪ್ತಿ ಮಾಡಲಾಗಿದೆ. ಶ್ರೀಕಾಂತ್ ಅಕೌಂಟ್​ನಲ್ಲಿ ನಲವತ್ತೈದು ಲಕ್ಷ ಜಪ್ತಿ ಮಾಡಲಾಗಿದ್ದು, ಸ್ವಾಮೀಜಿ ಈಗಾಗಲೇ 50 ಲಕ್ಷ ರೂಪಾಯಿ ಗೋವಿಂದ ಪೂಜಾರಿಗೆ ಹಿಂದಿರುಗಿಸಲಾಗಿದೆ ಎನ್ನಲಾಗಿದೆ. ಸದ್ಯ ಚೈತ್ರಾ ಖರೀದಿ ಮಾಡಿದ್ದ ಕಿಯಾ ಕಾರು ವಶಕ್ಕೆ ಪಡೆದಿದ್ದು, ಸುಮಾರು ಮೂರು ಕೋಟಿ ಮೂವತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಲಾಗಿದೆ. ಇನ್ನುಳಿದ ಹಣಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: SchoolTimings: ಶಾಲಾ ಸಮಯದಲ್ಲಿ ಮಹತ್ವದ ಬದಲಾವಣೆ ?! ರೊಚ್ಚಿಗೆದ್ದ ಪೋಷಕರು !!

Leave A Reply

Your email address will not be published.