Jhansi: ಕೋರ್ಟ್ ಗೆ ಕರೆದೊಯ್ಯುವಾಗ ಪೋಲಿಸ್ ಕಸ್ಟಡಿಯಿಂದ ಎಸ್ಕೇಪ್ ಆದ ಮೂವರು ಆರೋಪಿಗಳು – ವೈರಲ್ ಆಯ್ತು ವಿಡಿಯೋ

national news three prisoners escape from cutody as police leave van alone

Jhansi: ಜಾನ್ಸಿಯಲ್ಲಿ( Jhansi)ರೈಲ್ವೆ ನಿಲ್ದಾಣದಲ್ಲಿ ಮೊಬೈಲ್ ಕಳವುಗೈದ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಕೋರ್ಟ್ ಗೆ ಕರೆದೊಯ್ಯುತ್ತಿರುವ ಸಂದರ್ಭ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಪರಾರಿಯಾದ(Escape)ಘಟನೆ ನಡೆದಿದೆ.

11 ಜನ ಪೊಲೀಸ್ ಅಧಿಕಾರಿಗಳು ಒಟ್ಟು ಏಳು ಆರೋಪಿಗಳನ್ನು ಜಾನ್ಸಿ ರೈಲ್ವೆ ಕೋರ್ಟ್ ಗೆ ಹಾಜರುಪಡಿಸಲು ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಕೋರ್ಟ್ ಹೊರಭಾಗದಲ್ಲಿ ಪೊಲೀಸ್ ವ್ಯಾನ್(Police Van)ನಿಲ್ಲಿಸಿದ ಸಂದರ್ಭ ಯಾವುದೇ ಭದ್ರತಾ ಸಿಬಂದಿ ಇಲ್ಲದಿರುವುದನ್ನು ಖಾತ್ರಿ ಮಾಡಿಕೊಂಡ ಮೂವರು ಆರೋಪಿಗಳು ವ್ಯಾನ್ ನ ಬಾಗಿಲು ತೆರೆದು ಪರಾರಿಯಾಗಿದ್ದಾರೆ. ಈ ಘಟನೆ ನಡೆದ ಸಂದರ್ಭದಲ್ಲಿ ವ್ಯಾನ್ ನೊಳಗೆ ಒಟ್ಟು ಏಳು ಆರೋಪಿಗಳಿದ್ದರು. ಇದರಲ್ಲಿ ಮೂವರು ಆರೋಪಿಗಳು ಪರಾರಿಯಾಗಿರುವುದಾಗಿ ವರದಿಯಾಗಿದೆ.ಆರೋಪಿಗಳು ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೂವರು ಆರೋಪಿಗಳು ವ್ಯಾನ್ ನ ಬಾಗಿಲು ತೆರೆದು ರಸ್ತೆಯಲ್ಲಿ ಓಡುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸೆ.19ರಂದು (ಮಂಗಳವಾರ) ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ. ಪರಾರಿಯಾಗಿರುವ ಮೂವರು ಆರೋಪಿಗಳನ್ನು ಬ್ರಿಜೇಂದ್ರ (27ವರ್ಷ), ಶೈಲೇಂದ್ರ (20ವರ್ಷ) ಹಾಗೂ ಜ್ಞಾನಪ್ರಸಾದ್ (23 ವರ್ಷ) ಎಂದು ಗುರುತಿಸಲಾಗಿದೆ.ಪರಾರಿಯಾಗಿರುವ ಮೂವರು ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಸದ್ಯ, ಮೂವರು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 11 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಪ್ರಕರಣದ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಎರಡು ಪೊಲೀಸ್ ತಂಡವನ್ನು ರಚಿಸಲಾಗಿದೆ. ರೈಲ್ವೆ ಕೋರ್ಟ್ ಸುತ್ತಮುತ್ತಲಿನ ಸಿಸಿಟಿವಿ ಫೂಟೇಜ್ ಗಳನ್ನ ಪರಿಶೀಲನೆ ಮಾಡಲಾಗುತ್ತಿದ್ದು, ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.

Leave A Reply

Your email address will not be published.