SSLC, PUC ವಿದ್ಯಾರ್ಥಿಗಳೇ ಗಮನಿಸಿ, ವರ್ಷಕ್ಕೆ 3 ಪರೀಕ್ಷೆ; ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಮಾರ್ಗಸೂಚಿ ಪ್ರಕಟ!

Exams : ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ (SSLC)ಮತ್ತು ದ್ವಿತೀಯ ಪಿಯುಸಿ(Second PUC)ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ವಿದ್ಯಾರ್ಥಿಗಳಿಗೆ ವರ್ಷದಲ್ಲಿ ಮೂರು ಬಾರಿ ಪರೀಕ್ಷೆ (Exams)ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಹೊಸ ತೀರ್ಮಾನ ಕೈಗೊಂಡಿದ್ದು, ಆ ಮೂರರಲ್ಲಿ ಅತಿ ಹೆಚ್ಚು ಅಂಕಗಳು(Highest Score)ಬಂದ ಫಲಿತಾಂಶ ಉಳಿಸಿಕೊಳ್ಳಬಹುದಾದ ಅವಕಾಶ ನೀಡಲು ಮುಂದಾಗಿದ್ದು, ಮಾರ್ಗಸೂಚಿ ಪ್ರಕಟಿಸಿದೆ.

 

2023-24ನೇ ಸಾಲಿನಿಂದಲೇ ಈ ವ್ಯವಸ್ಥೆ ಜಾರಿಗೆ ಬರಲಿದ್ದು, ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಒಂದೇ ವರ್ಷದಲ್ಲಿ ಮೂರು ಪರೀಕ್ಷೆಗಳನ್ನು ಬರೆಯಲು ಕೆಲ ಷರತ್ತುಗಳು ಅನ್ವಯವಾಗಲಿದೆ.ಅನುತ್ತೀರ್ಣರಾಗಿ ಮರು ಪ್ರಯತ್ನಿಸುವ ವಿದ್ಯಾರ್ಥಿಗಳಿಗೆ ಹಾಲಿ ವ್ಯವಸ್ಥೆಯನ್ನೇ ಮುಂದುವರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದೆ.ವಿದ್ಯಾರ್ಥಿಗಳಿಗೆ ಆಂತರಿಕ ಮೌಲ್ಯಮಾಪನ (ಇಂಟರ್ನಲ್ಸ್‌) ಅಂಕಗಳನ್ನು ಸರಿಯಾದ ಕ್ರಮದಲ್ಲಿ ನೀಡಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಉಪನಿರ್ದೇಶಕರು ಪರಿಶೀಲನಾ ತಂಡವನ್ನು ರಚಿಸಿಕೊಂಡು ಪ್ರತಿಯೊಂದು ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಬಹುದು.

 

# ಮೊದಲ ಬಾರಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮತ್ತು ಖಾಸಗಿ ಅಭ್ಯರ್ಥಿಗಳು ಮಾರ್ಚ್‌ನಲ್ಲಿ ನಡೆಯುವ ಪರೀಕ್ಷೆಗಳನ್ನೂ ಎಲ್ಲ ವಿಷಯಗಳಿಗೆ ಬರೆಯುವುದು ಕಡ್ಡಾಯವಾಗಿದೆ.

# ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯಗೊಳಿಸಲಾಗಿದೆ.

# ವಿದ್ಯಾರ್ಥಿಗಳಿಗೆ ನೇರವಾಗಿ ಎರಡನೇ ಇಲ್ಲವೇ ಮೂರನೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ.

# ಪ್ರತಿ ವಿದ್ಯಾರ್ಥಿಗಳಿಂದ ಒಂದು ಬಾರಿ ಮಾತ್ರ ಅಂಕಪಟ್ಟಿ ನೀಡಲು ನಿಗದಿತ ಶುಲ್ಕ ಪಡೆಯಲಾಗುತ್ತದೆ. ಎರಡನೇ ಬಾರಿಗೆ ಶುಲ್ಕ ಪಡೆಯವಂತಿಲ್ಲ.

# ಪರೀಕ್ಷೆ-1ರಲ್ಲಿ ತೇರ್ಗಡೆ ಹೊಂದಿದ ಯಾವುದೇ ವಿದ್ಯಾರ್ಥಿಗಳು 2 ಮತ್ತು 3ನೇ ಪರೀಕ್ಷೆ ತೆಗೆದುಕೊಳ್ಳಲು ಬಯಸಿದರೆ ಅಂತಹ ಸಂದರ್ಭದಲ್ಲಿ ಅವರಿಗೆ ಅಂಕಪಟ್ಟಿ ನೀಡುವಂತಿಲ್ಲ.

# ಎರಡು ಮತ್ತು ಮೂರನೇ ಪರೀಕ್ಷೆ ಬರೆದ ನಂತರ ಯಾವ ಪರೀಕ್ಷಾ ಫಲಿತಾಂಶವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿ ಬಯಸುತ್ತಾರೋ ಆ ಫಲಿತಾಂಶವನ್ನು ಒಳಗೊಂಡ ಅಂಕ ಪಟ್ಟಿಯನ್ನು ನೀಡಲು ಕ್ರಮ ಕೈಗೊಳ್ಳಬೇಕು.

# ವಿದ್ಯಾರ್ಥಿಗಳು ಅಂಕಗಳನ್ನು ಪಡೆಯುವ ಸಲುವಾಗಿ ನ್ಯಾಡ್, ಡಿಜಿ ಲಾಕರ್ ವ್ಯವಸ್ಥೆಯಲ್ಲಿ ಪರೀಕ್ಷೆಗಳು ಮುಗಿದ ನಂತರ ಅಪ್‌ಲೋಡ್ ಮಾಡಬೇಕು.

 

# ಪುನರಾವರ್ತಿತ ವಿದ್ಯಾರ್ಥಿಗಳು ಹಿಂದಿನ ಪರೀಕ್ಷೆಯಲ್ಲಿ ತಾವು ಅನುತ್ತೀರ್ಣ ವಿಷಯಗಳಿಗೆ ಈ ಮೂರರಲ್ಲಿ ಯಾವುದೇ ಪರೀಕ್ಷೆಯಲ್ಲಿ ಬೇಕಾದರೂ ಪರೀಕ್ಷೆ ಬರೆಯಬಹುದು ಇಲ್ಲವೇ ತಮ್ಮ ಹಿಂದಿನ ವರ್ಷದ ಪೂರ್ಣ ಫಲಿತಾಂಶವನ್ನೇ ರದ್ದುಪಡಿಸಿಕೊಂಡು ಹೊಸದಾಗಿಯೂ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಮಂಡಳಿ ಸೂಚಿಸಿದೆ.

Leave A Reply

Your email address will not be published.