Cauvery Issue: ಕಾವೇರಿ ನೀರು ವಿವಾದ – ಕರ್ನಾಟಕಕ್ಕೆ ಬಿಗ್ ಶಾಕ್ ಕೊಟ್ಟ ಸುಪ್ರೀಂ !! ತಮಿಳುನಾಡಿಗೆ ನಿತ್ಯವೂ ನೀರು

Cauvery issue supreme court notice to state to release water to Tamilnadu daily

 

Cauvery issue : .ಕರ್ನಾಟಕಕ್ಕೆ ಕಾವೇರಿ ನೀರಿನ ಹಂಚಿಕೆ(Cauvery Issue)ವಿಚಾರಕ್ಕೆ ಸುಪ್ರೀಂ ಕೋರ್ಟ್(Supreme Court)ಮೆಟ್ಟಿಲೇರಿದ್ದು ಗೊತ್ತಿರುವ ಸಂಗತಿ. ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ತಮಿಳುನಾಡಿಗೆ ನಿತ್ಯ ನೀರು ಬಿಡಲು ರಾಜ್ಯಕ್ಕೆ ಸೂಚನೆ ನೀಡಿದೆ. ಇದೀಗ, ಕರ್ನಾಟಕಕ್ಕೆ (Karntakata)ಮತ್ತೊಮ್ಮೆ ಹಿನ್ನೆಡೆ ಉಂಟಾಗಿದೆ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ಸರ್ವೋಚ್ಛ ನ್ಯಾಯಾಲಯ ನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.

ತಮಿಳುನಾಡಿಗೆ(Tamilnadu)ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್‌ ನೀರು ಬಿಡಲು ಸೂಚನೆ ನೀಡಲಾಗಿದೆ. ಇದಾದ ಬಳಿಕ, ನೀರಿನ ಲಭ್ಯತೆಯನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕಾಗಿದ್ದು, ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ಪೀಠ ಸೂಚನೆ ನೀಡಿದೆ. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಕಾವೇರಿ ನಿಯಂತ್ರಣ ಆಯೋಗ ಹಾಗೂ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ. ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕು. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕಾಗಿದ್ದು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ : Death News: ಶಾಲೆಯಲ್ಲೇ 9ನೇ ತರಗತಿ ವಿದ್ಯಾರ್ಥಿಗೆ ಹೃದಯಾಘಾತ- ಕುಸಿದು ಬಿದ್ದು ಸ್ಥಳದಲ್ಲೇ ಸಾವು !

Leave A Reply

Your email address will not be published.