9th-11th students Board Exam: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬಂತು ಹೊಸ ಬೋರ್ಡ್ ಎಕ್ಸಾಮ್ ! ಪರೀಕ್ಷೆ ಪ್ರಕ್ರಿಯೆ ಬಗ್ಗೆ ಇಲ್ಲಿದೆ ಮಾಹಿತಿ
Education news Karnataka Education Department Decided To Conduct Board Exam For 9th And 11th Standard Students
9th-11th students Board Exam: ಕರ್ನಾಟಕದ ಶಿಕ್ಷಣವ್ಯವಸ್ಥೆಯಲ್ಲಿ ಬೆಳವಣಿಗೆ ಹೊಂದುವ ಉದ್ದೇಶದಿಂದ, 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಎಕ್ಸಾಮ್ (Board Exam For 9th and 11th Standard Students) ನಡೆಸುವ ಚಿಂತನೆಯನ್ನು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಂತನೆ ನಡೆಸಿದೆ.
ಹೌದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (Department of School Education and Literacy) 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ (9th-11th students Board Exam) ನಡೆಸಲು ನಿರ್ಧರಿಸಿದೆ. ಮಕ್ಕಳ ಕಲಿಕಾ ದೃಷ್ಟಿಯಿಂದ ಒಂಬತ್ತನೇ ತರಗತಿ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುತ್ತದೆ. 9ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಪರೀಕ್ಷಾ ಮಂಡಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.
ಕಳೆದ ವರ್ಷ ಶಿಕ್ಷಣ ಇಲಾಖೆ 5 ಮತ್ತು 8 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಿತ್ತು. ಇದೀಗ ಪ್ರಸಕ್ತ 2023-24 ನೇ ಸಾಲಿನಲ್ಲಿ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯನ್ನು ಇಲಾಖೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುವ ಎಲ್ಲಾ ಅನುದಾನಿತ, ಸರ್ಕಾರಿ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಾರ, 9ನೇ ತರಗತಿ ಸಂಕಲನಾತ್ಮಕ ಮೌಲ್ಯಾ ಮಾಪನ ಪ್ರಶ್ನೆಯು, ಇದು ಮೊದಲಿನ ಹಾಗೆ 5 ಮತ್ತು 8 ನೇ ತರಗತಿ ಪರೀಕ್ಷೆ ನಡೆದ ತರಹ ನಡೆಯುತ್ತೆ. ಇಲ್ಲಿ ಪರೀಕ್ಷೆಯನ್ನು ಜಿಲ್ಲಾ ಹಂತದಲ್ಲೇ ಮಾಡಲಾಗುತ್ತೆ.
ಆಯಾ ಶಾಲೆಯ ಶಿಕ್ಷಕರೇ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಲಾಗುತ್ತದೆ.
ಇನ್ನು ಪ್ರಥಮ ಪಿಯು ಪರೀಕ್ಷೆಯು, ದ್ವೀತಿಯ ಪಿಯು ಪರೀಕ್ಷೆ ಹಾಗೆಯೇ ಇಲ್ಲಿಯೂ ಪರೀಕ್ಷಾ ಪ್ರಕ್ರಿಯೆ ನಡೆಯುತ್ತೆ. ಪ್ರಶ್ನೆ ಪತ್ರಿಕೆಯನ್ನು ಇಲ್ಲಿಯೂ ಕೂಡ ಪಿಯು ಬೋರ್ಡ್ದಿಂದಲೇ ಕಳುಹಿಸಲಾಗುತ್ತದೆ. ಆದರೆ ಪ್ರಥಮ ಪಿಯು ಪರೀಕ್ಷೆ ಮೌಲ್ಯಮಾಪನ ಆಯಾ ಕಾಲೇಜುಗಳಲ್ಲಿ ನಡೆಯುತ್ತೆ. ದ್ವೀತಿಯ ಪಿಯು ಪರೀಕ್ಷೆಯಲ್ಲಿ ಇರುವ ಹಾಗೇ ಮೇಲ್ವಿಚಾರಕರು ಪ್ರಥಮ ಪಿಯುಸಿಯಲ್ಲೂ ಇರುತ್ತಾರೆ. ಮೊದಲು ವಾರ್ಷಿಕವಾಗಿ ಒಂದು ಪರೀಕ್ಷೆ ನಡೆಸಲಾಗುತ್ತದೆ. ಅನುತ್ತೀರ್ಣ ಆದರೆ ಮತ್ತೊಂದು ಪೂರಕ ಪರೀಕ್ಷೆ ನಡೆಸಲಾಗುತ್ತದೆ.
ಇದನ್ನೂ ಓದಿ: ದೇಶದ ಕೃಷಿ ಕ್ಷೇತ್ರದಲ್ಲಿ ಆಗಲಿದೆ ಮಹತ್ವದ ಬೆಳವಣಿಗೆ- ಬೆಳೆ ಸಮೀಕ್ಷೆಗೆ ಸರ್ಕಾರವೇ ಮಾಡಿದೆ ಪೋರ್ಟಲ್, ಮೊಬೈಲ್ ಆಯಪ್ ಬಿಡುಗಡೆ