ಖ್ಯಾತ ನಟ ವಿಜಯ್ ಆಂಟೋನಿ ಪುತ್ರಿ ಶವವಾಗಿ ಪತ್ತೆ!!!

ಚೆನ್ನೈ: ನಟ ಮತ್ತು ಸಂಗೀತ ಸಂಯೋಜಕ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಮಂಗಳವಾರ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೀರಾ 12 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ನಟನ ಮನೆಯಲ್ಲಿ ಲಾರಾ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.

ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಉಳಿಸಲಾಗಲಿಲ್ಲ. ಮೂಲಗಳ ಪ್ರಕಾರ, ಮೀರಾ ಅವರು ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮೈಲಾಪುರ ಪೊಲೀಸರು ಅಸ್ವಾಭಾವಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply