Gift politics: ಸಿದ್ದರಾಮಯ್ಯ ಗಿಫ್ಟ್ ಪ್ರಕರಣ- ಕಾಂಗ್ರೆಸ್ ನ 135 ಶಾಸಕರು ಅನರ್ಹ ?! ಅರೆ ಏನಿದು ಶಾಕಿಂಗ್ ನ್ಯೂಸ್ ?!
Karnataka political news Gift politics 135 Congress MLA should be disqualified HD kumaraswamy pleads to election commission
Gift politics: ಸಿಎಂ ಸಿದ್ದರಾಮಯ್ಯನವರು(CM Siddaramaiah) ಚುನಾವಣಾ ಸಮಯದಲ್ಲಿ ವರುಣ ಕ್ಷೇತ್ರದ ಜನರಿಗೆ ಕುಕ್ಕರ್ ಗಿಫ್ಟ್ ನೀಡಿದ್ದರು ಎಂಬ ವಿಚಾರವನ್ನು ಸ್ವತಃ ಅವರ ಮಗ ಯತೀಂದ್ರ ಸಿದ್ದರಾಮಯ್ಯರವರೇ(Yatindra Siddaramaiah) ಬಹಿರಂಗಪಡಿಸಿದ್ದು, ಇದು ರಾಜ್ಯ ರಾಜಕೀಯದಲ್ಲಿ ಮಾತ್ರವಲ್ಲದೆ ಕಾಂಗ್ರೆಸ್ ಪಾಳಯದಲ್ಲೂ ಭಾರಿ ಸಂಚಲನೆ ಸೃಷ್ಟಿದೆ. ಮಗನ ಒಂದೇ ಒಂದು ಹೇಳಿಕೆಯೇ ಇದೀಗ ಸಿಎಂ ಸಿದ್ದರಾಮಯ್ಯನವರಿಗೆ ಸಂಚಕಾರ ತಂದೊದಗಿಸಿದೆ.
ಲೋಕಸಭಾ ಚುನಾವಣೆ ಹೊತ್ತಲ್ಲಿ ರಾಜ್ಯದ ವಿರೋಧ ಪಕ್ಷಗಳಿಗೆ ಇದೊಂದು ಪ್ರಬಲ ಅಸ್ತ್ರವಾಗಿದ್ದು, ಮೈತ್ರಿ ಮಾಡಿ ದೋಸ್ತಿಯಾಗಲು ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇದನ್ನು ಯಾರೂ ಮಣಿಸಲಾಗಾದ ಕಾಂಗ್ರೆಸ್ ನ ಮಾಸ್ ಲೀಡರ್ ಸಿಎಂ ಸಿದ್ದರಾಮಯ್ಯನವರ ವಿರುದ್ಧ ನೇರವಾಗಿ ಪ್ರಯೋಗಿಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ ಯತೀಂದ್ರ ಸಿದ್ದರಾಮಯ್ಯ ಅವರ ಮಾತಿನಿಂದ ಕಾಂಗ್ರೆಸ್ ಅಭ್ಯರ್ಥಿಗಳು ಗಿಫ್ಟ್ ಪಾಲಿಟಿಕ್ಸ್(Gift politics) ಮೂಲಕ ಗೆಲುವು ಸಾಧಿಸಿದ್ದಾರೆಂಬುದು ತಿಳಿದುಬಂದಿದೆ. ಈ ಆಧಾರದಲ್ಲಿ ತನಿಖೆ ಮಾಡಿ 135 ಕಾಂಗ್ರೆಸ್ ಶಾಸಕರನ್ನೂ ವಜಾಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಅಂದಹಾಗೆ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಸಮುದಾಯಕ್ಕೆ ಕುಕ್ಕರ್, ತವಾ, ಇಸ್ತ್ರಿಪೆಟ್ಟಿಗೆ ಹಂಚಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಸಮುದಾಯವೊಂದರ ಭಾಷಣದಲ್ಲಿ ಹೇಳಿದ್ದಾರೆ. ಇದು ಅಸಲಿ ಹಸ್ತದ ಹಕೀಕತ್ತು ಆಗಿದೆ. ರಾಜ್ಯದ ಎಲ್ಲ ಕಾಂಗ್ರೆಸ್ ಶಾಸಕರ ಗೆಲುವಿನ ಬಗ್ಗೆ ತನಿಖೆ ಮಾಡಿ ಚುನಾವಣಾ ಆಯೋಗವು 135 ಶಾಸಕರನ್ನು ಅಮಾನತು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಇಷ್ಟೇ ಅಲ್ಲದೆ ‘ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟ ಕಾಂಗ್ರೆಸ್ ಪಕ್ಷದ ‘ಅಸಲಿ ಹಸ್ತ’ದ ಹಕೀಕತ್ತು ಹೀಗಿದೆ ನೋಡಿ. ಸ್ವತಃ ರಾಜ್ಯದ ಘನತವೇತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ರಾಮಯ್ಯ ಅವರ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?’ ಎಂದು ಕೇಳಿದ್ದಾರೆ.
ದೂರು ಕೊಡಲು ರೆಡಿಯಾದ ಬಿಜೆಪಿ:
ದೂರು ಕೊಡಲು ಬಿಜೆಪಿ ನಿರ್ಧಾರ
ಚುನಾವಣೆಯಲ್ಲಿ ಕುಕ್ಕರ್ ಹಂಚಿಕೆ ಮಾಡಿ ಗೆಲುವು ಸಾಧಿಸಿದ್ದೇವೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಚುನಾವಣಾ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆಂದು ದೂರು ಕೊಡಲು ಬಿಜೆಪಿ ನಿರ್ಧಾರ ಮಾಡಿದೆ. ಇದನ್ನೇ ರಾಜಕೀಯ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ. ಸಿದ್ದರಾಮಯ್ಯ ಶಾಸಕ ಸ್ಥಾನವನ್ನು ಅನರ್ಹ ಮಾಡುವಂತೆ ಕೋರಿ ಬಿಜೆಪಿ ದೂರು ಕೊಡಲು ಮುಂದಾಗಿದೆ.
ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
ವಿಧಾನಸಭಾ ಚುನಾವಣೆ ವೇಳೆ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಲು ಸಾವಿರಾರು ಜನರನ್ನು ಸೇರಿಸಿದ್ದಲ್ಲದೆ, ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿ ಪೆಟ್ಟಿಗೆಯನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ಅವರು ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು” ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದು ಈಗ ವಿವಾದಕ್ಕೆ ಕಾರಣವಾಗಿದೆ.