DK Shivakumar: ನನ್ನ ಸುದ್ದಿಗೆ ಬಂದವರ ಸೆಟಲ್‌ಮೆಂಟ್ ಆಗಿದೆ – ಅಚ್ಚರಿಯ ಸ್ಟೇಟ್ಮೆಂಟ್ ನೀಡಿದ ಡಿ.ಕೆ.ಶಿವಕುಮಾರ್

Political news settlement of those who came to my news says DCM DK Shivakumar

DK Shivakumar: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ಖಡಕ್ ಟಾಂಗ್ ಒಂದನ್ನು ನೀಡಿದ್ದಾರೆ. ಹೌದು, ನನ್ನ ಸುದ್ದಿಗೆ ಬಂದವರದ್ದು ಒಂದೊಂದೇ ಸೆಟಲ್‌ಮೆಂಟ್ ಆಗಿದೆ. ಸದ್ಯಕ್ಕೆ ಈಶ್ವರಪ್ಪ ವಿಶ್ರಾಂತಿ ಪಡೆಯುತ್ತಿದ್ದಾರೆ ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಈಗಾಗಲೇ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಡಿಕೆ ಅವರು ʼನೀರಿನ ಕಳ್ಳʼ ಎಂಬ ಹೇಳಿಕೆಯೊಂದಿಗೆ, ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ ‘ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಕಾವೇರಿ ನೀರನ್ನು ಒತ್ತೆ ಇಟ್ಟಿದ್ದಾರೆ, ಅವರು ʼನೀರಿನ ಕಳ್ಳʼ ಎಂದು ಟೀಕೆ ಮಾಡಿದ್ದರು.

ಈ ಹೇಳಿಕೆಗೆ ಪ್ರತ್ಯುತ್ತರವಾಗಿ ಡಿಕೆ ಅವರು “ಪ್ರಸ್ತುತ ಈಶ್ವರಪ್ಪ ಅವರು ಎಲ್ಲಿದ್ದಾರೆ? ನಾನೆಲ್ಲಿ ಇದ್ದೀನಿ? ವಿಧಾನಸಭೆಯಲ್ಲಿ ನನ್ನ ಅಪ್ಪನ ಬಗ್ಗೆ ಮಾತಾಡಿದ್ದರು. ಈಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ, ತೆಗೆದುಕೊಳ್ಳಲಿ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರಕಾರದ ವಿಸರ್ಜನೆ! ಪ್ರಭಾವಿ ಸಚಿವರ ಹೇಳಿಕೆ ಹಿಂದಿದೆಯಾ ಒಳಾರ್ಥ

Leave A Reply

Your email address will not be published.